Karnataka Weather Today: ಬೆಂಗಳೂರು, ಮಲೆನಾಡು ಸೇರಿ 11 ಜಿಲ್ಲೆಗಳಲ್ಲಿ ಇಂದು ವಿಪರೀತ ಮಳೆ; ಆರೆಂಜ್ ಅಲರ್ಟ್​ ಘೋಷಣೆ

Karnataka Rain: ನವೆಂಬರ್ 23ರವರೆಗೆ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಹಾಸನ, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ವಿಪರೀತ ಮಳೆ ಸುರಿಯುವ ಸಾಧ್ಯತೆಯಿದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

Karnataka Weather Today: ಬೆಂಗಳೂರು, ಮಲೆನಾಡು ಸೇರಿ 11 ಜಿಲ್ಲೆಗಳಲ್ಲಿ ಇಂದು ವಿಪರೀತ ಮಳೆ; ಆರೆಂಜ್ ಅಲರ್ಟ್​ ಘೋಷಣೆ
ತಮಿಳುನಾಡಿನಲ್ಲಿ ಮಳೆ
Follow us
TV9 Web
| Updated By: preethi shettigar

Updated on: Nov 19, 2021 | 7:08 AM

Bengaluru Rain: ಬೆಂಗಳೂರು: ಕರ್ನಾಟಕದಲ್ಲಿ ಬೆಂಗಳೂರು, ಮೈಸೂರು, ಶಿವಮೊಗ್ಗ, ಕೊಡಗು, ಮಲೆನಾಡು ಸೇರಿದಂತೆ 11 ಜಿಲ್ಲೆಗಳಲ್ಲಿ ಇಂದಿನಿಂದ ನವೆಂಬರ್ 23ರವರೆಗೆ ಭಾರೀ (Heavy Rain) ಮಳೆಯಾಗಲಿದ್ದು, ಇಂದು ಆರೆಂಜ್ ಅಲರ್ಟ್​ (Orange Alert) ಘೋಷಿಸಲಾಗಿದೆ. ಭಾರತ ಹವಾಮಾನ ಇಲಾಖೆ (ಐಎಂಡಿ) ಬೆಂಗಳೂರಿನಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಿಸಿದ್ದು, ನವೆಂಬರ್ 23ರವರೆಗೆ ವ್ಯಾಪಕ ಮಳೆಯಾಗುವ (Karnataka Rain) ಮುನ್ಸೂಚನೆ ನೀಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಿಗೆ ಹವಾಮಾನ ಇಲಾಖೆ (IMD) ಹಳದಿ ಅಲರ್ಟ್ (Yellow Alert) ಘೋಷಿಸಿದೆ.

ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ನವೆಂಬರ್ ತಿಂಗಳಲ್ಲಿ ಅತಿ ಹೆಚ್ಚು ಮಳೆಯಾಗುವ ನಿರೀಕ್ಷೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಕಡಿಮೆ ಒತ್ತಡದ ವಾತಾವರಣದಿಂದ ಮಳೆಯಾಗುತ್ತಿದ್ದು, ಈಗ ಕಡಿಮೆ ಒತ್ತಡ ಉಂಟಾಗಿ ವಾಯುಭಾರ ಕುಸಿತ ಉಂಟಾಗಿದೆ. ಬೆಂಗಳೂರಿನಲ್ಲಿ ಇಂದು ಮೋಡ ಕವಿದ ವಾತಾವರಣ ಮುಂದುವರಿಯಲಿದೆ. ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ರಾಮನಗರ, ತುಮಕೂರು, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಸೇರಿದಂತೆ ಕರ್ನಾಟಕದ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಇಂದು ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿರುವುದರಿಂದ ಹಳದಿ ಅಲರ್ಟ್ ನೀಡಲಾಗಿದೆ.

ನವೆಂಬರ್ 23ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಹಾಸನ, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಹೆಚ್ಚು ಮಳೆ ಸುರಿಯುವ ಭೀತಿ ಎದುರಾಗಿದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಇದರ ಜೊತೆಗೆ, ಏಳು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲದೆ ಗೋವಾ, ಮಹಾರಾಷ್ಟ್ರ ಮತ್ತು ಕೊಂಕಣದಲ್ಲಿ ಗುಡುಗು ಮತ್ತು ಸಿಡಿಲು ಸಹಿತ ಮಳೆಯಾಗಲಿದೆ. ತಮಿಳುನಾಡು, ಕರ್ನಾಟಕ ಮತ್ತು ಕೇರಳ ಇತರ ರಾಜ್ಯಗಳಲ್ಲಿ ಅತ್ಯಂತ ಭಾರೀ ಮಳೆಯು ಮುಂದುವರಿಯಲಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕರ್ನಾಟಕ, ತಮಿಳುನಾಡು, ಪುದುಚೇರಿ, ಕಾರೈಕಲ್ ಮತ್ತು ಆಂಧ್ರಪ್ರದೇಶದಲ್ಲಿ ನವೆಂಬರ್ 21ರವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಆಂಧ್ರಪ್ರದೇಶದ ರಾಯಲಸೀಮಾದಲ್ಲಿ ಇಂದು ಮಳೆಯಾಗಲಿದೆ. ಇಂದು ತೆಲಂಗಾಣದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದು ಕೇರಳ, ಒಡಿಶಾ ಮತ್ತು ಪುದುಚೇರಿ, ಮಾಹೆಯಲ್ಲಿ ಮಳೆಯಾಗುವ ಸಾಧ್ಯತೆಯಿದೆ. ನವೆಂಬರ್ 20ರಂದು ಕೂಡ ಈ ಪ್ರದೇಶಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಇಂದಿನವರೆಗೆ ಮಹಾರಾಷ್ಟ್ರ, ಗೋವಾ ಮತ್ತು ಕೊಂಕಣದಲ್ಲಿ ಮಿಂಚು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಇಂದು ಉತ್ತರ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್ ಮತ್ತು ದಕ್ಷಿಣ ಕರಾವಳಿ ಆಂಧ್ರಪ್ರದೇಶದಲ್ಲಿ ಪ್ರತ್ಯೇಕವಾದ ಭಾರೀ ಮತ್ತು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಹವಾಮಾನ ಸಂಸ್ಥೆಯ ಪ್ರಕಾರ, ವಾರದಲ್ಲಿ ಈ ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಕರ್ನಾಟಕ ಮಾತ್ರವಲ್ಲದೆ ಗೋವಾ, ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು ಮತ್ತು ಕೇರಳದಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಇಂದು ಆಂಧ್ರಪ್ರದೇಶ ಮತ್ತು ತಮಿಳುನಾಡಿನ ಕೆಲವೆಡೆ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ರಾಜಸ್ಥಾನ, ಗುಜರಾತ್, ಮಹಾರಾಷ್ಟ್ರ, ಆಂಧ್ರಪ್ರದೇಶ ಮತ್ತು ಲಕ್ಷದ್ವೀಪಗಳಲ್ಲಿ ಸ್ಥಳೀಯವಾಗಿ ಗುಡುಗು ಸಹಿತ ಚದುರಿದ ಮಳೆಯಾಗುವ ಸಾಧ್ಯತೆಯಿದೆ. ಒಡಿಶಾ, ಛತ್ತೀಸ್‌ಗಢ, ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶದಲ್ಲಿ ಪ್ರತ್ಯೇಕ ಮಳೆಯಾಗುವ ಸಾಧ್ಯತೆಯಿದೆ.

ಇಂದು ತಮಿಳುನಾಡು ಮತ್ತು ಆಂಧ್ರಪ್ರದೇಶದಲ್ಲಿ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ಉತ್ತರ ತಮಿಳುನಾಡು ಕರಾವಳಿಯ ನೈಋತ್ಯ ಬಂಗಾಳ ಕೊಲ್ಲಿಯಲ್ಲಿನ ವಾಯುಭಾರ ಕುಸಿತವು ಪಶ್ಚಿಮ-ವಾಯುವ್ಯದ ಕಡೆಗೆ ಚಲಿಸಿದೆ. ಭಾರತೀಯ ಹವಾಮಾನ ಇಲಾಖೆಯು ಚೆನ್ನೈ ಮತ್ತು ಇತರ 16 ಜಿಲ್ಲೆಗಳಿಗೆ ಇಂದು ರೆಡ್ ಅಲರ್ಟ್ ಘೋಷಿಸಿದೆ. ಚೆನ್ನೈ ಜಿಲ್ಲಾಧಿಕಾರಿಗಳು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ. ಕಡಲೂರು, ವಿಲ್ಲುಪುರಂ, ಚೆಂಗಲ್ಪಟ್ಟು, ಕಾಂಚೀಪುರಂ, ಚೆನ್ನೈ ಮತ್ತು ತಿರುವಳ್ಳೂರು ಸೇರಿದಂತೆ 16 ಜಿಲ್ಲೆಗಳಲ್ಲಿ ಹಾಗೂ ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯಲ್ಲಿ ರೆಡ್ ಅಲರ್ಟ್​ ನೀಡಲಾಗಿದೆ. ಪೆರಂಬಲೂರು, ಅರಿಯಲೂರು, ಧರ್ಮಪುರಿ, ತಿರುಪತ್ತೂರು, ವೆಲ್ಲೂರು ಮತ್ತು ರಾಣಿಪೇಟ್‌ನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Tamil Nadu Rain: ತಮಿಳುನಾಡಿನಲ್ಲಿ ಮಳೆಯಿಂದ 16 ಜಿಲ್ಲೆಗಳಲ್ಲಿ ರೆಡ್ ಅಲರ್ಟ್​ ಘೋಷಣೆ; ಶಾಲೆ, ಕಾಲೇಜು ಬಂದ್

Karnataka Rain: ಬೆಂಗಳೂರು ಸೇರಿದಂತೆ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂದುವರಿದ ಮಳೆ: 6 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ