Karnataka Weather: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಅಬ್ಬರ, ಕರ್ನಾಟಕದ ಹವಾಮಾನದಲ್ಲಿ ಬದಲಾವಣೆಯಾಗುತ್ತಾ?
ಕರ್ನಾಟಕದ ಹಲವೆಡೆ ಗರಿಷ್ಠ ಉಷ್ಣಾಂಶ ಹೆಚ್ಚಾಗಿದೆ, ಇನ್ನೂ ಕೆಲವೆಡೆ ತಂಪಾದ ವಾತಾವರಣ ಮುಂದುವರೆದಿದೆ. ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪುಗಳ್ಳುತ್ತಿರುವ ಕಾರಣ ಹಲವು ರಾಜ್ಯಗಳಲ್ಲಿ ಮಳೆಯಾಗಲಿದೆ. ಆದರೆ ಕರ್ನಾಟಕದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಹವಾಮಾನ ಇಲಾಖೆ ಹೇಳಿದೆ. ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಿಜೋರಾಂ, ತ್ರಿಪುರಾ, ಸಿಕ್ಕಿಂ, ಪಶ್ಚಿಮ ಬಂಗಾಳ, ಮಧ್ಯಪ್ರದೇಶ, ಮಣಿಪುರ ಸೇರಿದಂತೆ ಹಲವೆಡೆ ಮಳೆಯಾಗಲಿದೆ.

ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಳ್ಳುತ್ತಿದ್ದು, ಅದರ ಪ್ರಭಾವ 13ಕ್ಕೂ ಅಧಿಕ ರಾಜ್ಯಗಳ ಮೇಲಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಿಜೋರಾಂ, ತ್ರಿಪುರಾ, ಸಿಕ್ಕಿಂ, ಪಶ್ಚಿಮ ಬಂಗಾಳ, ಮಧ್ಯಪ್ರದೇಶ, ಮಣಿಪುರ ಸೇರಿದಂತೆ ಹಲವೆಡೆ ಮಳೆಯಾಗಲಿದೆ. ಆದರೆ ಕರ್ನಾಟಕದಲ್ಲಿ ಒಣಹವೆ ಮುಂದುವರೆಯಲಿದೆ.
ಮೈಸೂರು, ವಿಜಯಪುರ, ಚಾಮರಾಜನಗರದಲ್ಲಿ 13.9 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 37.4 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಉತ್ತರ ಒಳನಾಡಿನ ಬೆಳಗಾವಿಯಲ್ಲಿ ಗರಿಷ್ಠ ತಾಪಮಾನದಲ್ಲಿ -3.5 ಡಿಗ್ರಿ ಸೆಲ್ಸಿಯಸ್ನಷ್ಟು ಕುಸಿತ ಕಂಡಿದೆ. ಆಗುಂಬೆಯಲ್ಲಿ -2.7 ಡಿಗ್ರಿ ಸೆಲ್ಸಿಯಸ್ನಷ್ಟು ಕುಸಿತವಾಗಿದೆ. ಆದರೆ ಬೆಂಗಳೂರು, ಹಾಸನ, ಚಿಂತಾಮಣಿಯಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿತ್ತು.
ಕನಿಷ್ಠ ತಾಪಮಾನವು ಕರಾವಳಿಯಲ್ಲಿ 21-24 ಡಿಗ್ರಿ ಸೆಲ್ಸಿಯಸ್, ಉತ್ತರ ಒಳನಾಡಿನ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಧಾರವಾಡ, ಗದಗದಲ್ಲಿ 14-16 ಡಿಗ್ರಿ ಸೆಲ್ಸಿಯಸ್, ರಾಯಚೂರು, ಕಲಬುರಗಿ, ಹಾವೇರಿಯಲ್ಲಿ 17-19 ಡಿಗ್ರಿ ಸೆಲ್ಸಿಯಸ್, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಚಿಂತಾಮಣಿ, ಮಂಡ್ಯ, ಮೈಸೂರು, ಮಡಿಕೇರಿಯಲ್ಲಿ 13-15 ಡಿಗ್ರಿ ಸೆಲ್ಸಿಯಸ್, ಆಗುಂಬೆ, ಬೆಂಗಳೂರುನಗರ, ಚಿತ್ರದುರ್ಗ, ಶಿವಮೊಗ್ಗದಲ್ಲಿ 16-19 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಮತ್ತಷ್ಟು ಓದಿ: Karnataka Weather: ಚಾಮರಾಜನಗರದಲ್ಲಿ ಅತ್ಯಂತ ಕನಿಷ್ಠ ತಾಪಮಾನ, ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ ದಾಖಲು
ಗರಿಷ್ಠ ತಾಪಮಾನವು ಕರಾವಳಿಯಲ್ಲಿ 33-37 ಡಿಗ್ರಿ ಸೆಲ್ಸಿಯಸ್, ಬೆಳಗಾವಿಯಲ್ಲಿ 30-34 ಡಿಗ್ರಿ ಸೆಲ್ಸಿಯಸ್, ಬೀದರ್, ವಿಜಯಪುರ, ಬಾಗಲಕೋಟೆ, ಧಾರವಾಡ, ಹಾವೇರಿ, ಕೊಪ್ಪಳ, ಗದಗ, ಕಲಬುರಗಿ, ರಾಯಚೂರಿನಲ್ಲಿ 31-37 ಡಿಗ್ರಿ ಸೆಲ್ಸಿಯಸ್, ಆಗುಂಬೆ, ಮೈಸೂರು, ಬೆಂಗಳೂರು, ಚಿಕ್ಕಮಗಳೂರು, ಮಡಿಕೇರಿ, ಚಿಂತಾಮಣಿಯಲ್ಲಿ 31-33 ಡಿಗ್ರಿ ಸೆಲ್ಸಿಯಸ್, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ ಮತ್ತು ಶಿವಮೊಗ್ಗದಲ್ಲಿ 34-36 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಬೆಂಗಳೂರಿನಲ್ಲಿ ಶುಭ್ರ ಆಕಾಶವಿದೆ. ಎಚ್ಎಎಲ್ನಲ್ಲಿ 32.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 32.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:26 am, Tue, 18 February 25