AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather: ಬೆಳಗಾವಿ, ಕಲಬುರಗಿ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಉತ್ತರ ಕರ್ನಾಟಕ ಮತ್ತು ಕರಾವಳಿ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದೆ. ಬೆಳಗಾವಿ ಮತ್ತು ಕಲ್ಯಾಣ ಕರ್ನಾಟಕದ ಕಲಬುರಗಿ ಮತ್ತು ಬೀದರ ಜಿಲ್ಲೆ ಭಾರಿ ಮಳೆಯಾಗುತ್ತಿರುವುದರಿಂದ ಕೆಲ ಪ್ರದೇಶಗಳು ಜಲಾವೃತವಾಗಿವೆ. ಇನ್ನು ಈ ಮಳೆ ಮುಂದಿನ ಐದು ದಿನ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Weather: ಬೆಳಗಾವಿ, ಕಲಬುರಗಿ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ
ಬೆಳಗಾವಿ ಮಳೆ
ವಿವೇಕ ಬಿರಾದಾರ
|

Updated on:Jul 22, 2023 | 7:09 AM

Share

ಬೆಂಗಳೂರು ಜು.22: ರಾಜ್ಯದ ಉತ್ತರ ಕರ್ನಾಟಕ ಮತ್ತು ಕರಾವಳಿ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದೆ (Karnataka Rain). ಬೆಳಗಾವಿ (Belagavi),ಕಲಬುರಗಿ (Kalaburagi) ಮತ್ತು ಬೀದರ (Bidar) ಜಿಲ್ಲೆ ಭಾರಿ ಮಳೆಯಾಗುತ್ತಿರುವುದರಿಂದ ಕೆಲ ಪ್ರದೇಶಗಳು ಜಲಾವೃತವಾಗಿವೆ. ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದರಂತೆ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಕೆಲ ಪ್ರದೇಶಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ತಿಳಿಸಿದೆ.

ಉತ್ತರ ಒಳನಾಡು ಪ್ರದೇಶಗಳಾ ಬೆಳಗಾವಿ, ಬೀದರ, ಧಾರವಾಡ, ಕಲಬುರ್ಗಿ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ. ಉಳಿದಂತೆ ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ, ವಿಯಪುರ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಲಿದೆ. ಇನ್ನು ಗಾಳಿಯ ವೇಗವು ಘಂಟೆಗೆ 30-40 ಕಿಮೀ ಇರುವ ಸಾಧ್ಯತೆ ಇದೆ.

ಇದನ್ನೂ ಓದಿ: ಮೈದುಂಬಿ ಹರಿಯುತ್ತಿವೆ ಬೆಳಗಾವಿ ಜಿಲ್ಲೆಯ ಸಪ್ತ ನದಿಗಳು: 16 ಸೇತುವೆಗಳು ಜಲಾವೃತ, ಸ್ಥಳಕ್ಕೆ ಎಸ್​ಪಿ ಭೇಟಿ

ದಕ್ಷಿಣ ಒಳನಾಡು ಪ್ರದೇಶಗಳಾದ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಯಲ್ಲಿ ಮುಂದಿನ ಐದು ದಿನ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮನಾ ಇಲಾಖೆ ಮುನ್ಸೂಚನೆ ನೀಡಿದೆ. ಉಳಿದಂತೆ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಲಿದೆ.

ಇನ್ನು ಕರಾವಳಿ ಪ್ರದೇಶಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಮುಂದಿನ ಐದು ದಿನ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ. ಬಿರುಗಾಳಿಯು ಗಂಟೆಗೆ 40 ರಿಂದ 45 ಕಿಮೀ ವೇಗದಲ್ಲಿ ಬೀಸುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:52 am, Sat, 22 July 23

2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ