AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather: ಕರ್ನಾಟಕದಾದ್ಯಂತ ಮೈಕೊರೆವ ಚಳಿ, ಬೀದರ್​ನಲ್ಲಿ ಅತ್ಯಂತ ಕನಿಷ್ಠ ಉಷ್ಣಾಂಶ

ಕರ್ನಾಟಕದಾದ್ಯಂತ ಮೈಕೊರೆವ ಚಳಿ ಮತ್ತೆ ಶುರುವಾಗಿದೆ, ಮಳೆಯ ಪ್ರಮಾಣ ಕಡಿಮೆಯಾಗುತ್ತಿದ್ದಂತೆ ಚಳಿ ಜೋರಾಗಿದೆ. ವಿಜಯನಗರ, ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಚಳಿ ಇರಲಿದ್ದು, ಒಣಹವೆ ಮುಂದುವರೆಯಲಿದೆ. ಮಂಗಳೂರು ಏರ್​ಪೋರ್ಟ್​ನಲ್ಲಿ ಮಳೆಯಾಗಿದೆ.

Karnataka Weather: ಕರ್ನಾಟಕದಾದ್ಯಂತ ಮೈಕೊರೆವ ಚಳಿ, ಬೀದರ್​ನಲ್ಲಿ ಅತ್ಯಂತ ಕನಿಷ್ಠ ಉಷ್ಣಾಂಶ
Cold (14)
ನಯನಾ ರಾಜೀವ್
|

Updated on:Jan 21, 2025 | 7:19 AM

Share

ಬೆಂಗಳೂರು ಸೇರಿ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಕಳೆದ ಎರಡು ದಿನಗಳಿಂದ ಮೋಡಕವಿದ ವಾತಾವರಣವಿದ್ದು, ಸಣ್ಣ ಪ್ರಮಾಣದ ಮಳೆಯಾಗಿತ್ತು., ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಂಡ ಪರಿಣಾಮ ತಮಿಳುನಾಡು, ಕರ್ನಾಟಕದಲ್ಲಿ ಮಳೆ ತರಿಸಿತ್ತು.

ಇದೀಗ ಮಳೆ ಕಡಿಮೆಯಾದ ಬಳಿಕ ಚಳಿಯ ಪ್ರಮಾಣ ಮತ್ತೆ ಹೆಚ್ಚಾಗಿದೆ. ಶೀತಗಾಳಿ ಬೀಸುತ್ತಿದೆ. ವಿಜಯನಗರ, ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಚಳಿ ಇರಲಿದ್ದು, ಒಣಹವೆ ಮುಂದುವರೆಯಲಿದೆ. ಮಂಗಳೂರು ಏರ್​ಪೋರ್ಟ್​ನಲ್ಲಿ ಮಳೆಯಾಗಿದೆ.

ಬೀದರ್​ನಲ್ಲಿ 11.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್​ಎಎಲ್​ನಲ್ಲಿ 21.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 21.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 21.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 21.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ಕರ್ನಾಟಕದ ದಕ್ಷಿಣ ಒಳನಾಡಿನ ಬಹುತೇಕ ಕಡೆ ಇಂದು ಮಳೆ ಸಾಧ್ಯತೆ

ಹೊನ್ನಾವರದಲ್ಲಿ 36.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 35.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ 29.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 11.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 31.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 33.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 29.9ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:18 am, Tue, 21 January 25

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು