Karnataka Weather: ಹವಾಮಾನ ವರದಿ: ಡಿಸೆಂಬರ್ 9 ರಿಂದ ನಾಲ್ಕು ದಿನ ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆ
ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಡಿಸೆಂಬರ್ 9 ರಿಂದ ನಾಲ್ಕು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ,ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಮಂಜು ಮುಸುಕಿದ ವಾತಾವರಣವಿರಲಿದ್ದು, ಮಧ್ಯಾಹ್ನದಷ್ಟೊತ್ತಿಗೆ ಬಿಸಿಲು ಬರಲಿದೆ. ಚಿಕ್ಕನಹಳ್ಳಿಯಲ್ಲಿ 16.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮತ್ತಷ್ಟು ಓದಿ: Karnataka Weather: ಕರ್ನಾಟಕದಾದ್ಯಂತ ಚಳಿ ಶುರು, ಮೂರ್ನಾಲ್ಕು ದಿನಗಳ ಬಳಿಕ ಇಣುಕಿದ ಸೂರ್ಯ
ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಒಣಹವೆ ಇರಲಿದೆ.
ಎಚ್ಎಎಲ್ನಲ್ಲಿ 27.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 25.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 7:27 am, Thu, 7 December 23