AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather: ಕರ್ನಾಟಕದ ದಕ್ಷಿಣ ಒಳನಾಡಿನ ಬಹುತೇಕ ಕಡೆ ಶೀತ ಗಾಳಿ, 5 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಬೆಂಗಳೂರು ಗ್ರಾಮಾಂತರ ಸೇರಿದಂತೆ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೊಡಗು, ದಾವಣಗೆರೆ, ಚಿತ್ರದುರ್ಗ, ತುಮಕೂರಿನಲ್ಲಿ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಹಲವೆಡೆ ಶೀತಗಾಳಿ ಬೀಸುತ್ತಿದೆ.

Karnataka Weather: ಕರ್ನಾಟಕದ ದಕ್ಷಿಣ ಒಳನಾಡಿನ ಬಹುತೇಕ ಕಡೆ ಶೀತ ಗಾಳಿ, 5 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
ಮಳೆImage Credit source: Udayavani
ನಯನಾ ರಾಜೀವ್
|

Updated on: Feb 26, 2024 | 7:36 AM

Share

ಕರ್ನಾಟಕದ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಬೆಂಗಳೂರು, ಕರಾವಳಿ ಜಿಲ್ಲೆಯಾದ ಉತ್ತರ ಕನ್ನಡದಲ್ಲಿ ಕಳೆದ ಎರಡು ದಿನಗಳಿಂದ ಶೀತಗಾಳಿ ಬೀಸುತ್ತಿದೆ. ಹಾಗೆಯೇ ಕೊಡಗು, ದಾವಣಗೆರೆ, ಚಿತ್ರದುರ್ಗ, ತುಮಕೂರು, ಬೆಂಗಳೂರು ಗ್ರಾಮಾಂತರದಲ್ಲಿ ಮುಂದಿನ ಎರಡು ದಿನಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಲ್ಳಾರಿ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ವಿಜಯನಗರ, ಶಿವಮೊಗ್ಗದಲ್ಲಿ ಒಣಹವೆ ಮುಂದುವರೆದಿದೆ.

ಬೆಳಗಾವಿ ವಿಮಾನ ನಿಲ್ದಾಣದಲ್ಲಿ 15.0 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್​ ಹೆಚ್ಚಾಗುವ ಸಾಧ್ಯತೆ ಇದೆ.

ಎಚ್​ಎಎಲ್​ನಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 32.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 20.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಜಿಕೆವಿಕೆಯಲ್ಲಿ 31.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ಕರ್ನಾಟಕದ ದಕ್ಷಿಣ ಒಳನಾಡಿನ 4 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ

ಹೊನ್ನಾವರದಲ್ಲಿ 30.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 34.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 33.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​ಪೋರ್ಟ್​ನಲ್ಲಿ 32.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ವಿಜಯಪುರದಲ್ಲಿ 35.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 35.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 33.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಚಿಕ್ಕಮಗಳೂರಿನಲ್ಲಿ 31.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 14.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಚಿತ್ರದುರ್ಗದಲ್ಲಿ 34.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ