ಬೆಂಗಳೂರು: ಕರ್ನಾಟಕದ ಬಹುತೇಕ ಭಾಗಗಳ ಹವಾಮಾನ ಕಳೆದ ಹದಿನೈದು ದಿನಗಳಿಂದ ಮಳೆಗಾಲದಂತಾಗಿದ್ದು, ಮೇ ತಿಂಗಳ ಬಿರು ಬೇಸಿಗೆ ಮರೆಯಾಗಿದೆ. ತೌಕ್ತೆ ಚಂಡಮಾರುತದ ಪರಿಣಾಮ ಕರಾವಳಿ, ಮಲೆನಾಡು ಸೇರಿದಂತೆ ಕೆಲ ಪ್ರದೇಶಗಳಲ್ಲಿ ಭಾರೀ ಮಳೆಯಾದ ನಂತರ ಯಾಸ್ ಅಡ್ಡ ಪರಿಣಾಮವೂ ರಾಜ್ಯದ ಕೆಲವು ಭಾಗಗಳಲ್ಲಿ ಮಳೆ ಸುರಿಸಿದೆ. ಮೂರ್ನಾಲ್ಕು ದಿನಗಳಿಂದೀಚೆಗೆ ಮಳೆ ಕೊಂಚ ಸುಧಾರಿಸಿದೆಯಾದರೂ ಕೆಲವೆಡೆ ದಿನದ ಒಂದು ಹೊತ್ತಿನಲ್ಲಾದರೂ ಸುರಿದು ಹೋಗುತ್ತಿದೆ. ಇಂದು ರಾಜ್ಯದ ಬಹುತೇಕ ಕಡೆ ಒಣ ಹವೆ ಇರಲಿದ್ದು, ಕೆಲವೆಡೆ ಮೋಡ ಕವಿದ ವಾತಾವರಣ ಇರಲಿದೆ. ಯಾಸ್ ಚಂಡಮಾರುತ ಹಿನ್ನೆಲೆ ಮಲೆನಾಡು, ಕರಾವಳಿ ಭಾಗದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯ ವರದಿಗಳು ತಿಳಿಸಿವೆ.
ಮಲೆನಾಡು ಭಾಗದಲ್ಲಿ ನಿನ್ನೆ ತಡರಾತ್ರಿ ವೇಳೆ ಮಳೆ ಸುರಿದು, ಈಗ ಮೋಡ ಕವಿದಿರುವ ಕಾರಣ ಯಾವ ಹೊತ್ತಿನಲ್ಲಾದರೂ ಮಳೆ ಸುರಿಯಬಹುದೆಂಬ ನಿರೀಕ್ಷೆ ಇದೆ. ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನ ಕೆಲ ಭಾಗದಲ್ಲಿ ಯಾಸ್ ಚಂಡಮಾರುತದ ಪ್ರಭಾವದಿಂದಾಗಿ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಬಹುತೇಕ ಕಡೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ.
ಉತ್ತರ ಕರ್ನಾಟಕ ಭಾಗದಲ್ಲಿ ಬಿಸಿಲಿನ ತಾಪ ಕೊಂಚ ಜೋರಾಗಿಯೇ ಇರಲಿದ್ದು, ಯಾದಗಿರಿ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 37 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್, ಬೀದರ್ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 34 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ವರದಿಗಳು ತಿಳಿಸಿವೆ.
ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ಮಡಿಕೇರಿಯಲ್ಲಿ ಗರಿಷ್ಠ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ 18 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್, ಶಿವಮೊಗ್ಗದಲ್ಲಿ ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್, ಮೈಸೂರಿನಲ್ಲಿ ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ಉಳಿದ ನಗರಗಳ ಗರಿಷ್ಠ ಹಾಗೂ ಕನಿಷ್ಠ ಉಷ್ಣಾಂಶ ಮಾಹಿತಿ
ಮಂಗಳೂರು: ಗರಿಷ್ಠ30 ಡಿಗ್ರಿ ಸೆಲ್ಸಿಯಸ್, ಕನಿಷ್ಠ 26 ಡಿಗ್ರಿ ಸೆಲ್ಸಿಯಸ್
ಉಡುಪಿ: ಗರಿಷ್ಠ30 ಡಿಗ್ರಿ ಸೆಲ್ಸಿಯಸ್, ಕನಿಷ್ಠ 26 ಡಿಗ್ರಿ ಸೆಲ್ಸಿಯಸ್
ಕಾರವಾರ: ಗರಿಷ್ಠ30 ಡಿಗ್ರಿ ಸೆಲ್ಸಿಯಸ್, ಕನಿಷ್ಠ 27 ಡಿಗ್ರಿ ಸೆಲ್ಸಿಯಸ್
ಬೆಳಗಾವಿ: ಗರಿಷ್ಠ29 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್
ಮಂಡ್ಯ: ಗರಿಷ್ಠ32 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್
ಹಾಸನ: ಗರಿಷ್ಠ28 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್
ರಾಮನಗರ: ಗರಿಷ್ಠ32 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್
ಕೋಲಾರ: ಗರಿಷ್ಠ32 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್
ತುಮಕೂರು: ಗರಿಷ್ಠ 32 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್
ಕೊಪ್ಪಳ: ಗರಿಷ್ಠ34 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್
ವಿಜಯಪುರ: ಗರಿಷ್ಠ32 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್
ರಾಯಚೂರು: ಗರಿಷ್ಠ 36 ಡಿಗ್ರಿ ಸೆಲ್ಸಿಯಸ್, ಕನಿಷ್ಠ 27 ಡಿಗ್ರಿ ಸೆಲ್ಸಿಯಸ್
ಕಲಬುರಗಿ: ಗರಿಷ್ಠ36 ಡಿಗ್ರಿ ಸೆಲ್ಸಿಯಸ್, ಕನಿಷ್ಠ 27 ಡಿಗ್ರಿ ಸೆಲ್ಸಿಯಸ್
ಬಾಗಲಕೋಟೆ: ಗರಿಷ್ಠ34 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್
ಚಾಮರಾಜನಗರ: ಗರಿಷ್ಠ32 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್
ದಾವಣಗೆರೆ: ಗರಿಷ್ಠ32 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್
ಚಿತ್ರದುರ್ಗ: ಗರಿಷ್ಠ32 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್
ಹಾವೇರಿ: ಗರಿಷ್ಠ32 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್
ಗದಗ: ಗರಿಷ್ಠ32 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್
ಚಿಕ್ಕಬಳ್ಳಾಪುರ: ಗರಿಷ್ಠ32 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್
ಇದನ್ನೂ ಓದಿ:
Monsoon 2021: ಸೋಮವಾರದಂದು ಕೇರಳ ಪ್ರವೇಶಿಸಲು ಸಜ್ಜಾದ ಮುಂಗಾರು; ಬಲಗೊಳ್ಳುತ್ತಿದೆ ನೈರುತ್ಯ ಮಾರುತ
Cyclone Yaas: 4 ದಿನ ಮುಂಚೆಯೇ ಕರ್ನಾಟಕಕ್ಕೆ ಮುಂಗಾರು ಪ್ರವೇಶ; ಇದು ಪ್ರಚಂಡ ಮಾರುತ ಯಾಸ್ ಪರಿಣಾಮ: ಏನಿದರ ಪ್ರಕೋಪ?
Published On - 8:30 am, Sat, 29 May 21