Karnataka Rains: ಇಂದಿನಿಂದ ಕರ್ನಾಟಕದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಅಧಿಕ ಮಳೆ ಸಂಭವ, ರೆಡ್ ಅಲರ್ಟ್​

ಕರ್ನಾಟಕದಲ್ಲಿ ಮುಂಗಾರು ಚುರುಕುಗೊಳ್ಳುತ್ತಿದ್ದು, ಕರ್ನಾಟಕದ ಕರಾವಳಿ ಹಾಗೂ ಉತ್ತರ, ದಕ್ಷಿಣ ಒಳನಾಡಿನ ಕೆಲವೆಡೆ ಭಾರಿ ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ.

Karnataka Rains: ಇಂದಿನಿಂದ ಕರ್ನಾಟಕದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಅಧಿಕ ಮಳೆ ಸಂಭವ, ರೆಡ್ ಅಲರ್ಟ್​
ಮಳೆ
Image Credit source: Hindustan Times

Updated on: Jun 24, 2024 | 7:40 AM

ಮುಂದಿನ ಐದು ದಿನಗಳ ಕಾಲ ಕರ್ನಾಟಕದ 15ಕ್ಕೂ ಅಧಿಕ ಜಿಲ್ಲೆಗಳಲ್ಲಿ ಅಧಿಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ. ಬೆಳಗಾವಿ, ಧಾರವಾಡ, ಹಾವೇರಿ, ಚಾಮರಾಜನಗರ, ದಾವಣಗೆರೆ, ಮಂಡ್ಯ, ಮೈಸೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

ಇನ್ನುಳಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಮಳೆಯಾಗುವ ಸಾಧ್ಯತೆ ಇದೆ. ಪಣಂಬೂರು, ಭಾಲ್ಕಿ, ಮಂಗಳೂರು ವಿಮಾನ ನಿಲ್ದಾಣ, ಕೊಟ್ಟಿಗೆಹಾರ, ಉಡುಪಿ, ಸುಳ್ಯ, ಬಾದಾಮಿ, ದೇವರಹಿಪ್ಪರಗಿ, ಧರ್ಮಸ್ಥಳ, ಮಂಕಿ, ಪುತ್ತೂರು, ಅಂಕೋಲಾ, ರೋಣ, ಭಾಗಮಂಡಲ, ಆಗುಂಬೆ, ಕಾರವಾರ, ಮುಲ್ಕಿ, ಕುಂದಾಪುರ, ಬೆಳ್ತಂಗಡಿ, ಹೊನ್ನಾವರ, ಕಾರ್ಕಳ, ಉಪ್ಪಿನಂಗಡಿ, ನರಗುಂದ, ಶಾಹಪುರ, ಕುಷ್ಟಗಿ, ಲಿಂಗನಮಕ್ಕಿ, ಪೊನ್ನಂಪೇಟೆಯಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 29.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 29.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rains: ಶಿವಮೊಗ್ಗ, ಹಾಸನ, ಮೈಸೂರು ಸೇರಿ ಕರ್ನಾಟಕದ ಬಹುತೇಕ ಕಡೆ ಹೆಚ್ಚು ಮಳೆ

ಹೊನ್ನಾವರದಲ್ಲಿ 30.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 29.0ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 26.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 30.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 29.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೀದರ್​ನಲ್ಲಿ 32.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 33.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 33.6ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ 31.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 34.4ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 28.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 33.3ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Loading...
Unable to load recommendations.
Follow Us