AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather: ಕರ್ನಾಟಕದ ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ 6 ದಿನಗಳ ಕಾಲ ಮಳೆ ಸಾಧ್ಯತೆ

ರಾಜ್ಯಾದ್ಯಂತ ಶೀತಗಾಳಿ ಬೀಸುತ್ತಿದೆ, ಮಂಜು ಮುಸುಕಿದ ವಾತಾವರಣವಿದೆ, ಇದರ ನಡುವೆ ಹವಾಮಾನ ಇಲಾಖೆ ಮಳೆಯ ಮುನ್ಸೂಚನೆ ನೀಡಿದೆ. ಇಂದಿನಿಂದ ಜನವರಿ 10ರವರೆಗೆ ದಕ್ಷಿಣ ಒಳನಾಡು, ಕರಾವಳಿ ಹಾಗೂ ಉತ್ತರ ಒಳನಾಡಿನ ಕೆಲವೇ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎನ್ನಲಾಗಿದೆ. ಬೆಂಗಳೂರಿನಲ್ಲಿ ಬುಧವಾರದಿಂದಲೂ ಮೋಡಕವಿದ ವಾತಾವರಣವಿದೆ.

Karnataka Weather: ಕರ್ನಾಟಕದ ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ 6 ದಿನಗಳ ಕಾಲ ಮಳೆ ಸಾಧ್ಯತೆ
ಮಳೆImage Credit source: Popular Mechanics
ನಯನಾ ರಾಜೀವ್
|

Updated on: Jan 04, 2024 | 7:26 AM

Share

ರಾಜ್ಯಾದ್ಯಂತ ಶೀತಗಾಳಿ ಬೀಸುತ್ತಿದೆ, ಮಂಜು ಮುಸುಕಿದ ವಾತಾವರಣವಿದೆ, ಇದರ ನಡುವೆ ಹವಾಮಾನ ಇಲಾಖೆ ಮಳೆಯ ಮುನ್ಸೂಚನೆ ನೀಡಿದೆ. ಇಂದಿನಿಂದ ಜನವರಿ 10ರವರೆಗೆ ದಕ್ಷಿಣ ಒಳನಾಡು, ಕರಾವಳಿ ಹಾಗೂ ಉತ್ತರ ಒಳನಾಡಿನ ಕೆಲವೇ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎನ್ನಲಾಗಿದೆ. ಬೆಂಗಳೂರಿನಲ್ಲಿ ಬುಧವಾರದಿಂದಲೂ ಮೋಡಕವಿದ ವಾತಾವರಣವಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ,ಕೊಪ್ಪಳ, ರಾಯಚೂರು, ವಿಜಯಪುರದಲ್ಲಿ ಮಳೆಯಾಗಲಿದೆ. ಹಾಗೆಯೇ ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ದಕ್ಷಿಣ ಕನ್ನಡದ ಮಾಣಿಯಲ್ಲಿ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ.

ವಿಜಯಪುರದಲ್ಲಿ 12.0 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ, ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಹಗುರ ಮಳೆಯಾಗುವ ಸಾಧ್ಯತೆ ಇದೆ. 27 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಎಚ್​ಎಎಲ್​ನಲ್ಲಿ 27.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 27.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ಕರ್ನಾಟಕದಾದ್ಯಂತ ಶೀತಗಾಳಿ, 22ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನವರಿ 9ರವರೆಗೆ ಮಳೆ

ಹೊನ್ನಾವರದಲ್ಲಿ 33.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 34.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮಂಗಳೂರಿನಲ್ಲಿ 30.4ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 30.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 15.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಮೈಸೂರಿನಲ್ಲಿ 29.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಶಿವಮೊಗ್ಗದಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ