Karnataka Weather: ರಾಜ್ಯದಲ್ಲಿ ಅ.24ರ ವರೆಗೆ ಮಳೆ, ಎಲ್ಲೆಲ್ಲಿ?

|

Updated on: Oct 20, 2023 | 8:07 AM

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಬಳ್ಳಾರಿ ಹಾಗೂ ಬಾಗಲಕೋಟೆಯಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.

Karnataka Weather: ರಾಜ್ಯದಲ್ಲಿ ಅ.24ರ ವರೆಗೆ ಮಳೆ, ಎಲ್ಲೆಲ್ಲಿ?
ಮಳೆ
Image Credit source: India.com
Follow us on

ಬೆಂಗಳೂರು, ಅ.20: ಬರದ ನಡುವೆ ವರುಣ ಕೃಪೆ ತೋರಿದ್ದು ರಾಜ್ಯದ ಹಲವು ಭಾಗಗಳಲ್ಲಿ ಅಕ್ಟೋಬರ್ 24 ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ (Karnataka Rains). ಕರಾವಳಿಯ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದ್ದು ಉತ್ತರ ಒಳನಾಡಿನಲ್ಲಿ ಒಣ ಹಬೆ ಇರುವ ಸಾಧ್ಯತೆ ಇದೆ ಎಂದು ಮುನ್ಸೂಚನೆ (IMD) ನೀಡಿದೆ.

ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಉತ್ತರ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾದ್ಯತೆ ಇದೆ. ಕೆಲ ಜಿಲ್ಲೆಗಳಲ್ಲಿ ಮೋಡ ಮುಸುಕಿದ ವಾತಾವರಣವಿರಲಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಬಳ್ಳಾರಿ ಹಾಗೂ ಬಾಗಲಕೋಟೆಯಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.

ಇದನ್ನೂ ಓದಿ: Cyclone Tej: ಮುಂಬೈಗೆ ಅಪ್ಪಳಿಸಲಿದೆ ತೇಜ್ ಚಂಡಮಾರುತ, 2 ದಿನ ನಿರ್ಣಾಯಕ ಎಂದ ಹವಾಮಾನ ಇಲಾಖೆ

ಹವಾಮಾನ ಇಲಾಖೆಯಿಂದ ಉಷ್ಣಾಂಶ ಹೆಚ್ಚಾಗುವ ಎಚ್ಚರಿಕೆ

ಗರಿಷ್ಠ ಉಷ್ಣಾಂಶಗಳು : ಕರಾವಳಿಯ ಉತ್ತರ ಕನ್ನಡ ಜಿಲ್ಲೆ, ಉಡುಪಿ ಜಿಲ್ಲೆ, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ವಿಜಯಪುರ, ಬಾಗಲಕೂಟೆ, ಕಲಬುರ್ಗಿ ಹಾಗೂ ದಕ್ಷಿಣ ಒಳನಾಡಿನ ಚಿತ್ರದುರ್ಗ, ಮಂಡ್ಯ, ಬಳ್ಳಾರಿ, ವಿಜಯನಗರ, ತುಮಕೂರು, ದಾವಣಗೆರೆ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗರಿಷ್ಠ ಉಷ್ಣಾಂಶವು ಸಾಮಾನ್ಯಕ್ಕಿಂತ 2-3 ಡಿಗ್ರಿ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ದಾವಣಗೆರೆ, ಮೈಸೂರು ತುಮಕೂರು ಜಿಲ್ಲೆಯ ಒಂದೆರಡು ಕಡೆಗಳಲ್ಲಿ 1-2 ಡಿಗ್ರಿಗಳಷ್ಟು ತಾಪಮಾನ ಹೆಚ್ಚಾಗುವ ಸಾಧ್ಯತೆಯಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ