ಬೆಂಗಳೂರು: ಕರ್ನಾಟಕದ ಬಹುತೇಕ ಭಾಗಗಳ ಹವಾಮಾನ ಕಳೆದ ಹತ್ತು ಹನ್ನೆರೆಡು ದಿನಗಳಿಂದ ಮಳೆಗಾಲದಂತಾಗಿದ್ದು, ಮೇ ತಿಂಗಳ ಬಿರು ಬೇಸಿಗೆ ಮರೆಯಾಗಿದೆ. ತೌಕ್ತೆ ಚಂಡಮಾರುತದ ಪರಿಣಾಮ ಕರಾವಳಿ, ಮಲೆನಾಡು ಸೇರಿದಂತೆ ಕೆಲ ಪ್ರದೇಶಗಳಲ್ಲಿ ಭಾರೀ ಮಳೆಯಾದ ನಂತರ ಯಾಸ್ ಅಡ್ಡ ಪರಿಣಾಮವೂ ರಾಜ್ಯದ ಕೆಲವು ಭಾಗಗಳಲ್ಲಿ ಮಳೆ ಸುರಿಸಿದೆ. ಇಂದು ಕೂಡ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ವಾತಾವರಣ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆಯ ವರದಿಗಳು ತಿಳಿಸಿವೆ.
ಮಲೆನಾಡು ಭಾಗದಲ್ಲಿ ನಸುಕಿನ ವೇಳೆ ಮಳೆ ಸುರಿದು, ಈಗ ಸೂರ್ಯ ದರ್ಶನವಾಗುತ್ತಿದೆಯಾದರೂ ಆಗಸದಲ್ಲಿ ಮೋಡ ಇರುವ ಕಾರಣ ಮಧ್ಯಾಹ್ನದ ನಂತರ ದಿನನಿತ್ಯದಂತೆ ತುಸು ಮಳೆ ಸುರಿಯಬಹುದೆಂಬ ನಿರೀಕ್ಷೆ ಇದೆ. ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು ಭಾಗದಲ್ಲಿ ಚಂಡಮಾರುತದ ಪ್ರಭಾವದಿಂದಾಗಿ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಬಹುತೇಕ ಕಡೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ.
ಉತ್ತರ ಕರ್ನಾಟಕ ಭಾಗದಲ್ಲಿ ಬಿಸಿಲಿನ ತಾಪ ಕೊಂಚ ಜೋರಾಗಿಯೇ ಇರಲಿದ್ದು, ಯಾದಗಿರಿ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 38 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್, ಬೀದರ್ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 37 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ವರದಿಗಳು ತಿಳಿಸಿವೆ.
ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ಮಡಿಕೇರಿಯಲ್ಲಿ ಗರಿಷ್ಠ 25 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ 18 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್, ಶಿವಮೊಗ್ಗದಲ್ಲಿ ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್, ಮೈಸೂರಿನಲ್ಲಿ ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ಉಳಿದ ನಗರಗಳ ಗರಿಷ್ಠ ಹಾಗೂ ಕನಿಷ್ಠ ಉಷ್ಣಾಂಶ ಮಾಹಿತಿ
ಉಡುಪಿ: ಗರಿಷ್ಠ32 ಡಿಗ್ರಿ ಸೆಲ್ಸಿಯಸ್, ಕನಿಷ್ಠ 26 ಡಿಗ್ರಿ ಸೆಲ್ಸಿಯಸ್
ಮಂಗಳೂರು: ಗರಿಷ್ಠ32 ಡಿಗ್ರಿ ಸೆಲ್ಸಿಯಸ್, ಕನಿಷ್ಠ 26 ಡಿಗ್ರಿ ಸೆಲ್ಸಿಯಸ್
ಕಾರವಾರ: ಗರಿಷ್ಠ32 ಡಿಗ್ರಿ ಸೆಲ್ಸಿಯಸ್, ಕನಿಷ್ಠ 27 ಡಿಗ್ರಿ ಸೆಲ್ಸಿಯಸ್
ಬೆಳಗಾವಿ: ಗರಿಷ್ಠ30 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್
ಮಂಡ್ಯ: ಗರಿಷ್ಠ32 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್
ಹಾಸನ: ಗರಿಷ್ಠ29 ಡಿಗ್ರಿ ಸೆಲ್ಸಿಯಸ್, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್
ತುಮಕೂರು: ಗರಿಷ್ಠ 32 ಡಿಗ್ರಿ ಸೆಲ್ಸಿಯಸ್, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್
ರಾಮನಗರ: ಗರಿಷ್ಠ34 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್
ಕೋಲಾರ: ಗರಿಷ್ಠ32 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್
ಕೊಪ್ಪಳ: ಗರಿಷ್ಠ34 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್
ಕಲಬುರಗಿ: ಗರಿಷ್ಠ38 ಡಿಗ್ರಿ ಸೆಲ್ಸಿಯಸ್, ಕನಿಷ್ಠ 26 ಡಿಗ್ರಿ ಸೆಲ್ಸಿಯಸ್
ವಿಜಯಪುರ: ಗರಿಷ್ಠ36 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್
ರಾಯಚೂರು: ಗರಿಷ್ಠ 38 ಡಿಗ್ರಿ ಸೆಲ್ಸಿಯಸ್, ಕನಿಷ್ಠ 26 ಡಿಗ್ರಿ ಸೆಲ್ಸಿಯಸ್
ಬಾಗಲಕೋಟೆ: ಗರಿಷ್ಠ36 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್
ಚಾಮರಾಜನಗರ: ಗರಿಷ್ಠ32 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್
ಚಿಕ್ಕಬಳ್ಳಾಪುರ: ಗರಿಷ್ಠ36 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್
ದಾವಣಗೆರೆ: ಗರಿಷ್ಠ33 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್
ಚಿತ್ರದುರ್ಗ: ಗರಿಷ್ಠ32 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್
ಹಾವೇರಿ: ಗರಿಷ್ಠ33 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್
ಗದಗ: ಗರಿಷ್ಠ34 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್
ಇದನ್ನೂ ಓದಿ:
Cyclone Yaas ಒಡಿಶಾ ಮತ್ತು ಬಂಗಾಳದಲ್ಲಿ ನಾಶನಷ್ಟಕ್ಕೆ ಕಾರಣವಾದ ಯಾಸ್ ಚಂಡಮಾರುತ, ಜಾರ್ಖಂಡ್ನಲ್ಲಿ ಮುನ್ನೆಚ್ಚರಿಕೆ
Cyclone Yaas: ತೀವ್ರ ಸ್ವರೂಪಕ್ಕೆ ತಿರುಗಿದ ಯಾಸ್ ಚಂಡಮಾರುತ; ಒಡಿಶಾ, ಪಶ್ಚಿಮ ಬಂಗಾಳದಲ್ಲಿ ಕಟ್ಟೆಚ್ಚರ