AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather: ಕರ್ನಾಟಕದ ಕರಾವಳಿಯ ಎಲ್ಲಾ ಜಿಲ್ಲೆಗಳು ಸೇರಿ ರಾಜ್ಯದ 11 ಜಿಲ್ಲೆಗಳಲ್ಲಿ ಮಳೆ

ಕರ್ನಾಟಕದಲ್ಲಿ ಕೆಲವೆಡೆ ಗರಿಷ್ಠ ಉಷ್ಣಾಂಶದಲ್ಲಿ ಹೆಚ್ಚಳವಾಗಿದ್ದರೂ, ಹಲವು ಕಡೆಗಳಲ್ಲಿ ಮಳೆಯಾಗುತ್ತಿದೆ. ಮುಂದಿನ ಎರಡು ದಿನಗಳ ಕಾಲ ರಾಜ್ಯದ 11ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

Karnataka Weather: ಕರ್ನಾಟಕದ ಕರಾವಳಿಯ ಎಲ್ಲಾ ಜಿಲ್ಲೆಗಳು ಸೇರಿ ರಾಜ್ಯದ 11 ಜಿಲ್ಲೆಗಳಲ್ಲಿ ಮಳೆ
ಮಳೆ Image Credit source: PTI
ನಯನಾ ರಾಜೀವ್
|

Updated on: Mar 27, 2025 | 7:14 AM

Share

ಬೆಂಗಳೂರು, ಮಾರ್ಚ್​ 27: ಕರ್ನಾಟಕದ ಕರಾವಳಿಯ ಎಲ್ಲಾ ಜಿಲ್ಲೆಗಳು ಸೇರಿ ರಾಜ್ಯದ 11 ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಒಣಹವೆ ಇರಲಿದೆ.

ಕ್ಯಾಸಲ್​ರಾಕ್, ಜೋಯಿಡಾ, ಕುಮಟಾ, ಯಲ್ಲಾಪುರ, ಕಾರ್ಕಳ, ಸಂಕೇಶ್ವರ, ಶಿರಹಟ್ಟಿ, ಲಕ್ಷ್ಮೀಪುರ, ಧಾರವಾಡ, ಕೆಆರ್ ನಗರ, ಹುಂಚದಕಟ್ಟೆ, ಶೃಂಗೇರಿ, ಜಯಪುರ, ಸಾಗರದಲ್ಲಿ ಮಳೆಯಾಗಿದೆ. ಕಲಬುರಗಿಯಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಧಾರವಾಡದಲ್ಲಿ 18.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಂಗಳೂರಿನ ಎಚ್​ಎಎಲ್​ನಲ್ಲಿ 33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 20.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 33.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಇದನ್ನೂ ಓದಿ
Image
ಉತ್ತರ ಕರ್ನಾಟಕಕ್ಕೆ ಬಿಸಿಲಾಘಾತ: ರಾಜ್ಯ ವಿಪತ್ತು ಎಂದು ಘೋಷಿಸಲು ಆಗ್ರಹ
Image
ಬೆಂಗಳೂರು ಸೇರಿ ಕರ್ನಾಟಕದ 25ಕ್ಕೂ ಅಧಿಕ ಜಿಲ್ಲೆಗಳಲ್ಲಿ ಒಂದು ವಾರ ಮಳೆ
Image
ಮುಂದಿನ ವಾರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
Image
ಕರ್ನಾಟಕದ ಹಲವೆಡೆ ಭಾರಿ ಮಳೆ: ಮಂಗಳೂರಿನಿಂದ ವಿಮಾನಗಳು ಡೈವರ್ಟ್‌

ಮತ್ತಷ್ಟು ಓದಿ: Karnataka Weather: ಇಂದಿನಿಂದ ಎರಡು ದಿನಗಳ ಕಾಲ ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆ

ಹೊನ್ನಾವರದಲ್ಲಿ 33.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 35.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 33.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ 35.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 36.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 37.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 35.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 38.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ35.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 37.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?