Karnataka Weather: ಮಾರ್ಚ್​ 31ರಿಂದ ಎರಡು ದಿನಗಳ ಕಾಲ ಶಿವಮೊಗ್ಗ, ಮೈಸೂರು ಸೇರಿ ಹಲವೆಡೆ ಮಳೆಯ ಮುನ್ಸೂಚನೆ

ಕರ್ನಾಟಕದಾದ್ಯಂತ ಒಣಹವೆ ಮುಂದುವರೆದಿದೆ, ಕೆಲವೆಡೆ ಮೋಡ ಕವಿದ ವಾತಾವರಣವಿದ್ದರೆ ಇನ್ನೂ ಕೆಲವೆಡೆ ಮಳೆಯ ಸಿಂಚನವಾಗಿದೆ. ಮಾರ್ಚ್​ 31 ರಿಂದ ಎರಡು ದಿನಗಳ ಕಾಲ 7ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Weather: ಮಾರ್ಚ್​ 31ರಿಂದ ಎರಡು ದಿನಗಳ ಕಾಲ ಶಿವಮೊಗ್ಗ, ಮೈಸೂರು ಸೇರಿ ಹಲವೆಡೆ ಮಳೆಯ ಮುನ್ಸೂಚನೆ
ಮಳೆ

Updated on: Mar 25, 2024 | 7:25 AM

ಶಿವಮೊಗ್ಗ, ಮೈಸೂರು, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಹಾಸನ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಾರ್ಚ್​ 31 ರಿಂದ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.

ಬಾಳೆಹೊನ್ನೂರು, ಲೋಂಡಾದಲ್ಲಿ ಮಳೆಯಾಗಿದೆ. ಕಲಬುರಗಿಯಲ್ಲಿ 39.3 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ, ಮಂಡ್ಯದಲ್ಲಿ 19.6 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದೆ, ಎಚ್​ಎಎಲ್​ನಲ್ಲಿ 34.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 35.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 35.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 33.1ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 35.2ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 36.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ಹಾಸನ, ಕೊಡಗು ಸೇರಿ 7ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇಂದು ಮಳೆ ಸಾಧ್ಯತೆ

ವಿಜಯಪುರದಲ್ಲಿ 37.6ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 36.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 36.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ದಾವಣಗೆರೆಯಲ್ಲಿ 37.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
Loading...
Unable to load recommendations.
Follow Us