ಹವಾಮಾನ ವರದಿ – ಜೂನ್ 4ರ ತನಕ ರಾಜ್ಯಾದ್ಯಂತ ಗುಡುಗು ಸಹಿತ ಮಳೆ ಸಂಭವ; ಮತ್ತೆರೆಡು ದಿನದಲ್ಲಿ ಮುಂಗಾರು ಆರಂಭ
Weather Today: ಈಗ ಅರಬ್ಬಿ ಸಮುದ್ರದ ನಡುವಲ್ಲಿ ಮೇಲ್ಮೈ ಸುಳಿಗಾಳಿ ತೀವ್ರವಾಗಿರುವುದರಿಂದ ಕರ್ನಾಟಕದ ಕೆಲ ಭಾಗಗಳಲ್ಲಿ ನಿನ್ನೆಯಿಂದ ಮತ್ತೆ ಮಳೆಯಾಗುತ್ತಿದೆ. ಹವಾಮಾನ ವರದಿಗಳ ಪ್ರಕಾರ ಜೂನ್ 4ರ ತನಕವೂ ರಾಜ್ಯಾದ್ಯಂತ ಗುಡುಗು ಸಹಿತ ಮಳೆ ಮುಂದುವರೆಯುವ ಸಾಧ್ಯತೆ ದಟ್ಟವಾಗಿದೆ.
ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಆರಂಭಕ್ಕೆ ದಿನಗಣನೆ ಶುರುವಾಗಿದೆ. ಕೇರಳಕ್ಕೆ ಜೂನ್ 3ರಂದು ಮುಂಗಾರು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದ್ದು, ಅದಾದ 3ರಿಂದ 4ದಿನಗಳ ಅಂತರದಲ್ಲಿ ಕರ್ನಾಟಕಕ್ಕೆ ಮುಂಗಾರು ಕಾಲಿಡುವ ಸಾಧ್ಯತೆ ಇದೆ. ತೌಕ್ತೆ ಚಂಡಮಾರುತದ ಪರಿಣಾಮ ಕರಾವಳಿ, ಮಲೆನಾಡು ಸೇರಿದಂತೆ ಕೆಲ ಪ್ರದೇಶಗಳಲ್ಲಿ ಭಾರೀ ಮಳೆಯಾದ ನಂತರ ಯಾಸ್ ಅಡ್ಡ ಪರಿಣಾಮವೂ ರಾಜ್ಯದ ಕೆಲವು ಭಾಗಗಳಲ್ಲಿ ಮಳೆ ಸುರಿಸಿರುವುದರಿಂದ ಈಗಾಗಲೇ ಭೂಮಿ ತಕ್ಕಮಟ್ಟಿಗೆ ಹದಗೊಂಡಿದೆ. ಈಗ ಅರಬ್ಬಿ ಸಮುದ್ರದ ನಡುವಲ್ಲಿ ಮೇಲ್ಮೈ ಸುಳಿಗಾಳಿ ತೀವ್ರವಾಗಿರುವುದರಿಂದ ಕರ್ನಾಟಕದ ಕೆಲ ಭಾಗಗಳಲ್ಲಿ ನಿನ್ನೆಯಿಂದ (ಜೂನ್ 1) ಮತ್ತೆ ಮಳೆಯಾಗುತ್ತಿದೆ.
ಹವಾಮಾನ ವರದಿಗಳ ಪ್ರಕಾರ ಜೂನ್ 4ರ ತನಕವೂ ರಾಜ್ಯಾದ್ಯಂತ ಗುಡುಗು ಸಹಿತ ಮಳೆ ಮುಂದುವರೆಯುವ ಸಾಧ್ಯತೆ ದಟ್ಟವಾಗಿದೆ. ಅದರ ಪರಿಣಾಮವಾಗಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಚಿತ್ರದುರ್ಗ, ಕೊಡಗು, ಬೀದರ್, ಗದಗ, ಬೆಂಗಳೂರು ನಗರ. ಬೆಂಗಳೂರು ಗ್ರಾಮಾಂತರ, ಕೋಲಾರ ಜಿಲ್ಲೆಗಳಲ್ಲಿ ಇಂದಿನಿಂದ ಜೂನ್ 4ರವರೆಗೆ ಯೆಲ್ಲೋ ಅಲರ್ಟ್ ಘೋಷನೆ ಮಾಡಲಾಗಿದೆ.
ಮಲೆನಾಡು ಸೇರಿದಂತೆ ಕೆಲ ಪ್ರದೇಶಗಳಲ್ಲಿ ಮೇ ತಿಂಗಳ ವಾತಾವರಣವೇ ಹೆಚ್ಚೂಕಡಿಮೆ ಮಳೆಗಾಲದಂತೆ ಆಗಿತ್ತು. ಇದೀಗ ಮುಂಗಾರು ಪ್ರವೇಶವೂ ಸನಿಹವಾಗಿರುವುದರಿಂದ ಮಳೆಗಾಲದ ಕಾರ್ಯಗಳಿಗೆ ಜನರು ಲಾಕ್ಡೌನ್ ನಡುವೆಯೇ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಲೆಕ್ಕಾಚಾರದ ಪ್ರಕಾರ ಜೂನ್ 1ರಂದೇ ಕೇರಳ ಪ್ರವೇಶಿಸಬೇಕಿದ್ದ ಮುಂಗಾರು ಕೊಂಚ ತಡವಾಗಿ ಆಗಮಿಸುತ್ತಿದೆ. ಹೀಗಾಗಿ ಕರ್ನಾಟಕದಲ್ಲಿ ಜೂನ್ 5 ಅಥವಾ 6ರ ವೇಳೆಗೆ ಮುಂಗಾರು ಆರಂಭಗೊಳ್ಳಲಿದೆ.
ಹವಾಮಾನ ವರದಿಗಳು ತಿಳಿಸಿರುವಂತೆ ಇಂದು ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್, ಶಿವಮೊಗ್ಗ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್, ಮೈಸೂರಿನಲ್ಲಿ ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್, ಚಿಕ್ಕಮಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಉತ್ತರ ಕರ್ನಾಟಕ ಭಾಗದಲ್ಲಿ ತಾಪಮಾನ ಕೊಂಚ ಹೆಚ್ಚಿರಲಿದ್ದು, ರಾಯಚೂರು ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 36 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್, ಯಾದಗಿರಿ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 36 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್, ಕಲಬುರಗಿ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 35 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಅಂದಾಜಿಸಲಾಗಿದೆ.
ಉಳಿದ ನಗರಗಳ ಗರಿಷ್ಠ ಹಾಗೂ ಕನಿಷ್ಠ ಉಷ್ಣಾಂಶ ಮಾಹಿತಿ ಮಂಗಳೂರು: ಗರಿಷ್ಠ31 ಡಿಗ್ರಿ ಸೆಲ್ಸಿಯಸ್, ಕನಿಷ್ಠ 26 ಡಿಗ್ರಿ ಸೆಲ್ಸಿಯಸ್ ಉಡುಪಿ: ಗರಿಷ್ಠ31 ಡಿಗ್ರಿ ಸೆಲ್ಸಿಯಸ್, ಕನಿಷ್ಠ 26 ಡಿಗ್ರಿ ಸೆಲ್ಸಿಯಸ್ ಕಾರವಾರ: ಗರಿಷ್ಠ31 ಡಿಗ್ರಿ ಸೆಲ್ಸಿಯಸ್, ಕನಿಷ್ಠ 27 ಡಿಗ್ರಿ ಸೆಲ್ಸಿಯಸ್ ಬೆಳಗಾವಿ: ಗರಿಷ್ಠ29 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ಮಡಿಕೇರಿ: ಗರಿಷ್ಠ26 ಡಿಗ್ರಿ ಸೆಲ್ಸಿಯಸ್, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ಮಂಡ್ಯ: ಗರಿಷ್ಠ34 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ಹಾಸನ: ಗರಿಷ್ಠ30 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ರಾಮನಗರ: ಗರಿಷ್ಠ34 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ಕೋಲಾರ: ಗರಿಷ್ಠ32 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ತುಮಕೂರು: ಗರಿಷ್ಠ 33 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ಕೊಪ್ಪಳ: ಗರಿಷ್ಠ35 ಡಿಗ್ರಿ ಸೆಲ್ಸಿಯಸ್, ಕನಿಷ್ಠ 25 ಡಿಗ್ರಿ ಸೆಲ್ಸಿಯಸ್ ವಿಜಯಪುರ: ಗರಿಷ್ಠ33ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ಬೀದರ್: ಗರಿಷ್ಠ 32 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ಬಾಗಲಕೋಟೆ: ಗರಿಷ್ಠ35 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ಚಾಮರಾಜನಗರ: ಗರಿಷ್ಠ33 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ದಾವಣಗೆರೆ: ಗರಿಷ್ಠ34 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ಚಿತ್ರದುರ್ಗ: ಗರಿಷ್ಠ33 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ಹಾವೇರಿ: ಗರಿಷ್ಠ33 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ಗದಗ: ಗರಿಷ್ಠ34 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ಚಿಕ್ಕಬಳ್ಳಾಪುರ: ಗರಿಷ್ಠ31 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್
ಇದನ್ನೂ ಓದಿ: Monsoon Rains: ಈ ವರ್ಷ ಮುಂಗಾರು 2 ದಿನ ತಡ: ಕರ್ನಾಟಕದಲ್ಲಿ ಜೂನ್ 1ರಿಂದ 3ರವರೆಗೆ ಭಾರಿ ಮಳೆ
ಭಾರತದಲ್ಲಿ ಈ ವರ್ಷ ಉತ್ತಮ ಮುಂಗಾರು ನಿರೀಕ್ಷಿತ: ಗ್ರಾಮೀಣ ಆರ್ಥಿಕತೆಗೆ ಹೊಸ ಚೈತನ್ಯದ ಭರವಸೆ