Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather: ಹವಾಮಾನ ವರದಿ – ಮೋಡ ಕವಿದ ವಾತಾವರಣ, ಕೆಲವೆಡೆ ಮಳೆ ಸಾಧ್ಯತೆ

Weather Today: ಕರ್ನಾಟಕದ ಕೆಲವೆಡೆ ಮಳೆ ಬಂದರೂ ಉತ್ತರ ಕರ್ನಾಟಕ ಭಾಗದಲ್ಲಿ ಮಧ್ಯಾಹ್ನದ ವೇಳೆಗೆ ಬಿಸಿಲಿನ ತಾಪ ಏರಿಕೆಯಾಗಬಹುದು ಎಂದು ಅಂದಾಜಿಸಲಾಗಿದೆ. ಯಾದಗಿರಿ, ಕಲಬುರಗಿ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 38 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ.

Karnataka Weather: ಹವಾಮಾನ ವರದಿ - ಮೋಡ ಕವಿದ ವಾತಾವರಣ, ಕೆಲವೆಡೆ ಮಳೆ ಸಾಧ್ಯತೆ
ಹವಾಮಾನ ವರದಿ
Follow us
Skanda
|

Updated on: May 21, 2021 | 10:06 AM

ಬೆಂಗಳೂರು: ತೌಕ್ತೆ ಚಂಡಮಾರುತದ ನಂತರ ಕರ್ನಾಟಕದ ಹಲವು ಭಾಗಗಳಲ್ಲಿ ಪ್ರತಿನಿತ್ಯ ಒಂದಲ್ಲಾ ಒಂದು ಹೊತ್ತಿನಲ್ಲಿ ಮಳೆ ಸುರಿಯುತ್ತಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯವ್ಯಾಪಿ ಲೆಕ್ಕಾಚಾರದಲ್ಲಿ ಮಳೆ ಪ್ರಮಾಣ ಕಡಿಮೆ ಆಗಿದೆಯಾದರೂ ಮಲೆನಾಡು, ಕರಾವಳಿ ಭಾಗದಲ್ಲಿ ಮೋಡ ಕವಿದ ವಾತಾವರಣ ಹಾಗೂ ತಂಪು ಹವೆಯ ಪರಿಣಾಮ ಮಳೆಗಾಲದ ವಾತಾವರಣದಂತೆಯೇ ಪರಿಸರ ಕಾಣಿಸುತ್ತಿದೆ. ಇಂದು (ಮೇ 21) ಸಹ ಕರ್ನಾಟಕ, ಗೋವಾ, ತಮಿಳುನಾಡು ಹಾಗೂ ಲಕ್ಷದ್ವೀಪ ಭಾಗಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ವರದಿಗಳು ತಿಳಿಸಿವೆ.

ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ಭಾರೀ ಮಳೆ ಸುರಿಯುವ ನಿರೀಕ್ಷೆಯಿದ್ದು, ಅರುಣಾಚಲ ಪ್ರದೇಶ ಭಾಗದಲ್ಲೂ ಸಾಧಾರಣದಿಂದ ಉತ್ತಮ ಮಳೆ ಸುರಿಯಲಿದೆ. ಅದೇರೀತಿ ಪಶ್ಚಿಮ ಬಂಗಾಳ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಝೋರಾಂ, ತ್ರಿಪುರಾ ಮತ್ತು ಕೇರಳ ಪ್ರಾಂತ್ಯಗಳಲ್ಲೂ ಉತ್ತಮ ಮಳೆ ಸುರಿಯುವ ಸಂಭವವಿದೆ ಎಂದು ತಜ್ಞರು ಅಂದಾಜಿಸಿದ್ದಾರೆ. ಉತ್ತರಾಖಂಡ, ಪಶ್ಚಿಮ ಬಂಗಾಳದ ಕೆಲ ಭಾಗ, ಒಡಿಶಾ ಮತ್ತು ಆಂಧ್ರಪ್ರದೇಶದಲ್ಲಿ ತುಂತುರು ಮಳೆ ಸುರಿಯಬಹುದಾಗಿದ್ದು, ಲಡಾಖ್, ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಬಿಹಾರ, ಜಾರ್ಖಂಡ್, ಮಹಾರಾಷ್ಟ್ರ ಹಾಗೂ ತೆಲಂಗಾಣದ ಒಂದಷ್ಟು ಪ್ರದೇಶಗಳಲ್ಲೂ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಎಂದೆನ್ನಲಾಗಿದೆ. ಏತನ್ಮಧ್ಯೆ ರಾಜಸ್ಥಾನದ ಪಶ್ಚಿಮ ಭಾಗದಲ್ಲಿ ಹಾಗೂ ಗುಜರಾತ್ ರಾಜ್ಯದ ಪಶ್ಚಿಮ ಪ್ರದೇಶದಲ್ಲಿ ಗರಿಷ್ಠ ಉಷ್ಣಾಂಶ 40ಡಿಗ್ರಿ ಸೆಲ್ಸಿಯಸ್ ದಾಟಲಿದೆ ಎಂಬುದನ್ನೂ ವರದಿಗಳು ತಿಳಿಸಿವೆ.

ಕರ್ನಾಟಕದ ಕೆಲವೆಡೆ ಮಳೆ ಬಂದರೂ ಉತ್ತರ ಕರ್ನಾಟಕ ಭಾಗದಲ್ಲಿ ಮಧ್ಯಾಹ್ನದ ವೇಳೆಗೆ ಬಿಸಿಲಿನ ತಾಪ ಏರಿಕೆಯಾಗಬಹುದು ಎಂದು ಅಂದಾಜಿಸಲಾಗಿದೆ. ಯಾದಗಿರಿ, ಕಲಬುರಗಿ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 38 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ. ರಾಯಚೂರು ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 37 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ವರದಿಗಳು ತಿಳಿಸಿವೆ.

ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ಮಡಿಕೇರಿಯಲ್ಲಿ ಗರಿಷ್ಠ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ 18 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್, ಶಿವಮೊಗ್ಗದಲ್ಲಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್, ಮೈಸೂರಿನಲ್ಲಿ ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ಉಳಿದ ನಗರಗಳ ಗರಿಷ್ಠ ಹಾಗೂ ಕನಿಷ್ಠ ಉಷ್ಣಾಂಶ ಮಾಹಿತಿ ಮಂಗಳೂರು: ಗರಿಷ್ಠ29 ಡಿಗ್ರಿ ಸೆಲ್ಸಿಯಸ್, ಕನಿಷ್ಠ 25 ಡಿಗ್ರಿ ಸೆಲ್ಸಿಯಸ್ ಉಡುಪಿ: ಗರಿಷ್ಠ29 ಡಿಗ್ರಿ ಸೆಲ್ಸಿಯಸ್, ಕನಿಷ್ಠ 25 ಡಿಗ್ರಿ ಸೆಲ್ಸಿಯಸ್ ಕಾರವಾರ: ಗರಿಷ್ಠ29 ಡಿಗ್ರಿ ಸೆಲ್ಸಿಯಸ್, ಕನಿಷ್ಠ 25 ಡಿಗ್ರಿ ಸೆಲ್ಸಿಯಸ್ ಬೆಳಗಾವಿ: ಗರಿಷ್ಠ29 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ಮಂಡ್ಯ: ಗರಿಷ್ಠ31 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ಹಾಸನ: ಗರಿಷ್ಠ28 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ರಾಮನಗರ: ಗರಿಷ್ಠ31 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ಕೋಲಾರ: ಗರಿಷ್ಠ29 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತುಮಕೂರು: ಗರಿಷ್ಠ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ಕೊಪ್ಪಳ: ಗರಿಷ್ಠ33 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ವಿಜಯಪುರ: ಗರಿಷ್ಠ28 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ಬೀದರ್: ಗರಿಷ್ಠ 37 ಡಿಗ್ರಿ ಸೆಲ್ಸಿಯಸ್, ಕನಿಷ್ಠ 26 ಡಿಗ್ರಿ ಸೆಲ್ಸಿಯಸ್ ಬಾಗಲಕೋಟೆ: ಗರಿಷ್ಠ34 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ಚಾಮರಾಜನಗರ: ಗರಿಷ್ಠ30 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ದಾವಣಗೆರೆ: ಗರಿಷ್ಠ31 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ಚಿತ್ರದುರ್ಗ: ಗರಿಷ್ಠ29 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ಹಾವೇರಿ: ಗರಿಷ್ಠ32 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ಗದಗ: ಗರಿಷ್ಠ32 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ಚಿಕ್ಕಬಳ್ಳಾಪುರ: ಗರಿಷ್ಠ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್

ಇದನ್ನೂ ಓದಿ: Monsoon 2021: ಅವಧಿಗೂ ಮುನ್ನವೇ ಮುಂಗಾರು ಪ್ರವೇಶ; ಚಂಡಮಾರುತದ ಬೆನ್ನಲ್ಲೇ ಮಳೆಗಾಲ ಶುರುವಾಗುವ ಸಾಧ್ಯತೆ

ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?
ರಿಷಬ್ ಶೆಟ್ಟಿ ಭೇಟಿ ನೀಡಿದ ವಾರಾಹಿ ಪಂಜುರ್ಲಿ ಕ್ಷೇತ್ರ ಹೇಗಿದೆ ನೋಡಿ..
ರಿಷಬ್ ಶೆಟ್ಟಿ ಭೇಟಿ ನೀಡಿದ ವಾರಾಹಿ ಪಂಜುರ್ಲಿ ಕ್ಷೇತ್ರ ಹೇಗಿದೆ ನೋಡಿ..
ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ನಡುವೆ ಅಸಮಾಧಾನಗಳಿವೆಯಾ?
ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ನಡುವೆ ಅಸಮಾಧಾನಗಳಿವೆಯಾ?
ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಕೆಟ್ಟ ಐಸಿಯು ಎಸಿ: ರೋಗಿಗಳು ಬೇರೆಡೆ ಶಿಫ್ಟ್
ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಕೆಟ್ಟ ಐಸಿಯು ಎಸಿ: ರೋಗಿಗಳು ಬೇರೆಡೆ ಶಿಫ್ಟ್
ಬ್ಯಾಗ್ ಕದಿಯಲು ಬಂದವಗೆ ಒಳ್ಳೆ ರಿಪ್ಲೇ ಕೊಟ್ಟ ಯುವತಿ
ಬ್ಯಾಗ್ ಕದಿಯಲು ಬಂದವಗೆ ಒಳ್ಳೆ ರಿಪ್ಲೇ ಕೊಟ್ಟ ಯುವತಿ
ರಾಣಿ ಚೆನ್ನಮ್ಮ ಹೆಸರಲ್ಲೂ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸಲಿ: ಸ್ವಾಮೀಜಿ
ರಾಣಿ ಚೆನ್ನಮ್ಮ ಹೆಸರಲ್ಲೂ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸಲಿ: ಸ್ವಾಮೀಜಿ
ಚ್ಯಾನೆಲ್​ಗಳಲ್ಲಿ ವರದಿ ಬಿತ್ತರವಾದಾಗ ಮಾತ್ರ ಅಧಿಕಾರಿಗಳು ಬಂದು ಹೋಗುತ್ತಾರೆ
ಚ್ಯಾನೆಲ್​ಗಳಲ್ಲಿ ವರದಿ ಬಿತ್ತರವಾದಾಗ ಮಾತ್ರ ಅಧಿಕಾರಿಗಳು ಬಂದು ಹೋಗುತ್ತಾರೆ
ಬೋರ್​ ವೆಲ್ ಇದ್ದರೂ ದುಬಾರಿ ಟ್ಯಾಂಕರ್ ನೀರು ಬಳಸುವ ಅನಿವಾರ್ಯತೆ
ಬೋರ್​ ವೆಲ್ ಇದ್ದರೂ ದುಬಾರಿ ಟ್ಯಾಂಕರ್ ನೀರು ಬಳಸುವ ಅನಿವಾರ್ಯತೆ
ಮುಂದಿನ ಸಿಎಂ ಬಗ್ಗೆ ಕೋಡಿಮಠ ಶ್ರೀ ಮಹತ್ವದ ಮಾತು
ಮುಂದಿನ ಸಿಎಂ ಬಗ್ಗೆ ಕೋಡಿಮಠ ಶ್ರೀ ಮಹತ್ವದ ಮಾತು
ನಿನ್ನ ಕೆಲಸ ಹಾಳು ಮಾಡಲು ಸಂಚು ನಡೆದಿದೆ; ರಿಷಬ್ ಶೆಟ್ಟಿ​ಗೆ ದೈವದ ಎಚ್ಚರಿಕೆ
ನಿನ್ನ ಕೆಲಸ ಹಾಳು ಮಾಡಲು ಸಂಚು ನಡೆದಿದೆ; ರಿಷಬ್ ಶೆಟ್ಟಿ​ಗೆ ದೈವದ ಎಚ್ಚರಿಕೆ