AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಳೆ, ಉಳಿದೆಡೆ ಒಣಹವೆ

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ.

Karnataka Rains: ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಳೆ, ಉಳಿದೆಡೆ ಒಣಹವೆ
ಮಳೆ Image Credit source: PTI
ನಯನಾ ರಾಜೀವ್
|

Updated on: Nov 17, 2024 | 8:01 AM

Share

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆಯಾಗಲಿದ್ದು, ಉಳಿದೆಡೆ ಒಣಹವೆ ಮುಂದುವರೆಯಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣಹವೆ ಮುಂದುವರೆಯಲಿದೆ. ಬೆಂಗಳೂರಿನ ಕೆಲವೆಡೆ ಶನಿವಾರ ಮಳೆಯಾಗಿದೆ, ಭಾನುವಾರವೂ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.

ಎಚ್​ಎಎಲ್​ನಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 27.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: ಕರ್ನಾಟಕದ 6 ಜಿಲ್ಲೆಗಳಲ್ಲಿ ಇಂದಿನಿಂದ ಜೋರು ಮಳೆ, ಯೆಲ್ಲೋ ಅಲರ್ಟ್​

ಕಾರವಾರದಲ್ಲಿ 35.4 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ಧಾರವಾಡದಲ್ಲಿ 19.2 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಹೊನ್ನಾವರದಲ್ಲಿ 35.1ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 35.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 34.5ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೀದರ್​ನಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 29.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 31.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶವಿದೆ.

ಗದಗದಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 33.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 30.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 29.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ