AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather: ರಾಜ್ಯದ ಹಲವೆಡೆ ಹೆಚ್ಚಿದ ಚಳಿ, ಮುಂದಿನ ಐದು ದಿನ ಎಲ್ಲೂ ಮಳೆ ಇಲ್ಲ

ಡಿ.20ರಿಂದ ಮುಂದಿನ ಐದು ದಿನಗಳ ಕಾಲ ರಾಜ್ಯದ ಎಲ್ಲಾ ಭಾಗಗಳಲ್ಲಿ ಒಣ ಹವೆಯ ವಾತಾವರಣ ಇರಲಿದೆ. ಕರಾವಳಿ ಭಾಗದ ಮೂರು ಜಿಲ್ಲೆಗಳು, ಉತ್ತರ ಕರ್ನಾಟಕದ ಹಲವು ಭಾಗಗಳು ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಒಣ ಹವೆ ಇರಬಹುದು ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಕೇಂದ್ರವು ಮಾಹಿತಿ ನೀಡಿದೆ.

Karnataka Weather: ರಾಜ್ಯದ ಹಲವೆಡೆ ಹೆಚ್ಚಿದ ಚಳಿ, ಮುಂದಿನ ಐದು ದಿನ ಎಲ್ಲೂ ಮಳೆ ಇಲ್ಲ
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
ಆಯೇಷಾ ಬಾನು|

Updated on: Dec 20, 2023 | 7:27 AM

Share

ಬೆಂಗಳೂರು, ಡಿ.20: ರಾಜ್ಯದಲ್ಲಿ ಮಳೆ ಕಡಿಮೆಯಾಗಿ ಚಳಿಯ ಪ್ರಮಾಣ ದಿನೇ ದಿನೇ ಹೆಚ್ಚುತ್ತಿದೆ (Cold Weather). ಸದ್ಯ ಮುಂದಿನ ಐದು ದಿನಗಳ ಕಾಲ ಬೆಂಗಳೂರು, ಕರಾವಳಿ ಭಾಗದ ಜಿಲ್ಲೆಗಳು, ಉತ್ತರ ಕರ್ನಾಟಕದ ಯಾವ ಭಾಗದಲ್ಲೂ ಮಳೆ ಆಗುವ ಸಾಧ್ಯತೆಗಳಿಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ (Karnataka Weather).

ಬೆಂಗಳೂರಿನಲ್ಲಿ ಇನ್ನೂ ಕೆಲವು ದಿನ ಚಳಿಯ ವಾತಾವರಣ ಮುಂದುವರೆಯಲಿದೆ. ಇಂದು ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಬೀದರ್‌ನಲ್ಲಿ ಗರಿಷ್ಠ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ 13 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.

ನಿನ್ನೆ ವಿಜಯಪುರದಲ್ಲಿ 14.2 ಡಿಗ್ರಿ ಸೆಲ್ಸಿಯಸ್‌ ಕನಿಷ್ಠ ಉಷ್ಣಾಂಶ ಕಂಡು ಬಂದಿತ್ತು, ಬೀದರ್‌ನಲ್ಲಿ 15 ಡಿಗ್ರಿ ಸೆಲ್ಸಿಯಸ್‌, ಬಾಗಲಕೋಟೆಯಲ್ಲಿ 17.9 ಡಿಗ್ರಿ ಸೆಲ್ಸಿಯಸ್‌, ಗದಗ ಹಾಗೂ ಧಾರವಾಡದಲ್ಲಿ 18 ಡಿಗ್ರಿ ಸೆಲ್ಸಿಯಸ್‌, ಬೆಳಗಾವಿ ವಿಮಾನ ನಿಲ್ದಾಣದಲ್ಲಿ 18.6 ಡಿಗ್ರಿ ಸೆಲ್ಸಿಯಸ್‌ ಕನಿಷ್ಟ ಉಷ್ಣಾಂಶ ಕಂಡು ಬಂದಿತು. ಕಲಬುರಗಿಯಲ್ಲಿ 18.8 ಡಿಗ್ರಿ ಸೆಲ್ಸಿಯಸ್‌, ಕೊಪ್ಪಳದಲ್ಲಿ 19.2 ಡಿಗ್ರಿ ಸೆಲ್ಸಿಯಸ್‌, ಬೆಳಗಾವಿ ನಗರದಲ್ಲಿ 19.6 ಡಿಗ್ರಿ ಸೆಲ್ಸಿಯಸ್‌ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ರಾಯಚೂರಿನಲ್ಲಿ 20 ಡಿಗ್ರಿ, ಹಾವೇರಿಯಲ್ಲಿ 20.2 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ಕಂಡು ಬಂದಿತು.

ಇದನ್ನೂ ಓದಿ: ತಮಿಳುನಾಡಿನಲ್ಲಿ ಮುಂದುವರಿದ ಭಾರಿ ಮಳೆ: ಮೂವರು ಸಾವು, 4 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

5 ದಿನ ಮಳೆ ಇಲ್ಲ

ಡಿ.20ರಿಂದ ಮುಂದಿನ ಐದು ದಿನಗಳ ಕಾಲ ರಾಜ್ಯದ ಎಲ್ಲಾ ಭಾಗಗಳಲ್ಲಿ ಒಣ ಹವೆಯ ವಾತಾವರಣ ಇರಲಿದೆ. ಕರಾವಳಿ ಭಾಗದ ಮೂರು ಜಿಲ್ಲೆಗಳು, ಉತ್ತರ ಕರ್ನಾಟಕದ ಹಲವು ಭಾಗಗಳು ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಒಣ ಹವೆ ಇರಬಹುದು ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಕೇಂದ್ರವು ಮಾಹಿತಿ ನೀಡಿದೆ. ಆದರೆ ಡಿ.21 ರ ಗುರುವಾರದಂದು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಒಂದೆರಡು ಕಡೆ ಹಗುರವಾಗಿ ಮಳೆಯಾಗುವ ಸಾಧ್ಯತೆಯಿದೆ.

ಮುಂದಿನ 24 ಗಂಟೆಗಳು ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಬಹಳಷ್ಟು ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 27 ಮತ್ತು ಕನಿಷ್ಠ ಉಷ್ಣಾಂಶ 17 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!