AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಬೆಂಗಳೂರು ಸೇರಿ ಕರ್ನಾಟಕದ 19 ಜಿಲ್ಲೆಗಳಲ್ಲಿ ಅ.9ರಿಂದ ಭಾರಿ ಮಳೆ

ಕರ್ನಾಟಕದಾದ್ಯಂತ ನಾಳೆಯಿಂದ ಮಳೆ ಮತ್ತೆ ಹೆಚ್ಚಾಗಲಿದೆ. ದಕ್ಷಿಣ ಕನ್ನಡ, ಉಡುಪಿ,ಉತ್ತರ ಕನ್ನಡ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಭಾರಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

Karnataka Rains: ಬೆಂಗಳೂರು ಸೇರಿ ಕರ್ನಾಟಕದ 19 ಜಿಲ್ಲೆಗಳಲ್ಲಿ ಅ.9ರಿಂದ ಭಾರಿ ಮಳೆ
ಮಳೆImage Credit source: PTI
ನಯನಾ ರಾಜೀವ್
|

Updated on: Oct 08, 2025 | 7:23 AM

Share

ಬೆಂಗಳೂರು, ಅಕ್ಟೋಬರ್ 08: ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಅಕ್ಟೋಬರ್ 9ರಿಂದ ಮತ್ತೆ ಮಳೆ(Rain) ಶುರುವಾಗಲಿದೆ. ದಕ್ಷಿಣ ಕನ್ನಡ, ಉಡುಪಿ,ಉತ್ತರ ಕನ್ನಡ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಭಾರಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಸಾಧಾರಣ ಮಳೆಯಾಗಲಿದೆ. ಸೈದಾಪುರ, ಔರಾದ್, ಭಾಲ್ಕಿ ಹೀಗೆ ಕೆಲವೇ ಕೆಲವು ಕಡೆ ಮಂಗಳವಾರ ಮಳೆಯಾಗಿದೆ.

ಕಾರವಾರದಲ್ಲಿ 32.8 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ಚಿತ್ರದುರ್ಗದಲ್ಲಿ 18.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್​ಎಎಲ್​ನಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 28ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 28 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದ ಕರಾವಳಿ ಸೇರಿ 14 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ

ಹೊನ್ನಾವರದಲ್ಲಿ 31 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 32.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​ಪೋರ್ಟ್​​ನಲ್ಲಿ 30.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 31.1ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿ ಏರ್​ಪೋರ್ಟ್​​ನಲ್ಲಿ 27.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 29.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 29.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 30.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 30 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 30 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ