Karnataka Weather: ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು, ಮೈಸೂರು, ಕೋಲಾರ ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ

ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು, ಮೈಸೂರು, ಕೋಲಾರ ಸೇರಿದಂತೆ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Weather: ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು, ಮೈಸೂರು, ಕೋಲಾರ ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ
ಮಳೆ
Image Credit source: The Weather Channel

Updated on: Mar 26, 2023 | 8:14 AM

ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು, ಮೈಸೂರು, ಕೋಲಾರ ಸೇರಿದಂತೆ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಮೈಸೂರು, ರಾಮನಗರ, ಚಾಮರಾಜನಗರ, ಕೊಡಗು ಜಿಲ್ಲೆಯಲ್ಲಿ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ತಾಪಮಾನ 2 ಡಿಗ್ರಿಗಳಷ್ಟು ಕಡಿಮೆಯಾಗುವ ನಿರೀಕ್ಷೆ ಇದೆ, ಇನ್ನು ಕರಾವಳಿ ಪ್ರದೇಶದಲ್ಲಿ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್​ನಷ್ಟು ಹೆಚ್ಚಾಗಲಿದೆ.

ಬೆಂಗಳೂರಿನಲ್ಲಿ ಭಾಗಶಃ ಮೋಡಕವಿದ ವಾತಾವರಣವಿರಲಿದೆ, ಸಂಜೆ ವೇಳೆ ಗುಡುಗು ಸಹಿತ ಮಳೆಯಾಗಲಿದೆ. ಎಚ್​ಎಎಲ್​ನಲ್ಲಿ 33.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 34.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 34.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕಲಬುರಗಿಯಲ್ಲಿ 38.2 ಡಿಗ್ರಿ ಸೆಲ್ಸಿಯಸ್​ ಅತಿ ಗರಿಷ್ಠ ಉಷ್ಣಾಂಶ, ಧಾರವಾಡದಲ್ಲಿ 15.6 ಡಿಗ್ರಿ ಸೆಲ್ಸಿಯಸ್​ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Summer: ಬೇಸಿಗೆಯ ಬಿಸಿ ಗಾಳಿ ಎದುರಿಸಲು ಸಿದ್ಧತೆ; ಪರಿಶೀಲನೆಗೆ ಉನ್ನತ ಮಟ್ಟದ ಸಭೆ ನಡೆಸಿದ ಪ್ರಧಾನಿ ಮೋದಿ

ಶನಿವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ದೆಹಲಿಯಲ್ಲಿ 12 ಮಿಮೀ ಮಳೆ ಸುರಿದಿದೆ. ಇದು ಕಳೆದ ಮೂರು ವರ್ಷಗಳಲ್ಲಿ ಮಾರ್ಚ್‌ ತಿಂಗಳಲ್ಲಿ ದಿನವೊಂದರಲ್ಲಿ ಸುರಿದ ಗರಿಷ್ಠ ಮಳೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.

ದೆಹಲಿಯ ಪ್ರಾಥಮಿಕ ಹವಾಮಾನ ಕೇಂದ್ರವಾದ ಸಫ್ದರ್‌ಜಂಗ್ ವೀಕ್ಷಣಾಲಯವು, ಶುಕ್ರವಾರ ಬೆಳಿಗ್ಗೆ 8.30ರಿಂದ ಶನಿವಾರ ಬೆಳಿಗ್ಗೆ 8.30ರ ನಡುವೆ 12 ಮಿಮೀ ಮಳೆ ಸುರಿದಿದೆ ಎಂದಿದೆ.
ನಗರದಲ್ಲಿ ಕನಿಷ್ಠ ತಾಪಮಾನ 15.3 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಇದು ಈ ಋತುವಿನ ಸರಾಸರಿಗಿಂತ ಎರಡು ಪಟ್ಟು ಕಡಿಮೆ. ಆರ್ದ್ರತೆಯು ಬೆಳಗ್ಗೆ 8.30ಕ್ಕೆ ಶೇ 85ರಷ್ಟು ದಾಖಲಾಗಿದೆ ಎಂದು ಐಎಂಡಿ ತಿಳಿಸಿದೆ.

ಹಗಲಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರುವ ಸಾಧ್ಯತೆಯಿದ್ದು, ಗರಿಷ್ಠ ತಾಪಮಾನವು ಸುಮಾರು 30 ಡಿಗ್ರಿ ಸೆಲ್ಸಿಯಸ್ ಆಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಳಿಗ್ಗೆ 9 ಗಂಟೆಗೆ ದೆಹಲಿಯ ವಾಯು ಗುಣಮಟ್ಟ ಸೂಚ್ಯಂಕ (AQI) ಮಧ್ಯಮ ವಿಭಾಗದಲ್ಲಿ 102 ರಲ್ಲಿ ದಾಖಲಾಗಿದೆ.

 

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ