ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆಯಾಗಲಿದ್ದು, ಉಳಿದೆಡೆ ಒಣಹವೆ ಮುಂದುವರೆಯಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣಹವೆ ಮುಂದುವರೆಯಲಿದೆ. ಬೆಂಗಳೂರಿನ ಕೆಲವೆಡೆ ಶನಿವಾರ ಮಳೆಯಾಗಿದೆ, ಭಾನುವಾರವೂ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.
ಎಚ್ಎಎಲ್ನಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 27.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮತ್ತಷ್ಟು ಓದಿ: ಕರ್ನಾಟಕದ 6 ಜಿಲ್ಲೆಗಳಲ್ಲಿ ಇಂದಿನಿಂದ ಜೋರು ಮಳೆ, ಯೆಲ್ಲೋ ಅಲರ್ಟ್
ಕಾರವಾರದಲ್ಲಿ 35.4 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ಧಾರವಾಡದಲ್ಲಿ 19.2 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಹೊನ್ನಾವರದಲ್ಲಿ 35.1ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 35.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 34.5ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಬೀದರ್ನಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 29.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 31.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶವಿದೆ.
ಗದಗದಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 33.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 30.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 29.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕರ್ನಾಟಕದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ