Karnataka Weather Updates: ನವೆಂಬರ್ 27ರವರೆಗೆ ಬೆಂಗಳೂರು ಸೇರಿ ಕರ್ನಾಟಕದ 25ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

| Updated By: ನಯನಾ ರಾಜೀವ್

Updated on: Nov 24, 2022 | 6:00 AM

ಕರ್ನಾಟಕದ 25ಕ್ಕೂ ಅಧಿಕ ಜಿಲ್ಲೆಗಳಲ್ಲಿ ನವೆಂಬರ್ 27ರವರೆಗೂ ಮಳೆ(Rain)ಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Karnataka Weather Updates: ನವೆಂಬರ್ 27ರವರೆಗೆ ಬೆಂಗಳೂರು ಸೇರಿ ಕರ್ನಾಟಕದ 25ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
Rain
Follow us on

ಕರ್ನಾಟಕದ 25ಕ್ಕೂ ಅಧಿಕ ಜಿಲ್ಲೆಗಳಲ್ಲಿ ನವೆಂಬರ್ 27ರವರೆಗೂ ಮಳೆ(Rain)ಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.

ಮುಂದಿನ 48 ಗಂಟೆಗಳಲ್ಲಿ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ಕರಾವಳಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆ ಹಗರುದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡಕವಿದ ವಾತಾವರಣವಿರಲಿದೆ, ಹಗುರ ಮಳೆಯಾಗುವ ಸಾಧ್ಯತೆ ಇದೆ.

ಕರಾವಳಿ ಭಾಗದ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಹಾಗೂ ಮಲೆನಾಡಿನ ಭಾಗಗಳಾದ ಶಿವಮೊಗ್ಗ, ಕೊಡಗು ಮತ್ತು ಹಾಸನದ ಗುಡ್ಡಗಾಡು ಪ್ರದೇಶಗಳಲ್ಲೂ ಜೋರು ಮಳೆಯಾಗಲಿದೆ. ಅದೇ ರೀತಿ ಕರ್ನಾಟಕದ ದಕ್ಷಿಣ ಒಳನಾಡು ಭಾಗದ ಜಿಲ್ಲೆಗಳಾದ ಮಂಡ್ಯ, ರಾಮನಗರ, ಮೈಸೂರು, ತುಮಕೂರು ಹಾಗೂ ಉತ್ತರ ಕರ್ನಾಟಕದ ವಿಜಯಪುರ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಗುರುವಾರವೂ ತುಂತುರು ಮಳೆಯಾಗುವ ಸಾಧ್ಯತೆಯಿದೆ.

ಹವಾಮಾನ ಇಲಾಖೆ ಗುರುತಿಸಿದ ಈ ಜಿಲ್ಲೆಗಳ ವ್ಯಾಪ್ತಿಯಲ್ಲಿ ವ್ಯಾಪಕ ಮಳೆ ಆಗಲಿದೆ, ಉಳಿದ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಆಗಾಗ ಹಗುರ ಇಲ್ಲವೇ ತುಂತುರು ಮಳೆ ಬರಬಹುದು ಎಂದು ಅಂದಾಜಿಸಲಾಗಿದೆ. ಇದರ ಹೊರತು ಕರ್ನಾಟಕದಲ್ಲಿ ಯಾವುದೇ ಗಮನಾರ್ಹ ಬದಲಾವಣೆಗಳು ಇಲ್ಲ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ವರದಿ ಮಾಹಿತಿ ನೀಡಿದೆ.

ಬೆಂಗಳೂರಿನ ಎಚ್​ಎಎಲ್​ನಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ, 17.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 27.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕಂಪ್ಲಿ, ಮುನಿರಾಬಾದ್, ಹೊಸಪೇಟೆಯಲ್ಲಿ 1 ಸೆಂ.ಮೀ ಮಳೆಯಾಗಿದೆ.

 

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ