ಮುಂದಿನ 48 ಗಂಟೆಗಳಲ್ಲಿ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು ಹಾಗೂ ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ, ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಒಣಹವೆ ಇತ್ತು.
ಗರಿಷ್ಠ ಉಷ್ಣಾಂಶವು ಕರಾವಳಿಯ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ರಾಯಚೂರಿನಲ್ಲಿ 40.0 ಡಿಗ್ರಿ ಸೆಲ್ಸಿಯಸ್ ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ.
ಬೆಂಗಳೂರಿನಲ್ಲಿ ಶುಭ್ರ ಆಕಾಶವಿರಲಿದೆ. ಎಚ್ಎಎಲ್ನಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 35.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 35.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಇನ್ನು ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗಲಿದೆ. ಈ ವೇಳೆ ಕರಾವಳಿ ಭಾಗದಲ್ಲಿ ಗಾಳಿಯ ವೇಗ ಸಹ ಹೆಚ್ಚಾಗುವ ಸಾಧ್ಯತೆಗಳಿವೆ.
ಹವಾಮಾನ ಇಲಾಖೆ ಏಪ್ರಿಲ್ 21ರಿಂದ ರಾಜ್ಯದಲ್ಲಿ ಮೂರು ದಿನ ವ್ಯಾಪಕ ಮಳೆಯಾಗಲಿದೆ ಎನ್ನುವ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆ ಜನರು ಎಚ್ಚರಿಕೆಯಿಂದಿರಬೇಕೆಂದು ಸೂಚನೆ ನೀಡಿದೆ.
ಮತ್ತಷ್ಟು ಓದಿ: Karnataka Weather: ವಿಜಯಪುರ, ಬೆಳಗಾವಿ ಸೇರಿದಂತೆ ರಾಜ್ಯದ ಉತ್ತರ ಒಳನಾಡಿನಲ್ಲಿ 2 ದಿನ ಮಳೆ
ಉತ್ತರ ಒಳನಾಡು ಭಾಗದಲ್ಲಿ ತಾಪಮಾನ ಕೊಂಚ ಇಳಿಕೆಯಾಗಲಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಗಳಿವೆ. ಮಲೆನಾಡು ಭಾಗದಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಹೇಳಿದೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ