Karnataka Weather: ಕೊಡಗಿನಲ್ಲಿ ತಂಪೆರೆದ ಮಳೆ, ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ
ಕರ್ನಾಟಕದಾದ್ಯಂತ ಒಣಹವೆ ಮುಂದುವರೆದಿದೆ, ಕೊಡಗಿನಲ್ಲಿ ಬುಧವಾರ ಸಾಧಾರಣ ಮಳೆಯಾಗಿದೆ. ಮಾರ್ಚ್ 20ರ ನಂತರ ಮಡಿಕೇರಿಯ ಹಲವು ಕಡೆಗಳಲ್ಲಿ ಮಳೆಯಾಗುವ ಬಗ್ಗೆ ಹವಾಮಾನ ತಜ್ಞರು ಮುನ್ಸೂಚನೆ ನೀಡಿದ್ದಾರೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಗರಿಷ್ಠ ಉಷ್ಣಾಂಶ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.
ಗರಿಷ್ಠ ತಾಪಮಾನ ಏರಿಕೆಯಾಗುತ್ತಿದ್ದಂತೆ ಕೊಡಗಿನ ಹಲವೆಡೆ ಬುಧವಾರ ಸಾಧಾರಣ ಮಳೆಯಾಗಿದೆ. ಬೆಂಗಳೂರಿನಲ್ಲೂ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ. ಬುಧವಾರ ಮಧ್ಯಾಹ್ನ ಮಡಿಕೇರಿ ತಾಲೂಕಿನ ಮೂರ್ನಾಡು ಸಮೀಪದ ಕಿಗ್ಗಾಲುವಿನಲ್ಲಿ ಉತ್ತಮ ಮಳೆಯಾಗಿದೆ. ಅದಾದ ಬಳಿಕ ಕಾಕೋಟು, ಪರಂಬು ಪ್ರದೇಶಗಳಲ್ಲಿ ಕೂಡ ಸಾಧಾರಣ ಮಳೆ ಸುರಿದಿದೆ.
ಮಾರ್ಚ್ 20ರ ನಂತರ ಮಡಿಕೇರಿಯ ಹಲವು ಕಡೆಗಳಲ್ಲಿ ಮಳೆಯಾಗುವ ಬಗ್ಗೆ ಹವಾಮಾನ ತಜ್ಞರು ಮುನ್ಸೂಚನೆ ನೀಡಿದ್ದಾರೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಒಣಹವೆ ಮುಂದುವರೆಯಲಿದೆ.
ಬಾಗಲಕೋಟೆಯಲ್ಲಿ 40.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ, ಚಾಮರಾಜನಗರದಲ್ಲಿ 18.9 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್ಎಎಲ್ನಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮತ್ತಷ್ಟು ಓದಿ: India Weather: ದೆಹಲಿ, ಪಂಜಾಬ್ ಸೇರಿದಂತೆ 10ಕ್ಕೂ ಹೆಚ್ಚು ರಾಜ್ಯಗಳಲ್ಲಿ ಎರಡು ದಿನಗಳ ಕಾಲ ಮಳೆಯ ಮುನ್ಸೂಚನೆ
ಹೊನ್ನಾವರದಲ್ಲಿ 32.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 33.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಡ್ಯದಲ್ಲಿ 36.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ