Karnataka Weather: ರಾಜ್ಯದ ಹಲವೆಡೆ ಇಂದು ಭಾರಿ ಮಳೆ, ಕರಾವಳಿಯಲ್ಲಿ ಆರೆಂಜ್ ಅಲರ್ಟ್

|

Updated on: Jul 20, 2023 | 7:34 AM

ಬೀದರ್ ಜಿಲ್ಲೆಯ ಹಲವು ಭಾಗಗಳಲ್ಲಿ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಭಾಗದಲ್ಲಿ ಆರೆಂಜ್ ಅಲರ್ಟ್ ಘೋಷಿಸಿದ್ದು ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಸಲಾಗಿದೆ.

Karnataka Weather: ರಾಜ್ಯದ ಹಲವೆಡೆ ಇಂದು ಭಾರಿ ಮಳೆ, ಕರಾವಳಿಯಲ್ಲಿ ಆರೆಂಜ್ ಅಲರ್ಟ್
ಮಳೆ
Follow us on

ಬೆಂಗಳೂರು, ಜುಲೈ 20: ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುಂದುವರೆಯಲಿದೆ(Karnataka Rain). ಇನ್ನೂ ಮೂರು ದಿನ ಇದೇ ರೀತಿ ಬಿರುಗಾಳಿ ಸಹಿತ ಮಳೆಯಾಗಲಿದ್ದು ಆರೆಂಜ್ ಅಲರ್ಟ್ ಘೋಷಣೆ(Orange Alert) ಮಾಡಲಾಗಿದೆ. ದಕ್ಷಿಣ ಕನ್ನಡ(Dakshina Kannada), ಉಡುಪಿ(Udupi) ಜಿಲ್ಲೆ ಸೇರಿದಂತೆ ಕರಾವಳಿ ಜಿಲ್ಲೆಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಇಂದು ಉತ್ತಮ ಮಳೆಯಾಗಲಿದ್ದು ಕರಾವಳಿ ಭಾಗದಲ್ಲಿ 55 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸಲಿದೆ. ಭಾರಿ ಅಲೆಗಳು ಏಳಲಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಭಾರಿ ಮಳೆ ಹಾಘೂ ಬಿರುಗಾಳಿ ಇರುವ ಕಾರಣ ಸಮುದ್ರಕ್ಕೆ ಮೀನುಗಾರರು ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಜೊತೆಗೆ ಅಪಾಯದ ಮಟ್ಟ ಹೆಚ್ಚಿದ್ದು ಸಮುದ್ರದ ತೀರಕ್ಕೆ ತೆರಳದಂತೆ ಪ್ರವಾಸಿಗರು ಮತ್ತು ಸ್ಥಳೀಯರಿಗೂ ಸೂಚನೆ ನೀಡಲಾಗಿದೆ. ಇನ್ನು ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರದ ದೊಡ್ಮನೆ ಬಳಿ ಕಳೆದ 24 ಗಂಟೆಯಲ್ಲಿ 163 ಮಿಮೀ ಮಳೆಯಾಗಿದೆ. ಹಾಗೂ ಶಿವಮೊಗ್ಗ ಜಿಲ್ಲೆಯ ಹೊಸನಗರದ ಸುಲಗೋಡು ಎನ್ನುವಲ್ಲಿ 163 ಮಿಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಶಿವಮೊಗ್ಗ ಜಿಲ್ಲೆಯ ನಗರ, ತ್ರಿಣಿವೆ, ಹೊಸಹಳ್ಳಿ, ಕಂಡಿಕಾ, ಬಿದರಗೋಡು, ತೀರ್ಥಮತ್ತೂರು, ಹೊನ್ನೆತಾಲು, ಉತ್ತರ ಕನ್ನಡ ಜಿಲ್ಲೆಯ ದೊಡ್ಮನೆ, ರಾಮನಗರ, ಹಲಗೇರಿ, ಕದ್ರ, ಬೆಳಗಾವಿ ಜಿಲ್ಲೆಯ ಅಮಟೆ, ಮೊಹಿಸೆಟ್, ನೆರಸೆ, ಕಸಬ, ನಂದಗಡ ಸೇರಿದಂತೆ ಹಲವು ಭಾಗಗಳಲ್ಲಿ ಉತ್ತಮ ಮಳೆಯಾಗಿದೆ.

ಇದನ್ನೂ ಓದಿ: Karnataka Dam Water Level: ಜು.20ರ ಕರ್ನಾಟಕದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಇಲ್ಲಿದೆ

ಬೀದರ್ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಬೀದರ್ ಜಿಲ್ಲೆಯ ಹಲವು ಭಾಗಗಳಲ್ಲಿ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕಲಬುರಗಿ, ವಿಜಯಪುರ, ಯಾದಗಿರಿ ರಾಯಚೂರು, ಗದಗ, ಧಾರವಾಡ, ಹಾವೇರಿ, ದಾವಣೆಗೆರೆ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ತುಮಕೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ, ಮಂಡ್ಯ, ಮೈಸೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ವಿಜಯನಗರ, ರಾಯಚೂರು ಜಿಲ್ಲೆಗಳ ಹಲವು ಭಾಗಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ