AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather: ರಾಜ್ಯಾದ್ಯಂತ ಒಣಹವೆ, ಈ ಜಿಲ್ಲೆಗಳಲ್ಲಿ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್​​ ಹೆಚ್ಚಾಗುವ ಸಾಧ್ಯತೆ

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಇಂದು ಹಗುರ ಮಳೆಯಾಗಲಿದೆ ಎಂದು ಹವಾಮನ ಇಲಾಖೆ ತಿಳಿಸಿದೆ.

Karnataka Weather: ರಾಜ್ಯಾದ್ಯಂತ ಒಣಹವೆ, ಈ ಜಿಲ್ಲೆಗಳಲ್ಲಿ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್​​ ಹೆಚ್ಚಾಗುವ ಸಾಧ್ಯತೆ
ಸಾಂದರ್ಭಿಕ ಚಿತ್ರ
ವಿವೇಕ ಬಿರಾದಾರ
|

Updated on: Oct 21, 2023 | 7:12 AM

Share

ರಾಜ್ಯಾದ್ಯಂತ ಮುಂದಿನ ಎರಡು ವಾರಗಳ ಸಂಚಿತ ಮಳೆಯಾಗಲಿದೆ ಎಂದು ಹವಾಮನಾ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಇಂದು (ಅ.21) ಸಾಧಾರಣ ಮಳೆಯಾಗಲಿದೆ. ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಇಂದು ಒಣ ಹವೆಯಿರುವ ಸಾಧ್ಯತೆಯಿದೆ. ರಾಜ್ಯದಾದ್ಯಂತ ಇಂದು ಅಲ್ಲಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗಲಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿಯಲ್ಲಿ ಇಂದು ಹಗುರ ಮಳೆಯಾಗಲಿದೆ. ಇನ್ನು ಉತ್ತರ ಕನ್ನಡ ಜಿಲ್ಲೆಯಲ್ಲಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಗರಿಷ್ಠ ತಾಪನಾವು 2 ರಿಂದ 3 ಡಿಗ್ರಿ ಸೆಲ್ಸಿಯಸ್​​ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: ಅ.21ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ

ಉತ್ತರ ಒಳನಾಡು ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಯಲ್ಲಿ ಒಣಹವೆ ಇರಲಿದೆ. ಬಾಗಲಕೋಟೆ, ಧಾರವಾಡ, ಗದಗ, ಕೊಪ್ಪಳ, ವಿಜಯಪುರ, ಯಾದಗಿರಿ, ರಾಯಚೂರು ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ರಿಂದ 3 ಡಿಗ್ರಿ ಸೆಲ್ಸಿಯಸ್​ ಹೆಚ್ಚಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರದಲ್ಲಿ ಇಂದು ಹಗುರ ಮಳೆಯಾಗಲಿದೆ. ಇನ್ನು ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಬೀಸಲಿದೆ. ಚಿತ್ರದುರ್ಗ, ಹಾಸನ, ಮಂಡ್ಯ, ಮೈಸೂರು, ಶಿವಮೊಗ್ಗ, ಬಳ್ಳಾರಿ ಮತ್ತು ವಿಯನಗರದ ಪ್ರತ್ಯೇಕ ಸ್ಥಳಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ರಿಂದ 3 ಡಿಗ್ರಿ ಸೆಲ್ಸಿಯಸ್​ನಷ್ಟು ಜಾಸ್ತಿ ಆಗಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ರಂದೀಪ್ ಸುರ್ಜೇವಾಲಾ ಭೇಟಿಯ ನಂತರ ಕೊಂಚ ಖಿನ್ನರಾಗಿರುವ ಡಿಸಿಎಂ
ರಂದೀಪ್ ಸುರ್ಜೇವಾಲಾ ಭೇಟಿಯ ನಂತರ ಕೊಂಚ ಖಿನ್ನರಾಗಿರುವ ಡಿಸಿಎಂ
ರಾಯಚೂರು: ಕಾಂಗ್ರೆಸ್ ನಾಯಕಿ ಮನೆ ರಸ್ತೆಗೇ ಇಲ್ಲ ಕಾಂಕ್ರೀಟ್ ಭಾಗ್ಯ!
ರಾಯಚೂರು: ಕಾಂಗ್ರೆಸ್ ನಾಯಕಿ ಮನೆ ರಸ್ತೆಗೇ ಇಲ್ಲ ಕಾಂಕ್ರೀಟ್ ಭಾಗ್ಯ!
ಆತ್ಮಹತ್ಯೆಗೆ ಯತ್ನ: ನದಿಯ ನಡುಗಡ್ಡೆಯಲ್ಲಿ ಸಿಲುಕಿದ್ದ ಯುವತಿ ರಕ್ಷಣೆ
ಆತ್ಮಹತ್ಯೆಗೆ ಯತ್ನ: ನದಿಯ ನಡುಗಡ್ಡೆಯಲ್ಲಿ ಸಿಲುಕಿದ್ದ ಯುವತಿ ರಕ್ಷಣೆ
ಕಳೆದ ಶುಕ್ರವಾರ ಹಲವಾರು ಸಮಸ್ಯೆಗಳನ್ನು ಭಕ್ತರು ಟಿವಿ9 ಗಮನಕ್ಕೆ ತಂದಿದ್ದರು
ಕಳೆದ ಶುಕ್ರವಾರ ಹಲವಾರು ಸಮಸ್ಯೆಗಳನ್ನು ಭಕ್ತರು ಟಿವಿ9 ಗಮನಕ್ಕೆ ತಂದಿದ್ದರು
ಮೋದಿ ಸ್ವಾಗತಕ್ಕೆಂದು ಏರ್​​ಪೋರ್ಟ್​ಗೆ ಈ ದೇಶದ ಸಚಿವ ಸಂಪುಟವೇ ಬಂದಿತ್ತು
ಮೋದಿ ಸ್ವಾಗತಕ್ಕೆಂದು ಏರ್​​ಪೋರ್ಟ್​ಗೆ ಈ ದೇಶದ ಸಚಿವ ಸಂಪುಟವೇ ಬಂದಿತ್ತು
ಪೋರ್ಟ್​ ಆಫ್​ ಸ್ಪೇನ್​​ನಲ್ಲಿ ಭೋಜ್ಪುರಿ ಗೀತೆಯೊಂದಿಗೆ ಮೋದಿಗೆ ಸ್ವಾಗತ
ಪೋರ್ಟ್​ ಆಫ್​ ಸ್ಪೇನ್​​ನಲ್ಲಿ ಭೋಜ್ಪುರಿ ಗೀತೆಯೊಂದಿಗೆ ಮೋದಿಗೆ ಸ್ವಾಗತ
ಆಷಾಢ ಶುಕ್ರವಾರ: ಮೈಸೂರು ಚಾಮುಂಡೇಶ್ವರಿ ದರ್ಶನಕ್ಕೆ ಬರುವ ಭಕ್ತರೇ ಗಮನಿಸಿ
ಆಷಾಢ ಶುಕ್ರವಾರ: ಮೈಸೂರು ಚಾಮುಂಡೇಶ್ವರಿ ದರ್ಶನಕ್ಕೆ ಬರುವ ಭಕ್ತರೇ ಗಮನಿಸಿ
ಕನ್ನಡದಲ್ಲೇ ಮಾತು ಆರಂಭಿಸಿದ ನೀರಜ್ ಚೋಪ್ರಾ ಬೆಂಗಳೂರಿನ ಬಗ್ಗೆ ಹೇಳಿದ್ದೇನು?
ಕನ್ನಡದಲ್ಲೇ ಮಾತು ಆರಂಭಿಸಿದ ನೀರಜ್ ಚೋಪ್ರಾ ಬೆಂಗಳೂರಿನ ಬಗ್ಗೆ ಹೇಳಿದ್ದೇನು?
ಪತ್ನಿಯೊಂದಿಗೆ ಚಾಮುಂಡೇಶ್ವರಿ ತಾಯಿ ದರ್ಶನ ಪಡೆದ ನಟ ದರ್ಶನ್
ಪತ್ನಿಯೊಂದಿಗೆ ಚಾಮುಂಡೇಶ್ವರಿ ತಾಯಿ ದರ್ಶನ ಪಡೆದ ನಟ ದರ್ಶನ್
ಟ್ರಿನಿಡಾಡ್ ಮತ್ತು ಟೊಬಾಗೊ ಪ್ರಧಾನಿ ಕಮಲಾರನ್ನು ಬಿಹಾರದ ಮಗಳು
ಟ್ರಿನಿಡಾಡ್ ಮತ್ತು ಟೊಬಾಗೊ ಪ್ರಧಾನಿ ಕಮಲಾರನ್ನು ಬಿಹಾರದ ಮಗಳು