ಬೆಂಗಳೂರು ಸೇರಿ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಕಳೆದ ಎರಡು ದಿನಗಳಿಂದ ಮೋಡಕವಿದ ವಾತಾವರಣವಿದ್ದು, ಸಣ್ಣ ಪ್ರಮಾಣದ ಮಳೆಯಾಗಿತ್ತು., ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಂಡ ಪರಿಣಾಮ ತಮಿಳುನಾಡು, ಕರ್ನಾಟಕದಲ್ಲಿ ಮಳೆ ತರಿಸಿತ್ತು.
ಇದೀಗ ಮಳೆ ಕಡಿಮೆಯಾದ ಬಳಿಕ ಚಳಿಯ ಪ್ರಮಾಣ ಮತ್ತೆ ಹೆಚ್ಚಾಗಿದೆ. ಶೀತಗಾಳಿ ಬೀಸುತ್ತಿದೆ.
ವಿಜಯನಗರ, ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಚಳಿ ಇರಲಿದ್ದು, ಒಣಹವೆ ಮುಂದುವರೆಯಲಿದೆ. ಮಂಗಳೂರು ಏರ್ಪೋರ್ಟ್ನಲ್ಲಿ ಮಳೆಯಾಗಿದೆ.
ಬೀದರ್ನಲ್ಲಿ 11.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್ಎಎಲ್ನಲ್ಲಿ 21.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 21.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 21.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 21.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮತ್ತಷ್ಟು ಓದಿ: Karnataka Weather: ಕರ್ನಾಟಕದ ದಕ್ಷಿಣ ಒಳನಾಡಿನ ಬಹುತೇಕ ಕಡೆ ಇಂದು ಮಳೆ ಸಾಧ್ಯತೆ
ಹೊನ್ನಾವರದಲ್ಲಿ 36.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 35.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೀದರ್ನಲ್ಲಿ 29.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 11.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಧಾರವಾಡದಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 31.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 33.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 29.9ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:18 am, Tue, 21 January 25