Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಏಪ್ರಿಲ್ 27ರ ಬಳಿಕ ಭಾರಿ ಮಳೆ

ಕರ್ನಾಟಕದಲ್ಲಿ ಮುಂದಿನ ಎರಡು ದಿನಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಕಲಬುರಗಿ, ವಿಜಯಪುರ, ಬಳ್ಳಾರಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಮಳೆಯಾಗಲಿದೆ. ಏಪ್ರಿಲ್ 27ರ ಬಳಿಕ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಏಪ್ರಿಲ್ 27ರ ಬಳಿಕ ಭಾರಿ ಮಳೆ
ಮಳೆ
Image Credit source: PTI

Updated on: Apr 25, 2025 | 7:19 AM

ಬೆಂಗಳೂರು, ಏಪ್ರಿಲ್ 25: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಏಪ್ರಿಲ್ 27ರ ಬಳಿಕ ಮಳೆ(Rain)ಯ ಪ್ರಮಾಣ ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಕಲಬುರಗಿ, ವಿಜಯಪುರ, ಬಳ್ಳಾರಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಮಳೆಯಾಗಲಿದೆ. ಏಪ್ರಿಲ್ 27ರ ಬಳಿಕ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಹುಕ್ಕೇರಿ, ಕಾರ್ಕಳ, ಬೆಳಗಾವಿ, ನಿಪ್ಪಾಣಿ, ಕಮ್ಮರಡಿ, ಆನವಟ್ಟಿ, ಜಯಪುರ, ರಾಯ್​ಭಾಗ್, ಧಾರವಾಡ, ಕಲಘಟಗಿ, ಬೈಲಹೊಂಗಲ, ಹಿಡಕಲ್, ಹುಬ್ಬಳ್ಳಿ, ಚಿಕ್ಕೋಡಿ, ನಾಪೋಕ್ಲು, ಶೃಂಗೇರಿಯಲ್ಲಿ ಮಳೆಯಾಗಿದೆ.
ಕಲಬುರಗಿಯಲ್ಲಿ 43.2 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಂಗಳೂರಿನಲ್ಲಿ ಬಿಸಿಲ ಧಗೆ ಹೆಚ್ಚಾಗಿದೆ. ಎಚ್​ಎಎಲ್​ನಲ್ಲಿ 35.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 35.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 34.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಇದನ್ನೂ ಓದಿ
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ, ಸಂಜೆ ಭಾರಿ ಮಳೆ ಸಾಧ್ಯತೆ
ಬಿಸಿಲು, ಮಳೆ, ಉರಿ ಸೆಕೆ: ಬೆಂಗಳೂರಿನ ವಾತಾವರಣಕ್ಕೆ ಜನ ಕಂಗಾಲು!
ಬೆಂಗಳೂರು ಸೇರಿ ಕರ್ನಾಟಕದ 18 ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆ
ಬೆಂಗಳೂರಿನಲ್ಲಿ ಗಾಳಿ ಸಹಿತ ಮಳೆ: ರಸ್ತೆಗಳು ಜಲಾವೃತ, ವಾಹನ ಸವಾರರ ಪರದಾಟ

ಮತ್ತಷ್ಟು ಓದಿ: Karnataka Weather: ಕರ್ನಾಟಕದಾದ್ಯಂತ ಒಣಹವೆ, ಕೆಲವೇ ಕೆಲವು ಜಿಲ್ಲೆಗಳಲ್ಲಿ ಮಳೆ

ಹೊನ್ನಾವರದಲ್ಲಿ 34.3ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 27.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 29.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 33.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿಯಲ್ಲಿ 36.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ,ಬೀದರ್​ನಲ್ಲಿ 42.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 27.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ,ವಿಜಯಪುರದಲ್ಲಿ 39.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ , ಬಾಗಲಕೋಟೆಯಲ್ಲಿ 38.5ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 36.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 38.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 43.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 33.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us