ಬೆಂಗಳೂರು, ಸೆ.21: ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆ ಕರ್ನಾಟಕದ ಬಹುತೇಕ ಪ್ರಮುಖ ಜಲಾಶಯಗಳು ಬತ್ತಿ ಹೋಗಿವೆ. ಸದ್ಯ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 27ರವರೆಗೆ ಮಳೆಯಾಗಲಿದೆ(Karnataka Rain) ಎಂದು ಹವಾಮಾನ ಇಲಾಖೆ(Indian Meteorological Department) ಮುನ್ಸೂಚನೆ ನೀಡಿದೆ. ಮತ್ತೊಂದೆಡೆ ಬೆಂಗಳೂರಿನಲ್ಲಿ ಇಂದು ಕೂಡ ಮೋಡ ಕವಿದ ವಾತಾವರಣ ಇರಲಿದ್ದು, ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ/ರಾತ್ರಿ ವೇಳೆಗೆ ಹಗುರ ಸಾಧಾರಣ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 30 ಮತುು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದನ್ನೂ ಓದಿ:ಬೆಂಗಳೂರಿನ ಈ ಏರಿಯಾಗಳಲ್ಲಿ ಇಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ: ಎಲ್ಲೆಲ್ಲಿ?
ಇನ್ನು ಕರಾವಳಿ ಮತ್ತು ಒಳನಾಡಿನ ಹಲವೆಡೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಅದರಲ್ಲೂ ಮುಂದಿನ 24 ಗಂಟೆಗಳು ಕರಾವಳಿಯ ಬಹುತೇಕ ಕಡೆಗಳಲ್ಲಿ ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.
ರಾಜ್ಯದ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದೆ. ಒಳನಾಡಿನಲ್ಲಿ ಬಿರುಗಾಳಿಯ ವೇಗವು ಘಂಟೆಗೆ 30-40 ಕಿ.ಮೀ. ಇರುವ ಸಾಧ್ಯತೆ ಇದೆ. ಮುಂದಿನ 48 ಘಂಟೆಗಳು ಕರಾವಳಿಯ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಬಿರುಗಾಳಿಯ ವೇಗವು ಘಂಟೆಗೆ 30-40 ಕಿ.ಮೀ. ಇರುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾಧ್ಯತೆ ಇದ್ದು ಬಿರುಗಾಳಿಯ ವೇಗವು ಘಂಟೆಗೆ 30-40 ಕಿ.ಮೀ. ಇರುವ ಸಾಧ್ಯತೆ ಇದೆ.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ