Karnataka Weather: ಅರಬ್ಬಿ ಸಮುದ್ರದಲ್ಲಿ ತೀವ್ರ ಸ್ವರೂಪ ಪಡೆದ ಬಿಪರ್ಜಾಯ್ ಚಂಡಮಾರುತ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಭಾರಿ ಮಳೆಯ ಎಚ್ಚರಿಕೆ
ಬಿಪರ್ಜಾಯ್ ಚಂಡಮಾರುತವು ಅರಬ್ಬಿ ಸಮುದ್ರದಲ್ಲಿ ತೀವ್ರ ಸ್ವರೂಪ ಪಡೆದಿದೆ, ಇದರ ಪರಿಣಾಮ ಕರ್ನಾಟಕ ಸೇರಿದಂತೆ ಇತರೆ ರಾಜ್ಯಗಳಲ್ಲಾಗಲಿದೆ. ಮುಂದಿನ 3-4 ದಿನಗಳಲ್ಲಿ ಕೆಲವು ರಾಜ್ಯಗಳಲ್ಲಿ ಭಾರಿ ಮಳೆ ಸುರಿಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಬಿಪರ್ಜಾಯ್ ಚಂಡಮಾರುತವು ಅರಬ್ಬಿ ಸಮುದ್ರದಲ್ಲಿ ತೀವ್ರ ಸ್ವರೂಪ ಪಡೆದಿದೆ, ಇದರ ಪರಿಣಾಮ ಕರ್ನಾಟಕ ಸೇರಿದಂತೆ ಇತರೆ ರಾಜ್ಯಗಳಲ್ಲಾಗಲಿದೆ. ಮುಂದಿನ 3-4 ದಿನಗಳಲ್ಲಿ ಕೆಲವು ರಾಜ್ಯಗಳಲ್ಲಿ ಭಾರಿ ಮಳೆ ಸುರಿಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರ್ನಾಟಕದ ಕರಾವಳಿ, ಗೋವಾ, ಕೇರಳ, ಲಕ್ಷದ್ವೀಪ, ತಮಿಳುನಾಡು, ಆಂಧ್ರಪ್ರದೇಶ, ರಾಜಸ್ಥಾನ, ಅಸ್ಸಾಂ, ಮಿಜೋರಾಂ, ಮಣಿಪುರ, ಅರಿಣಾಚಲಪ್ರದೇಶ, ಮೇಘಾಲಯದಲ್ಲೂ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ತುಮಕೂರಿನಲ್ಲಿ ಭಾರಿ ಮಳೆಯಾಗಲಿದೆ, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉಳಿದಂತೆ ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಮಂಡ್ಯ, ಮೈಸೂರು, ರಾಮನಗರ, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಮತ್ತಷ್ಟು ಓದಿ: Karnataka Rain: ಜೂನ್ 11ರಂದು ರಾಜ್ಯದ ದಕ್ಷಿಣ ಒಳನಾಡಿನ 5 ಜಿಲ್ಲೆಗಳಲ್ಲಿ ಬಿರುಗಾಳಿ, ಗುಡುಗು ಸಹಿತ ಅಧಿಕ ಮಳೆ ಸಾಧ್ಯತೆ
ಚಿಂಚೋಳಿ, ಕುಣಿಗಲ್, ಹೆಸರಘಟ್ಟ, ತುಮಕೂರು, ಮಂಗಳೂರು, ಧರ್ಮಸ್ಥಳ, ಬೆಳ್ತಂಗಡಿ, ಕಾರವಾರ, ಕೋಟ, ಹೊನ್ನಾವರ, ಅಡಕಿ, ಸೇಡಂ, ಸೈದಾಪುರ, ಬೀದರ್, ಪಿಟಿಒ, ಬೀದರ್, ಹುಮನಾಬಾದ್, ಬಾಳೆಹೊನ್ನೂರು, ಕೊಟ್ಟಿಗೆಹಾರದಲ್ಲಿ ಮಳೆಯಾಗಿದೆ.
ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಕರಾವಳಿಯಲ್ಲಿ ಗಾಳಿಯು ಗಂಟೆಗೆ 35-45 ಕಿ.ಮೀಯಿಂದ 55 ಕಿ.ಮೀವರೆಗೆ ಬೀಸಲಿದೆ. ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕಲಬುರಗಿಯಲ್ಲಿ 41.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.
ಎಚ್ಎಎಲ್ನಲ್ಲಿ 32.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ