ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಂಭವವಿದ್ದು ರಾಜ್ಯದ ಬಹುತೇಕ ಕಡೆ ಮೋಡ ಕವಿದ ವಾತಾವರಣ ಇರಲಿದೆ. ಹಾಗೂ ಕರಾವಳಿ ಜಿಲ್ಲೆಗಳಾದ ಉಡುಪಿ, ಮಂಗಳೂರು, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಅಲರ್ಟ್ ಘೋಷಿಸಿದೆ.
ಶುಕ್ರವಾರ, ಸಂಜೆ 5.30 ರವರೆಗೆ ಬೆಂಗಳೂರಿನಲ್ಲಿ 21 ಎಂಎಂ ಮಳೆಯಾಗಿದ್ದು, ಎಚ್‌ಎಎಲ್ ವಿಮಾನ ನಿಲ್ದಾಣದಲ್ಲಿ 22.8 ಮಿ.ಮೀ ಮಳೆಯಾಗಿದೆ. ಸಂಜೆ 7 ಗಂಟೆಯವರೆಗೆ ಬಿಬಿಎಂಪಿ ಕೊಠಡಿಯಿಂದ ಮಳೆಯಿಂದಾದ ದುರಂತದ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ. ಇಂದು ಕೂಡ ಇದೇ ರೀತಿ ಮಳೆಯಾಗುವ ಸಾಧ್ಯತೆ ಇದ್ದು ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ಯಾದಗಿರಿಯಲ್ಲಿ ಗರಿಷ್ಠ ಉಷ್ಣಾಂಶ 39 ಡಿಗ್ರಿ ಸೆಲ್ಸಿಯಸ್ ಇರಲಿದ್ದು ಕನಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದೆ. ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ 38 ಡಿಗ್ರಿ ಸೆಲ್ಸಿಯಸ್ ಇರಲಿದ್ದು ಕನಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದೆ ಮತ್ತು ಮಡಿಕೇರಿಯಲ್ಲಿ ಗರಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು ಕನಿಷ್ಠ ಉಷ್ಣಾಂಶ 17 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಉಳಿದ ನಗರಗಳ ಗರಿಷ್ಠ ಹಾಗೂ ಕನಿಷ್ಠ ಉಷ್ಣಾಂಶ ಮಾಹಿತಿ
ಮಂಗಳೂರು: ಗರಿಷ್ಠ31 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್
ಉಡುಪಿ: ಗರಿಷ್ಠ31 ಡಿಗ್ರಿ ಸೆಲ್ಸಿಯಸ್, ಕನಿಷ್ಠ 25 ಡಿಗ್ರಿ ಸೆಲ್ಸಿಯಸ್
ಕಾರವಾರ: ಗರಿಷ್ಠ31 ಡಿಗ್ರಿ ಸೆಲ್ಸಿಯಸ್, ಕನಿಷ್ಠ 26 ಡಿಗ್ರಿ ಸೆಲ್ಸಿಯಸ್
ಬೆಳಗಾವಿ: ಗರಿಷ್ಠ30 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್
ಮಂಡ್ಯ: ಗರಿಷ್ಠ33 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್
ಹಾಸನ: ಗರಿಷ್ಠ30 ಡಿಗ್ರಿ ಸೆಲ್ಸಿಯಸ್, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್
ರಾಮನಗರ: ಗರಿಷ್ಠ34 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್
ಕೋಲಾರ: ಗರಿಷ್ಠ32 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್
ತುಮಕೂರು: ಗರಿಷ್ಠ31 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್
ಕೊಪ್ಪಳ: ಗರಿಷ್ಠ35 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್
ವಿಜಯಪುರ: ಗರಿಷ್ಠ35 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್
ಬೀದರ್: ಗರಿಷ್ಠ 37 ಡಿಗ್ರಿ ಸೆಲ್ಸಿಯಸ್, ಕನಿಷ್ಠ 26 ಡಿಗ್ರಿ ಸೆಲ್ಸಿಯಸ್
ಬಾಗಲಕೋಟೆ: ಗರಿಷ್ಠ35 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್
ಚಾಮರಾಜನಗರ: ಗರಿಷ್ಠ32 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್
ದಾವಣಗೆರೆ: ಗರಿಷ್ಠ33 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್
ಚಿತ್ರದುರ್ಗ: ಗರಿಷ್ಠ32 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್
ಹಾವೇರಿ: ಗರಿಷ್ಠ33 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್
ಗದಗ: ಗರಿಷ್ಠ34 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್
ಚಿಕ್ಕಬಳ್ಳಾಪುರ: ಗರಿಷ್ಠ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್
ಇದನ್ನೂ ಓದಿ: Karnataka Weather: ಹವಾಮಾನ ವರದಿ – ಮೋಡ ಕವಿದ ವಾತಾವರಣ, ಕೆಲವೆಡೆ ಮಳೆ ಸಾಧ್ಯತೆ