Karnataka Weather: ಕರ್ನಾಟಕದ ದಕ್ಷಿಣ ಒಳನಾಡಿನ ಬಹುತೇಕ ಕಡೆ ಇಂದು ಮಳೆ ಸಾಧ್ಯತೆ

ಕರ್ನಾಟಕದ ಬಹುತೇಕ ಕಡೆ ಇಂದು ಮಳೆಯಾಗುವ ಸಾಧ್ಯತೆ ಇದೆ, ಇಂದು ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಇಂದು ಮಳೆಯಾಗಲಿದೆ. ವಿಜಯನಗರ, ಶಿವಮೊಗ್ಗ, ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ಉಡುಪಿಯಲ್ಲಿ ಒಣಹವೆ ಮುಂದುವರೆಯಲಿದೆ.

Karnataka Weather: ಕರ್ನಾಟಕದ ದಕ್ಷಿಣ ಒಳನಾಡಿನ ಬಹುತೇಕ ಕಡೆ ಇಂದು ಮಳೆ ಸಾಧ್ಯತೆ
ಮಳೆ
Image Credit source: PTI

Updated on: Jan 21, 2025 | 7:15 AM

ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಅಪ್ಪಳಿಸುತ್ತಿದ್ದು ಅದರ ಪರಿಣಾಮ ತಮಿಳುನಾಡು, ಕರ್ನಾಟಕದ ಸೇರಿದಂತೆ ಹಲವು ರಾಜ್ಯಗಳ ಮೇಲಾಗುತ್ತಿದೆ. ಇಂದು ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಇಂದು ಮಳೆಯಾಗಲಿದೆ.

ವಿಜಯನಗರ, ಶಿವಮೊಗ್ಗ, ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ಉಡುಪಿಯಲ್ಲಿ ಒಣಹವೆ ಮುಂದುವರೆಯಲಿದೆ.
ರಾಜ್ಯಾದ್ಯಂತ ಮೋಡಕವಿದ ವಾತಾವರಣವಿದ್ದ ಕಾರಣ ಚಳಿಯ ಪ್ರಮಾಣ ಕಡಿಮೆಯಾಗಿದೆ. ಬೀದರ್​ನಲ್ಲಿ 12.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡಕವಿದ ವಾತಾವರಣವಿರಲಿದೆ, ಹಗುರ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವದಲ್ಲಿ ಕೆಲವೆಡೆ ಮಂಜು ಕವಿದ ವಾತಾವರಣವಿತ್ತು. ಗರಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್​, ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಭಾನುವಾರ ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗಿತ್ತು.

ಮತ್ತಷ್ಟು ಓದಿ: ಬೆಂಗಳೂರಿನಲ್ಲಿ ಇಂದು ಬೆಳಗ್ಗೆಯಿಂದಲೇ ಜೋರು ಮಳೆ, ಕರ್ನಾಟಕದ 10 ಜಿಲ್ಲೆಗಳಿಗೆ ಮಳೆಯ ಮುನ್ಸೂಚನೆ

ಎಚ್​ಎಎಲ್​ನಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 27.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 33.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 34.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 32.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 12.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 13.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 27.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 26.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 13.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 26.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 30.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 27.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:15 am, Mon, 20 January 25

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us