Karnataka Weather: ಬೆಂಗಳೂರು ಸೇರಿ ರಾಜ್ಯದ ಹಲವೆಡೆ 2 ದಿನ ಮಳೆ ಸಾಧ್ಯತೆ, ಚಳಿ ಮುಂದುವರಿಕೆ

ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಚಳಿ ಹೆಚ್ಚಾಗಿದೆ. ಚಳಿಯ ವಾತಾವರಣ ಇನ್ನು ಮೂರು ದಿನಗಳ ಕಾಲ ಇರಲಿದ್ದು, ಚಳಿಯ ಜೊತಗೆ ನೆಲಗಾಳಿಯು ಹೆಚ್ಚಾಗಿದೆ.‌ ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಕೋಲಾರ, ಕೊಡಗು, ಮೈಸೂರು, ಮಂಡ್ಯ ಚಾಮರಾಜನಗರ, ಶಿವಮೊಗ್ಗ, ಹಾಸನ, ರಾಮನಗರ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

Karnataka Weather: ಬೆಂಗಳೂರು ಸೇರಿ ರಾಜ್ಯದ ಹಲವೆಡೆ 2 ದಿನ ಮಳೆ ಸಾಧ್ಯತೆ, ಚಳಿ ಮುಂದುವರಿಕೆ
ಮಳೆ
Follow us
ಆಯೇಷಾ ಬಾನು
|

Updated on: Dec 18, 2023 | 9:03 AM

ಬೆಂಗಳೂರಿನಲ್ಲಿ ಚಳಿ (Cold  Weather) ಹೆಚ್ಚಾಗಲಿದ್ದು ಮೋಡ ಕವಿದ ವಾತಾವರಣ ಇರಲಿದೆ. ಜೊತೆಗೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ 2 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ (IMD). ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ ಎಂದು ತಿಳಿಸಿದೆ (Karnataka Weather).

ಸಾಮಾನ್ಯವಾಗಿ ರಾಜ್ಯದ ಕೆಲವೆಡೆ ಮೋಡ ಕವಿದ ವಾತಾವರಣವಿರಲಿದೆ ಹಾಗೂ ಹಗುರ ಮಳೆಯಾಗುವ ಬಹಳಷ್ಟು ಸಾಧ್ಯತೆಗಳಿವೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕಿದ ವಾತಾವರಣ ಕಂಡು ಬರಲಿದೆ. ಗರಿಷ್ಠ ಉಷ್ಣಾಂಶ 26 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ.

ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಕೋಲಾರ, ಕೊಡಗು, ಮೈಸೂರು, ಮಂಡ್ಯ ಚಾಮರಾಜನಗರ, ಶಿವಮೊಗ್ಗ, ಹಾಸನ, ರಾಮನಗರ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಅದರಲ್ಲೂ ಬಾಗಲಕೋಟೆ, ಉಡುಪಿ, ರಾಯಚೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ: ಭಾರೀ ಮಳೆಗೆ ಮತ್ತೆ ತತ್ತರಿಸಿದ ತಮಿಳುನಾಡು: ಹಲವೆಡೆ ಶಾಲಾ ಕಾಲೇಜುಗಳಿಗೆ ರಜೆ

ಬೆಂಗಳೂರಿನಲ್ಲಿ ಹೆಚ್ಚಾದ ಚಳಿ

ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಚಳಿ ಹೆಚ್ಚಾಗಿದೆ. ಚಳಿಯ ವಾತಾವರಣ ಇನ್ನು ಮೂರು ದಿನಗಳ ಕಾಲ ಇರಲಿದ್ದು, ಚಳಿಯ ಜೊತಗೆ ನೆಲಗಾಳಿಯು ಹೆಚ್ಚಾಗಿದೆ.‌ ಸಾಮಾನ್ಯವಾಗಿ ಚಳಿಗಾಲ ಡಿಸೆಂಬರ್ ತಿಂಗಳ ಮೊದಲವಾರದಲ್ಲಿ ಆರಂಭವಾಗಲಿದ್ದು, ಮೊರನೇ ವಾರನೇ ಚಳಿಯು ಪ್ರಮಾಣ ಹೆಚ್ಚಾಗಿರಲಿದೆ.‌ ಇನ್ನು ಕಳೆದ ವರ್ಷಕ್ಕೆ ಹೋಲಿಕೆ ಮಾಡಿದ್ರೆ ಈ ವರ್ಷ ಕಡಿಮೆ ಚಳಿ ಇರಲಿದ್ದು ಡಿಸೆಂಬರ್ ಅಂತ್ಯ ಮತ್ತು ಜನವರಿಯಲ್ಲಿ ಮಾತ್ರ ಚಳಿ ಹೆಚ್ಚಾಗಿ ಕಂಡುಬರಲಿದೆ ಎಂದು ಹವಮಾನ ಇಲಾಖೆ ತಜ್ಞರು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಕಾರವಾರದಲ್ಲಿ ಗರಿಷ್ಠ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ 26 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ