Karnataka Weather: ಬೆಂಗಳೂರು ಸೇರಿ ಕರ್ನಾಟಕದ 17ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಏರಿಕೆಯಾಗುತ್ತಿದೆ, ಕೆಲವೆಡೆ ಮಳೆಯ ಸಿಂಚನವಾಗಿದೆ. ಮುಂದಿನ 3 ದಿನಗಳ ಕಾಲ ಕರ್ನಾಟಕದ ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Weather: ಬೆಂಗಳೂರು ಸೇರಿ ಕರ್ನಾಟಕದ 17ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ
ಮಳೆImage Credit source: Business Today
Follow us
|

Updated on: Mar 18, 2024 | 7:31 AM

ಕರ್ನಾಟಕದ ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಮುಂದಿನ ಮೂರು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಳಗಾವಿ, ಬೀದರ್, ಧಾರವಾಡ, ರಾಯಚೂರು, ಕಲಬುರಗಿ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಒಣಹವೆ ಮುಂದುವರೆಯಲಿದೆ.

ಬಾಗಲಕೋಟೆ, ಕೊಪ್ಪಳ, ಬೆಂಗಳೂರು ಗ್ರಾಮಾಂತರ, ಕೋಲಾರ, ಮೈಸೂರು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್​ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ, ಎಚ್​ಎಎಲ್​ನಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, ನಗರದಲ್ಲಿ 34.5ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 34.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 34.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಉತ್ತರ ಒಳನಾಡಿನ ಬಾಗೊಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿಯಲ್ಲಿ ಬಿಸಿಲಿನ ಧಗೆ ಮುಂದುವರೆಯಲಿದೆ.

ಮತ್ತಷ್ಟು ಓದಿ: Karnataka Weather: ಮಾರ್ಚ್​ 22ರಿಂದ 3 ದಿನಗಳ ಕಾಲ ಕರ್ನಾಟಕದ 12ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆ

ಕೊಪ್ಪಳದಲ್ಲಿ 39.5 ಡಿಗ್ರಿ ಸಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ, ಶಿವಮೊಗ್ಗದಲ್ಲಿ 19.0 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಹೊನ್ನಾವರದಲ್ಲಿ 32.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 34.9 ಡಿಗ್ರಿ ಸೆಲ್ಇಸಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 38.3ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಊಟ ಮಾಡುವಾಗ ಅರ್ಧಕ್ಕೆ ಎದ್ದು ಹೋಗಬಾರದು ಯಾಕೆ? ವಿಡಿಯೋ ನೋಡಿ
ಊಟ ಮಾಡುವಾಗ ಅರ್ಧಕ್ಕೆ ಎದ್ದು ಹೋಗಬಾರದು ಯಾಕೆ? ವಿಡಿಯೋ ನೋಡಿ
Nithya Bhavishya: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭ ಫಲವಿದೆ
Nithya Bhavishya: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭ ಫಲವಿದೆ
ತಮಿಳು, ತೆಲುಗಿನಲ್ಲೂ ಶಿವರಾಜ್​ಕುಮಾರ್ ಬ್ಯುಸಿ; ಇಲ್ಲಿದೆ ಮಾಹಿತಿ..
ತಮಿಳು, ತೆಲುಗಿನಲ್ಲೂ ಶಿವರಾಜ್​ಕುಮಾರ್ ಬ್ಯುಸಿ; ಇಲ್ಲಿದೆ ಮಾಹಿತಿ..
ಶಿವರಾಜ್​ಕುಮಾರ್​ ಆರೋಗ್ಯ ಸಮಸ್ಯೆ; ಕರೆ ಮಾಡಿ ವಿಚಾರಿಸಿದ ಯಶ್, ಸುದೀಪ್
ಶಿವರಾಜ್​ಕುಮಾರ್​ ಆರೋಗ್ಯ ಸಮಸ್ಯೆ; ಕರೆ ಮಾಡಿ ವಿಚಾರಿಸಿದ ಯಶ್, ಸುದೀಪ್
ಕೆರೆ ಹಾಡಿಯ ಪಡಸಾಲೆಯಲ್ಲಿ ಕುಳಿತು ಜನದ ಸಮಸ್ಯೆ ಆಲಿಸಿದ ಸಿದ್ದರಾಮಯ್ಯ
ಕೆರೆ ಹಾಡಿಯ ಪಡಸಾಲೆಯಲ್ಲಿ ಕುಳಿತು ಜನದ ಸಮಸ್ಯೆ ಆಲಿಸಿದ ಸಿದ್ದರಾಮಯ್ಯ
ಜನಾಂಗೀಯ ನಿಂದನೆಯಾಗಿದೆ ಅಂತ ಕುಮಾರಸ್ವಾಮಿ ಯಾಕೆ ದೂರು ನೀಡಿಲ್ಲ? ಶಿವಕುಮಾರ್
ಜನಾಂಗೀಯ ನಿಂದನೆಯಾಗಿದೆ ಅಂತ ಕುಮಾರಸ್ವಾಮಿ ಯಾಕೆ ದೂರು ನೀಡಿಲ್ಲ? ಶಿವಕುಮಾರ್
ಜಮೀರ್ ಅಹ್ಮದ್​​ರನ್ನು ಸೃಷ್ಟಿ ಮಾಡಿದ್ದೇ ದೇವೇಗೌಡರ ಕುಟುಂಬ: ವಿ ಸೋಮಣ್ಣ
ಜಮೀರ್ ಅಹ್ಮದ್​​ರನ್ನು ಸೃಷ್ಟಿ ಮಾಡಿದ್ದೇ ದೇವೇಗೌಡರ ಕುಟುಂಬ: ವಿ ಸೋಮಣ್ಣ
ಹನುಮಂತನ ಪಂಚೆ ಧರಿಸಿದ ಗೌತಮಿ ಜಾದವ್; ಬಟ್ಟೆ ಮಹಿಮೆಯಿಂದ ಬದಲಾಯ್ತು ವರ್ತನೆ
ಹನುಮಂತನ ಪಂಚೆ ಧರಿಸಿದ ಗೌತಮಿ ಜಾದವ್; ಬಟ್ಟೆ ಮಹಿಮೆಯಿಂದ ಬದಲಾಯ್ತು ವರ್ತನೆ
ಸಿದ್ದರಾಮಯ್ಯ ವಿರುದ್ಧ ಯಾವತ್ತೂ ವೈಯಕ್ತಿಕ ಟೀಕೆ ಮಾಡಿಲ್ಲ: ಎ ಮಂಜು
ಸಿದ್ದರಾಮಯ್ಯ ವಿರುದ್ಧ ಯಾವತ್ತೂ ವೈಯಕ್ತಿಕ ಟೀಕೆ ಮಾಡಿಲ್ಲ: ಎ ಮಂಜು
ಚನ್ನಪಟ್ಟಣದಲ್ಲಿ ನಾನೇ ಮುಖ್ಯಮಂತ್ರಿ ಅಂತ ಶಿವಕುಮಾರ್ ಹೇಳುತ್ತಾರೆ: ಅಶೋಕ
ಚನ್ನಪಟ್ಟಣದಲ್ಲಿ ನಾನೇ ಮುಖ್ಯಮಂತ್ರಿ ಅಂತ ಶಿವಕುಮಾರ್ ಹೇಳುತ್ತಾರೆ: ಅಶೋಕ