Karnataka Weather: ಮುಂದಿನ 48 ಗಂಟೆಗಳಲ್ಲಿ ಬೆಂಗಳೂರು ಸೇರಿ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆ

ಕರ್ನಾಟಕದಲ್ಲಿ ಮತ್ತೆ ಮಳೆ ಶುರುವಾಗುವ ಲಕ್ಷಣಗಳು ಗೋಚರಿಸುತ್ತಿವೆ. ಬೆಂಗಳೂರು ಸೇರಿ ರಾಜ್ಯದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಡಿಸೆಂಬರ್ 18ರಿಂದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸಧ್ಯಕ್ಕೆ ರಾಜ್ಯಾದ್ಯಂತ ಚಳಿಯ ವಾತಾವರಣವಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

Karnataka Weather: ಮುಂದಿನ 48 ಗಂಟೆಗಳಲ್ಲಿ ಬೆಂಗಳೂರು ಸೇರಿ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆ
ಮಳೆ
Image Credit source: Vecteezy

Updated on: Dec 16, 2024 | 7:36 AM

ಕರ್ನಾಟಕದಲ್ಲಿ ಮತ್ತೆ ಮಳೆ ಶುರುವಾಗುವ ಲಕ್ಷಣಗಳು ಗೋಚರಿಸುತ್ತಿವೆ. ಬೆಂಗಳೂರು ಸೇರಿ ರಾಜ್ಯದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಡಿಸೆಂಬರ್ 18ರಿಂದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸಧ್ಯಕ್ಕೆ ರಾಜ್ಯಾದ್ಯಂತ ಚಳಿಯ ವಾತಾವರಣವಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಬೀದರ್​ನಲ್ಲಿ 10.2 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಅರಬ್ಬಿ ಸಮುದ್ರದಲ್ಲಿ ಚಂಡಮಾರುತ ಪರಿಚಲನೆ ಉಂಟಾಗಲಿದೆ.ಬೆಂಗಳೂರಿನಲ್ಲಿ ಚಳಿಯ ಪ್ರಮಾಣ ತುಸು ಹೆಚ್ಚಿದೆ, ಎಚ್​ಎಎಲ್​ನಲ್ಲಿ 26.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 26.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 27.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 26.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 33.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 34.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 34.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: ಬೆಂಗಳೂರಿನಲ್ಲಿ ದಟ್ಟ ಮಂಜು, ಮೈಕೊರೆವ ಚಳಿ, ಡಿ.19ರಿಂದ ಮಳೆ ಸಾಧ್ಯತೆ

ಬೀದರ್​ನಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 10.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 28.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 12.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 29.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 27.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 13.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 28.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕೊಪ್ಪಳದಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 29.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Loading...
Unable to load recommendations.
Follow Us