Karnataka Weather: ಅರಬ್ಬಿ ಸಮುದ್ರದಲ್ಲಿ ತೀವ್ರ ಸ್ವರೂಪ ಪಡೆದ ಬಿಪರ್​ಜಾಯ್ ಚಂಡಮಾರುತ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಭಾರಿ ಮಳೆಯ ಎಚ್ಚರಿಕೆ

ಬಿಪರ್​ಜಾಯ್ ಚಂಡಮಾರುತವು ಅರಬ್ಬಿ ಸಮುದ್ರದಲ್ಲಿ ತೀವ್ರ ಸ್ವರೂಪ ಪಡೆದಿದೆ, ಇದರ ಪರಿಣಾಮ ಕರ್ನಾಟಕ ಸೇರಿದಂತೆ ಇತರೆ ರಾಜ್ಯಗಳಲ್ಲಾಗಲಿದೆ. ಮುಂದಿನ 3-4 ದಿನಗಳಲ್ಲಿ ಕೆಲವು ರಾಜ್ಯಗಳಲ್ಲಿ ಭಾರಿ ಮಳೆ ಸುರಿಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

Karnataka Weather: ಅರಬ್ಬಿ ಸಮುದ್ರದಲ್ಲಿ ತೀವ್ರ ಸ್ವರೂಪ ಪಡೆದ ಬಿಪರ್​ಜಾಯ್ ಚಂಡಮಾರುತ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಭಾರಿ ಮಳೆಯ ಎಚ್ಚರಿಕೆ
ಮಳೆ
Image Credit source: Popular Mechanics

Updated on: Jun 09, 2023 | 7:23 AM

ಬಿಪರ್​ಜಾಯ್ ಚಂಡಮಾರುತವು ಅರಬ್ಬಿ ಸಮುದ್ರದಲ್ಲಿ ತೀವ್ರ ಸ್ವರೂಪ ಪಡೆದಿದೆ, ಇದರ ಪರಿಣಾಮ ಕರ್ನಾಟಕ ಸೇರಿದಂತೆ ಇತರೆ ರಾಜ್ಯಗಳಲ್ಲಾಗಲಿದೆ. ಮುಂದಿನ 3-4 ದಿನಗಳಲ್ಲಿ ಕೆಲವು ರಾಜ್ಯಗಳಲ್ಲಿ ಭಾರಿ ಮಳೆ ಸುರಿಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಕರ್ನಾಟಕದ ಕರಾವಳಿ, ಗೋವಾ, ಕೇರಳ, ಲಕ್ಷದ್ವೀಪ, ತಮಿಳುನಾಡು, ಆಂಧ್ರಪ್ರದೇಶ, ರಾಜಸ್ಥಾನ, ಅಸ್ಸಾಂ, ಮಿಜೋರಾಂ, ಮಣಿಪುರ, ಅರಿಣಾಚಲಪ್ರದೇಶ, ಮೇಘಾಲಯದಲ್ಲೂ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ತುಮಕೂರಿನಲ್ಲಿ ಭಾರಿ ಮಳೆಯಾಗಲಿದೆ, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಉಳಿದಂತೆ ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಮಂಡ್ಯ, ಮೈಸೂರು, ರಾಮನಗರ, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಮತ್ತಷ್ಟು ಓದಿ: Karnataka Rain: ಜೂನ್ 11ರಂದು ರಾಜ್ಯದ ದಕ್ಷಿಣ ಒಳನಾಡಿನ 5 ಜಿಲ್ಲೆಗಳಲ್ಲಿ ಬಿರುಗಾಳಿ, ಗುಡುಗು ಸಹಿತ ಅಧಿಕ ಮಳೆ ಸಾಧ್ಯತೆ

ಚಿಂಚೋಳಿ, ಕುಣಿಗಲ್, ಹೆಸರಘಟ್ಟ, ತುಮಕೂರು, ಮಂಗಳೂರು, ಧರ್ಮಸ್ಥಳ, ಬೆಳ್ತಂಗಡಿ, ಕಾರವಾರ, ಕೋಟ, ಹೊನ್ನಾವರ, ಅಡಕಿ, ಸೇಡಂ, ಸೈದಾಪುರ, ಬೀದರ್, ಪಿಟಿಒ, ಬೀದರ್, ಹುಮನಾಬಾದ್, ಬಾಳೆಹೊನ್ನೂರು, ಕೊಟ್ಟಿಗೆಹಾರದಲ್ಲಿ ಮಳೆಯಾಗಿದೆ.

ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಕರಾವಳಿಯಲ್ಲಿ ಗಾಳಿಯು ಗಂಟೆಗೆ 35-45 ಕಿ.ಮೀಯಿಂದ 55 ಕಿ.ಮೀವರೆಗೆ ಬೀಸಲಿದೆ. ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕಲಬುರಗಿಯಲ್ಲಿ 41.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಎಚ್​ಎಎಲ್​ನಲ್ಲಿ 32.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 33.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us