Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather: ಕಲಬುರಗಿ, ಯಾದಗಿರಿ ಜಿಲ್ಲೆಯಲ್ಲಿ ಎರಡು ದಿನ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ವಾರದ ಹಿಂದೆ ಉತ್ತರ ಕರ್ನಾಟಕದಲ್ಲಿ ಬರದ ವಾತಾವರಣ ಇತ್ತು. ಆದರೆ ವಾರದಿಂದೀಚೆಗೆ ಬೆಳಗಾವಿ, ಯಾದಗಿರಿ, ಕಲಬುರಗಿ, ಬೀದರ್ ನಲ್ಲಿ ಸುರಿಯುತ್ತಿರುವ ಮಳೆ ಈ ಭಾಗದ ಚಿತ್ರಣವನ್ನೇ ಬದಲಾಯಿಸಿದೆ. ಇದರಿಂದ ರೈತನ ಮೊಗದಲ್ಲಿ ಸಂತಸ ಮೂಡಿದೆ.

Karnataka Weather: ಕಲಬುರಗಿ, ಯಾದಗಿರಿ ಜಿಲ್ಲೆಯಲ್ಲಿ ಎರಡು ದಿನ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
ಮಳೆ
Follow us
ವಿವೇಕ ಬಿರಾದಾರ
|

Updated on: Jul 23, 2023 | 7:06 AM

ಬೆಂಗಳೂರು ಜು.23: ಕಳೆದೊಂದು ವಾರದ ಹಿಂದೆ ಉತ್ತರ ಕರ್ನಾಟಕದಲ್ಲಿ ಬರದ ವಾತಾವರಣ ಇತ್ತು. ಆದರೆ ವಾರದಿಂದೀಚೆಗೆ ಬೆಳಗಾವಿ (Belagavi), ಯಾದಗಿರಿ, ಕಲಬುರಗಿ (Kalaburagi), ಬೀದರ್ ನಲ್ಲಿ ಸುರಿಯುತ್ತಿರುವ ಮಳೆ (Rain) ಈ ಭಾಗದ ಚಿತ್ರಣವನ್ನೇ ಬದಲಾಯಿಸಿದೆ. ಜು.14ರ ನಂತರ ಮಹಾರಾಷ್ಟ್ರ ಹಾಗೂ ಬೆಳಗಾವಿ ಜಿಲ್ಲೆಯ ಪಶ್ಚಿಮಘಟ್ಟ ಭಾಗದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕೃಷ್ಣಾ, ಮಲಪ್ರಭಾ, ಘಟಪ್ರಭಾ, ವೇದ ಗಂಗಾ, ದೂದ್‌ಗಂಗಾ, ಹಿರಣ್ಯಕೇಶಿ, ಮಹದಾಯಿ ಸೇರಿ ಬಹುತೇಕ ನದಿಗಳ ನೀರಿನಮಟ್ಟ ದಿಢೀರ್ ಏರಿಕೆಯಾಗಿದೆ. ಇನ್ನು ರಾಜ್ಯದಲ್ಲಿ ಮುಂದಿನ ಐದು ದಿನ ಸಾಧಾರಣ ಮಳೆಯಾಗಲಿದೆ.

ಉತ್ತರ ಒಳನಾಡು ಜಿಲ್ಲೆಗಳಾದ ಬೆಳಗಾವಿ, ಬೀದರ, ಧಾರವಾಡ, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರಿ ಮಳೆಯಾಗಲಿದೆ. ಇನ್ನು ಉಳಿದಂತೆ ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಗಾಳಿಯ ವೇಗವು ಗಂಟೆಗೆ 30 ರಿಂದ 40 ಕಿಮೀ ಇರುವ ಸಾಧ್ಯತೆ ಇದೆ.

ಇದನ್ನೂ ಓದಿ: ಕೃಷ್ಣಾ, ವೇದಗಂಗಾ, ದೂಧ್‌ಗಂಗಾ, ಘಟಪ್ರಭಾ ನದಿಗೆ ಒಳಹರಿವು ಹೆಚ್ಚಳ ಬೆಳಗಾವಿ ಜಿಲ್ಲೆಯ 14 ಸೇತುವೆಗಳು ಮುಳುಗಡೆ

ದಕ್ಷಿಣ ಒಳನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ. ಇನ್ನು ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಗಾಳಿಯು ಗಂಟೆಗೆ 30 ರಿಂದ 40 ಕಿಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಪ್ರದೇಶಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಬಿರುಗಾಳಿ ಸಹಿತ ಮಳೆಯಾಗಲಿದೆ. ಬಿರುಗಾಳಿಯು ಗಂಟೆಗೆ 40 ರಿಂಧ 45 ಕಿಮೀ ವೇಗದಲ್ಲಿ ಬೀಸಲಿದೆ. ಈ ಹಿನ್ನೆಲೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ಮಹಾರಾಷ್ಟ್ರದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣಾ ಭೀಮಾ ಸೇರಿ ಹಲವು ನದಿಗಳ ನೀರಿನ ಮಟ್ಟ ಏರಿಕೆಯಾಗಿದ್ದು, ಪ್ರವಾಹದ ಆತಂಕ ಶುರುವಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ 14 ಸೇತುವೆ ಮುಳುಗಡೆಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ