Karnataka Weather: ಏಪ್ರಿಲ್ 27ರವರೆಗೆ ಬೆಂಗಳೂರು, ಮೈಸೂರು, ಬಾಗಲಕೋಟೆ ಸೇರಿ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ

ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಏಪ್ರಿಲ್ 27ರವರೆಗೆ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Weather: ಏಪ್ರಿಲ್ 27ರವರೆಗೆ ಬೆಂಗಳೂರು, ಮೈಸೂರು, ಬಾಗಲಕೋಟೆ ಸೇರಿ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ
ಮಳೆ
Image Credit source: The News Minute

Updated on: Apr 25, 2023 | 7:22 AM

ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಏಪ್ರಿಲ್ 27ರವರೆಗೆ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ ಬೀದರ್, ಬೆಳಗಾವಿ, ಬಾಗಲಕೋಟೆ, ರಾಯಚೂರು, ಕೊಪ್ಪಳ, ಕಲಬುರಗಿ, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ತುಮಕೂರು, ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಬಂಡೀಪುರದಲ್ಲಿ 4ಸೆಂ.ಮೀ ಮಳೆಯಾಗಿದೆ.

ಒಟ್ಟಾರೆ ಗುಡುಗು ಸಹಿತ ಮಳೆಯ ಜೊತೆಗೆ ಕೆಲ ಜಿಲ್ಲೆಗಳಲ್ಲಿ ಬಿಸಿಲಿಗೆ ಸಹ ಮುನ್ಸೂಚನೆ ವಹಿಸುವಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಯಚೂರಿನಲ್ಲಿ 40.0 ಡಿಗ್ರಿ ಸೆಲ್ಸಿಯಸ್​ ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಭಾಗಶಃ ಮೋಡಕವಿದ ವಾತಾವರಣ ಇರಲಿದೆ. ಹಗುರ ಮಳೆಯಾಗುವ ಸಾಧ್ಯತೆ ಇದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಮುಂದಿನ ವಾರ ಮಳೆಯಾಗುವ ಸಾಧ್ಯತೆಯಿಲ್ಲ. ಅಂದರೆ ಈ ಜಿಲ್ಲೆಗಳಲ್ಲಿ ಮುಂದಿನ ವಾರ ಒಣಹವೆಯೇ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮತ್ತಷ್ಟು ಓದಿ: Karnataka Weather: ಮುಂದಿನ 2 ದಿನ ಬೆಂಗಳೂರು ಸೇರಿ ರಾಜ್ಯದ 9ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಎಚ್​ಎಎಲ್​ನಲ್ಲಿ 34.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 35.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 34.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us