Karnataka Weather Today: ಕರ್ನಾಟಕ ರಾಜ್ಯ ಹವಾಮಾನ ವರದಿ – ಇಂದು ಎಲ್ಲೆಲ್ಲಿ ಮಳೆಯಾಗಲಿದೆ? ತಾಪಮಾನ ಹೇಗಿರಲಿದೆ?

|

Updated on: May 17, 2021 | 7:23 AM

Weather Forecast: ಮೇ ತಿಂಗಳ ಸುಡು ಬಿಸಿಲನ್ನು ಶಮನ ಮಾಡಲೆಂಬಂತೆ ಬಂದೆರಗಿದ ಮಳೆರಾಯನಿಂದ ಹಲವೆಡೆ ವಾತಾವರಣ ತಂಪಾಗಿದೆ. ಇನ್ನೇನು ಮೇ ತಿಂಗಳ ಅಂತ್ಯಕ್ಕೆ ಮುಂಗಾರು ನೆರೆಯ ಕೇರಳ ರಾಜ್ಯವನ್ನು ಪ್ರವೇಶಿಸಲಿದ್ದು, ಅದಾಗಿ 2-3 ದಿನಗಳಲ್ಲಿ ಕರ್ನಾಟಕಕ್ಕೆ ಬರುವ ಸಾಧ್ಯತೆ ಇದೆ.

Karnataka Weather Today: ಕರ್ನಾಟಕ ರಾಜ್ಯ ಹವಾಮಾನ ವರದಿ - ಇಂದು ಎಲ್ಲೆಲ್ಲಿ ಮಳೆಯಾಗಲಿದೆ? ತಾಪಮಾನ ಹೇಗಿರಲಿದೆ?
ಕರ್ನಾಟಕ ರಾಜ್ಯ ಹವಮಾನ ವರದಿ
Follow us on

ಬೆಂಗಳೂರು: ಅರಬ್ಬೀ ಸಮುದ್ರದಲ್ಲಿ ಉಂಟಾದ ತೌಕ್ತೆ ಚಂಡಮಾರುತದ ಪರಿಣಾಮ ಕಳೆದೆರೆಡು ದಿನಗಳಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಗಾಲದ ವಾತಾವರಣ ಸೃಷ್ಟಿಯಾಗಿದ್ದು, ಇಂದು ಕೂಡಾ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆಯ ವರದಿಗಳು ತಿಳಿಸಿವೆ. ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮುಂಜಾನೆಯೇ ಮೋಡ ಕವಿದ ವಾತಾವರಣವಿದ್ದು, ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಮೇ ತಿಂಗಳ ಸುಡು ಬಿಸಿಲನ್ನು ಶಮನ ಮಾಡಲೆಂಬಂತೆ ಬಂದೆರಗಿದ ಮಳೆರಾಯನಿಂದ ಹಲವೆಡೆ ವಾತಾವರಣ ತಂಪಾಗಿದೆ. ಇನ್ನೇನು ಮೇ ತಿಂಗಳ ಅಂತ್ಯಕ್ಕೆ ಮುಂಗಾರು ನೆರೆಯ ಕೇರಳ ರಾಜ್ಯವನ್ನು ಪ್ರವೇಶಿಸಲಿದ್ದು, ಅದಾಗಿ 2-3 ದಿನಗಳಲ್ಲಿ ಕರ್ನಾಟಕಕ್ಕೆ ಬರುವ ಸಾಧ್ಯತೆ ಇರುವುದರಿಂದ ಈ ಬಾರಿಯ ಬೇಸಿಗೆಯ ತಾಪಕ್ಕೆ ಕಡಿವಾಣ ಬಿದ್ದಂತಾಗಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ವರದಿ ತಿಳಿಸಿದೆ. ಅಂತೆಯೇ, ಶಿವಮೊಗ್ಗದಲ್ಲಿ ಗರಿಷ್ಠ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್. ಮೈಸೂರಿನಲ್ಲಿ ಗರಿಷ್ಠ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್. ಬೆಳಗಾವಿಯಲ್ಲಿ ಗರಿಷ್ಠ 27 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್. ದಾವಣಗೆರೆಯಲ್ಲಿ ಗರಿಷ್ಠ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಇರಲಿದೆ.

ಇತ್ತ ಮಂಗಳೂರಿನಲ್ಲಿ ಗರಿಷ್ಠ 30 ಡಿಗ್ರಿ ಸೆಲ್ಸಿಯಸ್, ಕನಿಷ್ಠ 26 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶವಿದ್ದರೆ ಕಲಬುರಗಿ ಜಿಲ್ಲೆಯಲ್ಲಿ ಗರಿಷ್ಠ 33 ಡಿಗ್ರಿ ಸೆಲ್ಸಿಯಸ್, ಕನಿಷ್ಠ 25 ಡಿಗ್ರಿ ಸೆಲ್ಸಿಯಸ್ ಮತ್ತು ಮಡಿಕೇರಿಯಲ್ಲಿ ಗರಿಷ್ಠ 24 ಡಿಗ್ರಿ ಸೆಲ್ಸಿಯಸ್, ಕನಿಷ್ಠ 18 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗುವುದಾಗಿ ಹವಾಮಾನ ವರದಿಗಳು ತಿಳಿಸಿವೆ.

ಇನ್ನುಳಿದಂತೆ ರಾಜ್ಯದ ಇತರ ನಗರಗಳ ಇಂದಿನ ಗರಿಷ್ಠ ಮತ್ತು ಕನಿಷ್ಠ ಉಷ್ಣಾಂಶ ಮಾಹಿತಿ ಇಲ್ಲಿದೆ:
ಚಿಕ್ಕಮಗಳೂರು: ಗರಿಷ್ಠ 26, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್
ಚಿತ್ರದುರ್ಗ: ಗರಿಷ್ಠ 31, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್
ಉಡುಪಿ: ಗರಿಷ್ಠ 31, ಕನಿಷ್ಠ 26 ಡಿಗ್ರಿ ಸೆಲ್ಸಿಯಸ್
ಕಾರವಾರ: ಗರಿಷ್ಠ 30, ಕನಿಷ್ಠ 28 ಡಿಗ್ರಿ ಸೆಲ್ಸಿಯಸ್
ಹಾವೇರಿ: ಗರಿಷ್ಠ 30, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್
ಗದಗ: ಗರಿಷ್ಠ 31, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್
ಕೊಪ್ಪಳ: ಗರಿಷ್ಠ 32, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್
ರಾಯಚೂರು: ಗರಿಷ್ಠ 34, ಕನಿಷ್ಠ 25 ಡಿಗ್ರಿ ಸೆಲ್ಸಿಯಸ್
ಯಾದಗಿರಿ: ಗರಿಷ್ಠ 34, ಕನಿಷ್ಠ 26 ಡಿಗ್ರಿ ಸೆಲ್ಸಿಯಸ್
ವಿಜಯಪುರ: ಗರಿಷ್ಠ 32, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್
ಬೀದರ್: ಗರಿಷ್ಠ 34, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್
ಬಾಗಲಕೋಟೆ: ಗರಿಷ್ಠ 32, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್
ಚಿಕ್ಕಬಳ್ಳಾಪುರ: ಗರಿಷ್ಠ 31, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್
ಕೋಲಾರ: ಗರಿಷ್ಠ 32, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್
ತುಮಕೂರು: ಗರಿಷ್ಠ 31, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್
ಮಂಡ್ಯ: ಗರಿಷ್ಠ 30, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್
ರಾಮನಗರ: ಗರಿಷ್ಠ 31, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್
ಹಾಸನ: ಗರಿಷ್ಠ 27, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್
ಚಾಮರಾಜನಗರ: ಗರಿಷ್ಠ 31, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್

ಇದನ್ನೂ ಓದಿ:
ಇಂದೂ ಸೇರಿ ಮೂರು ದಿನಗಳ ಕಾಲ ತೌಕ್ತೆ ಎಫೆಕ್ಟ್ ಇರಲಿದೆ; ರಾಜ್ಯ ಹವಾಮಾನ ಇಲಾಖೆ ನಿರ್ದೇಶಕ ಸಿಎಸ್ ಪಾಟೀಲ್ ಮಾಹಿತಿ