ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು, ಮೈಸೂರು, ಶಿವಮೊಗ್ಗ ಸೇರಿದಂತೆ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತಮಿಳುನಾಡಿನಲ್ಲಿ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದ್ದು, ಇದರ ಪರಿಣಾಮ ಕರ್ನಾಟಕದ ಮೇಲೂ ಆಗುತ್ತಿದೆ. ರಾಜ್ಯದ ಹಲವೆಡೆ ಕಳೆದ ಎರಡು ದಿನಗಳಿಂದ ಮೋಡಕವಿದ ವಾತಾವರಣವಿದ್ದು, ಬಹಳಷ್ಟು ಕಡೆ ಮಳೆಯಾಗಿದೆ.
ಉತ್ತರ ಒಳನಾಡಿನ ಬೀದರ್, ಬಾಗಲಕೋಟೆ, ಧಾರವಾಡ, ರಾಯಚೂರು, ಕಲಬುರಗಿ, ಯಾದಗಿರಿ, ಕೊಪ್ಪಳ, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ತುಮಕೂರು, ವಿಜಯನಗರ, ಶಿವಮೊಗ್ಗ, ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಆಲಿಕಲ್ಲು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಮತ್ತಷ್ಟು ಓದಿ: ಭದ್ರಾ ಡ್ಯಾಂನಿಂದ ತುಂಗಭದ್ರ ನದಿಗೆ ನೀರು; ನದಿ ಪಾತ್ರದ ಜನ ಎಚ್ಚರಿಕೆ ವಹಿಸಲು ಸೂಚನೆ
ಮುಧೋಳ, ಔರಾದ್, ಅಡಕಿ, ಸುಂಟಿಕೊಪ್ಪ, ಶನಿವಾರಸಂತೆ, ಚನ್ನಪಟ್ಟಣ, ಬಾಳೆಹೊನ್ನೂರು, ಹೊಸದುರ್ಗ, ಕುರ್ಡಿ, ಕವಡಿಮಟ್ಟಿ, ಶೋರಾಪುರ, ಮೂರ್ನಾಡು, ನಾಪೋಕ್ಲು, ಚಿಕ್ಕಮಗಳೂರು, ಯುಗಟಿ, ಕಳಸ, ಹೊನ್ನಾಳಿ, ಚಿಂಚೋಳಿ, ಸೇಡಂ, ತಾಳಿಕೋಟೆ, ಸೋಮವಾರಪೇಟೆ, ಹಾರಂಗಿ, ಶ್ರೀಮಂಗಲ, ಶ್ರವಣಬೆಳಗೊಳದಲ್ಲಿ ಮಳೆಯಾಗಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ರಾತ್ರಿ ವೇಳೆಗೆ ಹಗುರ ಮಳೆಯಾಗುವ ಸಾಧ್ಯತೆ ಇದೆ, ಎಚ್ಎಎಲ್ನಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 33.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 33.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ