Karnataka Rain: ಕರ್ನಾಟಕದ ದಕ್ಷಿಣ ಒಳನಾಡಿನ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ

ಕರ್ನಾಟಕದ ದಕ್ಷಿಣ ಒಳನಾಡಿನ 10ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ನವೆಂಬರ್ 25ರವರೆಗೂ ಮಳೆಯಾಗಲಿದೆ.

Karnataka Rain: ಕರ್ನಾಟಕದ ದಕ್ಷಿಣ ಒಳನಾಡಿನ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ
ಮಳೆ

Updated on: Nov 19, 2023 | 7:59 AM

ಕರ್ನಾಟಕದ ದಕ್ಷಿಣ ಒಳನಾಡಿನ 10ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ನವೆಂಬರ್ 25ರವರೆಗೂ ಮಳೆಯಾಗಲಿದೆ.

ಕರಾವಳಿಯ ದಕ್ಷಿಣ ಕನ್ನಡದಲ್ಲೂ ಮಳೆಯಾಗುವ ನಿರೀಕ್ಷೆ ಇದೆ, ಇನ್ನುಳಿದಂತೆ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ. ಪುತ್ತೂರಿನಲ್ಲಿ ಮಳೆಯಾಗಿದೆ.

ವಿಜಯಪುರದಲ್ಲಿ 15.5 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ, ಎಚ್​ಎಎಲ್​ನಲ್ಲಿ 29.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 29.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆ ಸಾಧ್ಯತೆ

ಮಿಧಿಲಿ ಚಂಡಮಾರುತವು ದುರ್ಬಲಗೊಂಡಿದೆ, ತ್ರಿಪುರಾ ಹಾಗೂ ಮಿಜೋರಾಂನಲ್ಲಿ ಶನಿವಾರ ಮಳೆಯಾಗಿರಲಿಲ್ಲ, ಆದರೆ ಒಂದು ದಿನದ ಹಿಂದೆ ಭಾರಿ ಮಳೆಯಾಗಿತ್ತು. ಚಂಡಮಾರುತವು ಅಗರ್ತಲಾದಿಂದ ಪೂರ್ವಕ್ಕೆ 50 ಕಿ.ಮೀ ದೂರದಲ್ಲಿದೆ. ಚಂಡಮಾರುತವು ಬಾಂಗ್ಲಾದೇಶದ ಕರಾವಳಿಯನ್ನು ದಾಟಿದ ಬಳಿಕ ದುರ್ಬಲವಾಗಿತ್ತು.

ಮಿಜೋರಾಂನಲ್ಲಿ ಆಕಾಶ ಶುಭ್ರವಾಗಿತ್ತು, ತ್ರಿಪುರದಲ್ಲಿ ಮೋಡಕವಿದ ವಾತಾವರಣವಿತ್ತು. ತಮಿಳುನಾಡಿನಲ್ಲಿ ಭಾರಿ ಮಳೆಯಾಗಿದೆ, ನವೆಂಬರ್ 19ರಂದು ಪೂರ್ವ ಮೇಘಾಲಯದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಇದಲ್ಲದೇ ನವೆಂಬರ್ 20ರವರೆಗೆ ತಮಿಳುನಾಡಿನ ಕರಾವಳಿ ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಇದಲ್ಲದೇ ಕೇರಳದಲ್ಲೂ ಮಳೆಯಾಗುವ ಸಾಧ್ಯತೆ ಇದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

 

 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us