Karnataka Rains: ಕರ್ನಾಟಕದ 12 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ, ಹಲವೆಡೆ ಒಣಹವೆ

ಮುಂದಿನ ಮೂರು ದಿನಗಳ ಕಾಲ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

Karnataka Rains: ಕರ್ನಾಟಕದ 12 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ, ಹಲವೆಡೆ ಒಣಹವೆ
ಮಳೆ
Image Credit source: Vecteezy

Updated on: Oct 09, 2024 | 7:42 AM

ಕರ್ನಾಟಕದ 12 ಜಿಲ್ಲೆಗಳನ್ನು ಹೊರತುಪಡಿಸಿ ಉಳಿದೆಲ್ಲಾ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ವಿಜಯನಗರ, ಮೈಸೂರು, ಮಂಡ್ಯ, ಹಾಸನ, ದಾವಣಗೆರೆ, ಚಿತ್ರದುರ್ಗ, ಯಾದಗಿರಿ, ವಿಜಯನಗರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿಯಲ್ಲಿ ಸಾಧಾರಣ ಮಳೆಯಾಗಲಿದ್ದು, ಬಹುತೇಕ ಕಡೆ ಒಣಹವೆ ಇರಲಿದೆ.

ಕುಂದಾಪುರ, ಎಂಎಂ ಹಿಲ್ಸ್​, ಧರ್ಮಸ್ಥಳ, ಬೆಳ್ತಂಗಡಿ, ಕೋಟ, ಸಿದ್ದಾಪುರ, ಉಡುಪಿ, ಮಂಕಿ, ಕಮ್ಮರಡಿ, ಗೋಕರ್ಣ, ಕಾರ್ಕಳ, ಕದ್ರಾ, ಗೇರುಸೊಪ್ಪ, ಕ್ಯಾಸಲ್​ರಾಕ್, ಆಗುಂಬೆ, ಚಾಮರಾಜನಗರ, ಕಾರವಾರ, ಬೇಲಿಕೇರಿ, ಶಿರಾಲಿ, ಗಂಗಾವತಿ, ಕಳಸ, ಚಿಕ್ಕಮಗಳೂರು, ತ್ಯಾಗರ್ತಿ, ಕಡೂರು, ಕೋಲಾರದಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: ಕೊಡಗು, ಚಿಕ್ಕಮಗಳೂರು ಸೇರಿ ಕರ್ನಾಟಕದ 12 ಜಿಲ್ಲೆಗಳಲ್ಲಿ ಮುಂದಿನ 3 ದಿನ ಮಳೆ

ಕಾರವಾರದಲ್ಲಿ 34.6 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಬೆಳಗ್ಗೆಯಿಂದ ಶುಭ್ರ ಆಕಾಶವಿದ್ದು, ಬಿಸಿಲಿದೆ, ಸಂಜೆ ವೇಳೆ ಮಳೆಯಾಗುವ ಸಾಧ್ಯತೆ ಇದೆ.
ಎಚ್​ಎಎಲ್​ನಲ್ಲಿ 29.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 29.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.0ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 32.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 35.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 31.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 33.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೀದರ್​ನಲ್ಲಿ 31.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 30.5ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 33.6ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 31.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಗದಗದಲ್ಲಿ 31.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 33.6ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 28.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 32.2ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
Loading...
Unable to load recommendations.
Follow Us