Karnataka Weather: ಕರ್ನಾಟಕದಾದ್ಯಂತ ಶೀತ ಗಾಳಿ, ಮುಂದಿನ ಐದು ದಿನ ಕನಿಷ್ಠ ಉಷ್ಣಾಂಶದಲ್ಲಿ ಭಾರೀ ಇಳಿಕೆ

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ ಶೀತಗಾಳಿ ಶುರುವಾಗಿದ್ದು, ಮುಂದಿನ ಐದು ದಿನಗಳ ಕಾಲ ಕನಿಷ್ಠ ಉಷ್ಣಾಂಶದಲ್ಲಿ 2-3 ಡಿಗ್ರಿ ಸೆಲ್ಸಿಯಸ್​ನಷ್ಟು ಕಡಿಮೆಯಾಗಲಿದೆ. ವಿಜಯನಗರ, ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರೌಆಡ, ಬೀದರ್, ಬೆಳಗಾವಿ, ಬಾಗಲಕೋಟೆ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಚಳಿ ಇರಲಿದೆ.

Karnataka Weather: ಕರ್ನಾಟಕದಾದ್ಯಂತ ಶೀತ ಗಾಳಿ, ಮುಂದಿನ ಐದು ದಿನ ಕನಿಷ್ಠ ಉಷ್ಣಾಂಶದಲ್ಲಿ ಭಾರೀ ಇಳಿಕೆ
ಚಳಿ Image Credit source: PTI
Follow us
ನಯನಾ ರಾಜೀವ್
|

Updated on: Jan 17, 2025 | 7:39 AM

ಕರ್ನಾಟಕದಾದ್ಯಂತ ಚಂಡಮಾರುತದ ಪ್ರಭಾವದಿಂದಾಗಿ ಅಲ್ಲಲ್ಲಿ ತುಂತುರು ಮಳೆಯಾಗುತ್ತಿತ್ತು, ಆದರೆ ಇಂದಿನಿಂದ ಶುಭ್ರ ಆಕಾಶ ಗೋಚರಿಸಲಿದ್ದು, ಶೀತ ಗಾಳಿ ಬೀಸುತ್ತಿದೆ. ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಜಯನಗರ, ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರೌಆಡ, ಬೀದರ್, ಬೆಳಗಾವಿ, ಬಾಗಲಕೋಟೆ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಚಳಿ ಇರಲಿದೆ.

ಚಾಮರಾಜನಗರದಲ್ಲಿ 15.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಶುಭ್ರ ಆಕಾಶವಿದೆ. ಎಚ್​ಎಎಲ್​ನಲ್ಲಿ 25.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 24.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 25.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 26.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ ಜನವರಿ 22ರವರೆಗೆ ಕನಿಷ್ಠ ತಾಪಮಾನದಲ್ಲಿ 2-3 ಡಿಗ್ರಿ ಸೆಲ್ಸಿಯಸ್​ ಇಳಿಕೆಯಾಗುವ ಸಾಧ್ಯತೆ ಇದೆ. ಹೊನ್ನಾವರದಲ್ಲಿ 34.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 34.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 35.3 ಡಿಗ್ರಿ ಸೆಲ್ಸಿಸಯ್ ಗರಿಷ್ಠ ಉಷ್ಣಾಂಶ, 24.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ಬೆಂಗಳೂರು ಸೇರಿ ಕರ್ನಾಟಕದ 6 ಜಿಲ್ಲೆಗಳಲ್ಲಿ ಇಂದು ಮಳೆಯ ಮುನ್ಸೂಚನೆ

ಬೀದರ್​ನಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 30.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 30.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 31.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 30.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 29.8 -ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಚಿವೆಯನ್ನು ಮಾತಾಡಿಸಲು ಆಸ್ಪತ್ರೆಗೆ ಭೇಟಿ ನೀಡದಂತೆ ಜನರಿಗೆ ವೈದ್ಯರ ಮನವಿ
ಸಚಿವೆಯನ್ನು ಮಾತಾಡಿಸಲು ಆಸ್ಪತ್ರೆಗೆ ಭೇಟಿ ನೀಡದಂತೆ ಜನರಿಗೆ ವೈದ್ಯರ ಮನವಿ
ಸಿದ್ದರಾಮಯ್ಯ ತಮ್ಮ ಅಧಿಕಾರಾವಧಿಯನ್ನು ಪೂರ್ತಿಗೊಳಿಸಲ್ಲ: ವಿಜಯೇಂದ್ರ
ಸಿದ್ದರಾಮಯ್ಯ ತಮ್ಮ ಅಧಿಕಾರಾವಧಿಯನ್ನು ಪೂರ್ತಿಗೊಳಿಸಲ್ಲ: ವಿಜಯೇಂದ್ರ
ನಾನೇ ಬಿಜೆಪಿ ರಾಜ್ಯಾಧ್ಯಕ್ಷನಾಗಿ ಮುಂದುವರಿಯುತ್ತೇನೆ: ವಿಜಯೇಂದ್ರ
ನಾನೇ ಬಿಜೆಪಿ ರಾಜ್ಯಾಧ್ಯಕ್ಷನಾಗಿ ಮುಂದುವರಿಯುತ್ತೇನೆ: ವಿಜಯೇಂದ್ರ
ಸುರ್ಜೆವಾಲಾ ರಾಜ್ಯದಲ್ಲಿರುವಾಗಲೇ ನಡೆದಿರುವ ಬೆಳವಣಿಗೆ ಕುತೂಹಲಕಾರಿ
ಸುರ್ಜೆವಾಲಾ ರಾಜ್ಯದಲ್ಲಿರುವಾಗಲೇ ನಡೆದಿರುವ ಬೆಳವಣಿಗೆ ಕುತೂಹಲಕಾರಿ
ಸುತ್ತೂರು ಮಠದಲ್ಲೇ ವಿಜಯೇಂದ್ರ ಮತ್ತು ಸಂಗಡಿಗರಿಗೆ ಉಪಹಾರ
ಸುತ್ತೂರು ಮಠದಲ್ಲೇ ವಿಜಯೇಂದ್ರ ಮತ್ತು ಸಂಗಡಿಗರಿಗೆ ಉಪಹಾರ
ಆಕಾಶದಲ್ಲಿ ಸ್ಫೋಟಗೊಂಡ ಸ್ಪೇಸ್​ಎಕ್ಸ್​ ಸ್ಟಾರ್​ಶಿಪ್
ಆಕಾಶದಲ್ಲಿ ಸ್ಫೋಟಗೊಂಡ ಸ್ಪೇಸ್​ಎಕ್ಸ್​ ಸ್ಟಾರ್​ಶಿಪ್
ಕೆನಡಾ ಪ್ರಧಾನಿ ಹುದ್ದೆಗೆ ನಾಮಪತ್ರ ಸಲ್ಲಿಸಿ ಕನ್ನಡದಲ್ಲೇ ಮಾತನಾಡಿದ ಚಂದ್ರ
ಕೆನಡಾ ಪ್ರಧಾನಿ ಹುದ್ದೆಗೆ ನಾಮಪತ್ರ ಸಲ್ಲಿಸಿ ಕನ್ನಡದಲ್ಲೇ ಮಾತನಾಡಿದ ಚಂದ್ರ
ಈ ಸೀಸನ್​ನಲ್ಲಿ ಎಲಿಮಿನೇಟ್ ಆದ ಸ್ಪರ್ಧಿಗಳ ಮರು ಎಂಟ್ರಿ; ಜಗದೀಶ್​ ಕಥೆ ಏನು?
ಈ ಸೀಸನ್​ನಲ್ಲಿ ಎಲಿಮಿನೇಟ್ ಆದ ಸ್ಪರ್ಧಿಗಳ ಮರು ಎಂಟ್ರಿ; ಜಗದೀಶ್​ ಕಥೆ ಏನು?
ತಪ್ಪಾದ ಬಸ್ ಹತ್ತಿ ಹೋದ 5 ವರ್ಷದ ಬಾಲಕ, ಮುಂದೇನಾಯ್ತು?
ತಪ್ಪಾದ ಬಸ್ ಹತ್ತಿ ಹೋದ 5 ವರ್ಷದ ಬಾಲಕ, ಮುಂದೇನಾಯ್ತು?
Daily Devotional: ಯಾವ ರಾಶಿಯವರು ಯಾವ ಉದ್ಯೋಗ ಮಾಡಿದರೆ ಉತ್ತಮ?
Daily Devotional: ಯಾವ ರಾಶಿಯವರು ಯಾವ ಉದ್ಯೋಗ ಮಾಡಿದರೆ ಉತ್ತಮ?