ಬೆಂಗಳೂರು: ರಾಜ್ಯದಲ್ಲಿ ಐದಾರು ದಿನಗಳಿಂದ ಮಳೆಯ ಆರ್ಭಟ ತಗ್ಗಿದೆ. ಮಹಾಮಳೆಯಿಂದ ಜನರ ಜೀವನ ಅಸ್ತವ್ಯಸ್ತವಾಗಿತ್ತು. ಅದರಲ್ಲೂ ಬೆಳಗಾವಿ, ಮಲೆನಾಡು ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸುರಿದ ಭಾರೀ ಮಳೆಯಿಂದ ಬಹುತೇಕ ಮನೆಗಳು ಜಲಾವೃತವಾಗಿದ್ದವು. ಏಕಾಏಕಿ ನದಿಗಳ ನೀರು ಮನೆಗೆ ನುಗ್ಗಿದ್ದರಿಂದ ಜನರನ್ನು ತಕ್ಷಣ ಕಾಳಜಿ ಕೇಂದ್ರಕ್ಕೆ ಶಿಫ್ಟ್ ಮಾಡಲಾಯಿತು. ನೀರಿನ ಪ್ರಮಾಣ ಹೆಚ್ಚಾದಂತೆ ಜನರಿಗೆ ಜೀವ ಭಯ ಹೆಚ್ಚಾಗುತಿತ್ತು. ಸೇತುವೆಗಳು ಜಲಾವೃತಗೊಂಡಿದ್ದವು. ರಸ್ತೆಗಳು ಕೊಚ್ಚಿ ಹೋಗಿ ಸಂಚಾರ ಸ್ಥಗಿತಗೊಂಡಿದ್ದವು. ಈ ಎಲ್ಲಾ ಅವಾಂತರ ಸೃಷ್ಟಿಯಾಗಿದ್ದು, ಕೇವಲ 10ರಿಂದ 15 ದಿನಗಳ ಕಾಲ ಸುರಿದ ಮಳೆಯಲ್ಲಿ.
ರಾಜ್ಯದಲ್ಲಿ ಸದ್ಯ ಮಳೆ ಕಡಿಮೆಯಾಗಿದೆ. ಅಲ್ಲ್ಲಲ್ಲಿ ಸಾಧಾರಣ ಮಳೆಯಾಗುತ್ತಿದ್ದು, ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗುತ್ತಿದೆ. ಭಾರೀ ಮಳೆಯಿಂದ ರೈತರು ಬೆಳೆದ ಬೆಳೆ ನಾಶವಾಗಿತ್ತು. ಆದರೆ ಐದಾರು ದಿನಗಳಿಂದ ಮಳೆ ಕಡಿಮೆಯಾಗಿರುವ ಕಾರಣ ಆತಂಕವೂ ಕಡಿಮೆಯಾಗಿದೆ. ಇಂದು (ಆಗಸ್ಟ್ 2) ಮಲೆನಾಡು ಭಾಗಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುತ್ತದೆ. ಇನ್ನು ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ತಿಳಿಸಿದೆ.
ಇನ್ನು ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮುನ್ಸೂಚನೆ ನೀಡಿದೆ. ಮಲೆನಾಡು ಭಾಗಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗಿನಲ್ಲಿ ಕೊಂಚ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಸಾಧಾರಣ ಮಳೆಯಾಗಬಹುದು.
ಉತ್ತರ ಒಳನಾಡಿನಲ್ಲಿ ಇಂದು ಸಾಧಾರಣ ಮಳೆಯಾಗಲಿದ್ದು, ಬೀದರ್, ಬಾಗಲಕೋಟೆ, ಧಾರವಾಡ, ಹಾವೇರಿ, ಬೆಳಗಾವಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿದೆ. ದಕ್ಷಿಣ ಒಳನಾಡು ಜಿಲ್ಲೆಗಳಾದ ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ, ದಾವಣಗೆರೆ, ಕೋಲಾರ ಜಿಲ್ಲೆಗಳಲ್ಲಿ ಹಗರು ಮಳೆಯಾಗಬಹುದು. ಇಲ್ಲೂ ಮೋಡ ಕವಿದ ವಾತಾವರಣವಿದೆ.
ಕಳೆದ 24 ಗಂಟೆಗಳಲ್ಲಿ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕೊರ್ಲಕೈನಲ್ಲಿ 68 ಮೀ.ಮೀ ಮಳೆಯಾಗಿದೆ. ಸಿದ್ದಾಪುರ ತಾಲೂಕಿನ ಕೊರ್ಲಕೈ ನಿನ್ನೆ ಕರ್ನಾಟಕದಲ್ಲಿ ಅತಿ ಹೆಚ್ಚು ಮಳೆಯಾಗಿರುವ ಪ್ರದೇಶವಾಗಿದೆ.
ಇದನ್ನೂ ಓದಿ
Monthly Horoscope- ಮಾಸ ಭವಿಷ್ಯ: ಇಲ್ಲಿದೆ ಆಗಸ್ಟ್ ತಿಂಗಳ ಭವಿಷ್ಯ, ಯಾವ ರಾಶಿಯವರಿಗೆ ಯಾವ ಫಲ?
ಪಪ್ಪಾಯಿ ಹಣ್ಣು ಸವಿಯಲು ಇಷ್ಟಾನಾ? ಮಧುಮೇಹ ಸಮಸ್ಯೆಯಿಂದ ಪರಿಹಾರ ಪಡೆಯಲು ಉತ್ತಮ ಮಾರ್ಗ
(Karnataka Weather Several districts of Karnataka are likely to experience lightly rainfall today)