AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಕರ್ನಾಟಕದ ಕರಾವಳಿ, ಶಿವಮೊಗ್ಗ, ಚಿಕ್ಕಮಗಳೂರು ಸೇರಿ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ

ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಡಿಸೆಂಬರ್ 14ರವರೆಗೂ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ವಿವಿಧೆಡೆ ಮತ್ತೆ ಮಳೆ ಶುರುವಾಗಿದೆ, ಕಳೆದ ವಾರ ಫೆಂಗಲ್ ಚಂಡಮಾರುತದಿಂದಾಗಿ ಬೆಂಗಳೂರು ಸೇರಿ ಹಲವೆಡೆ ಮಳೆಯಾಗಿತ್ತು. ಇದೀಗ ಹಿಂದೂ ಮಹಾಸಾಗರದಲ್ಲಿ ಮತ್ತೊಂದು ಚಂಡಮಾರುತ ಪರಿಚಲನೆ ಕಂಡುಬಂದಿದೆ.

Karnataka Rains: ಕರ್ನಾಟಕದ ಕರಾವಳಿ, ಶಿವಮೊಗ್ಗ, ಚಿಕ್ಕಮಗಳೂರು ಸೇರಿ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ
ಮಳೆ Image Credit source: PTI
ನಯನಾ ರಾಜೀವ್
|

Updated on: Dec 08, 2024 | 8:01 AM

Share

ಕರ್ನಾಟಕದ ವಿವಿಧೆಡೆ ಮತ್ತೆ ಮಳೆ ಶುರುವಾಗಿದೆ, ಕಳೆದ ವಾರ ಫೆಂಗಲ್ ಚಂಡಮಾರುತದಿಂದಾಗಿ ಬೆಂಗಳೂರು ಸೇರಿ ಹಲವೆಡೆ ಮಳೆಯಾಗಿತ್ತು. ಇದೀಗ ಹಿಂದೂ ಮಹಾಸಾಗರದಲ್ಲಿ ಮತ್ತೊಂದು ಚಂಡಮಾರುತ ಪರಿಚಲನೆ ಕಂಡುಬಂದಿದೆ. ಕಡಿಮೆ ಒತ್ತಡದ ಪ್ರದೇಶ ರೂಪುಗೊಂಡಿದೆ. ಇದೀಗ ಮತ್ತೆ ಮಳೆ ಶುರುವಾಗಿದೆ, ಶನಿವಾರ ಶಿವಮೊಗ್ಗ ಜಿಲ್ಲೆಯಾದ್ಯಂತ ಭಾರಿ ಮಳೆ ಸುರಿದಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ಡಿಸೆಂಬರ್ 14ರವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕ್ಯಾಸಲ್​ರಾಕ್, ರಾಳಗುಪ್ಪ, ಸಾಗರ, ಆನವಟ್ಟಿ, ಚಿತ್ತಾಪುರ, ಹುಬ್ಬಳ್ಳಿ, ಕಲಘಟಗಿ, ಚಿಟಗುಪ್ಪ ನರಗುಂದ, ಹುಂಚದಕಟ್ಟೆಯಲ್ಲಿ ಮಳೆಯಾಗಲಿದೆ. ಮಂಡ್ಯದಲ್ಲಿ 17.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಬಿಸಿಲಿದೆ, ಎಚ್​ಎಎಲ್​ನಲ್ಲಿ 28.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: ರಾಜ್ಯದೆಲ್ಲೆಡೆ ಇಣುಕಿ ಮಾಯವಾದ ಚಳಿ, ಮಳೆ ಕಡಿಮೆ, ಬಿಸಿಲು ಶುರು

ಹೊನ್ನಾವರದಲ್ಲಿ 32.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 34.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬಾಗಲಕೋಟೆಯಲ್ಲಿ 32.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 31.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ