Karnataka Weather Today: ಬೆಂಗಳೂರಿನಲ್ಲಿ ಇನ್ನೂ 4 ದಿನ ಭಾರೀ ಮಳೆ; ಕರಾವಳಿಯಲ್ಲೂ ಸೆ. 6ರವರೆಗೆ ವರುಣನ ಆರ್ಭಟ
Karnataka Rain Today: ಬೆಂಗಳೂರಿನಲ್ಲಿ ಇಂದಿನಿಂದ ನಾಲ್ಕೈದು ದಿನ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Karnataka Rain | ಕರ್ನಾಟಕದ ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಮಳೆ ಮುಂದುವರೆಯಲಿದೆ. ರಾಜ್ಯದಲ್ಲಿ ಕಳೆದೊಂದು ವಾರದಿಂದ ಮಳೆಯ ಆರ್ಭಟ ಜಾಸ್ತಿಯಾಗಿದ್ದು, ಇಂದಿನಿಂದ 3 ದಿನ ಮತ್ತೆ ಮಳೆ ಮುಂದುವರೆಯಲಿದೆ. ಸೆ. 5 ಮತ್ತು 6ರಂದು ಕರ್ನಾಟಕದ (Rain in Karnataka) ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಹವಾಮಾನ ಇಲಾಖೆಯಿಂದ (IMD) ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲೂ (Bengaluru Rain) ಇಂದಿನಿಂದ 4- 5 ದಿನ ಮಳೆ ಹೆಚ್ಚಾಗಲಿದೆ. ಬೆಂಗಳೂರಿನಲ್ಲಿ ನಿನ್ನೆ ಮಳೆ ಕೊಂಚ ಕಡಿಮೆಯಾಗಿದ್ದು, ಇಂದಿನಿಂದ ಮತ್ತೆ ಹೆಚ್ಚಾಗಲಿದೆ. ಕರ್ನಾಟಕದ ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ಸೆ. 5 ಮತ್ತು 6ರಂದು ಗುಡುಗು- ಸಹಿತ ಭಾರೀ ಮಳೆಯಾಗಲಿದೆ.
ಬೆಂಗಳೂರಿನಲ್ಲಿ ಇಂದಿನಿಂದ ನಾಲ್ಕೈದು ದಿನ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅರಬ್ಬಿ ಸಮುದ್ರ ಮತ್ತು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದೆ. ಇದರಿಂದ ಮಳೆ ಹೆಚ್ಚಾಗಿದೆ. ಆಗಸ್ಟ್ ಕೊನೆಯ ವಾರದಲ್ಲಿ ಕರ್ನಾಟಕದಲ್ಲಿ ಉತ್ತಮ ಮಳೆಯಾಗಿದೆ. ಇನ್ನೂ ನಾಲ್ಕು ದಿನ ಮಳೆ ಮುಂದುವರೆಯಲಿದೆ ಎಂದು ಬೆಂಗಳೂರು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.
ಇಂದಿನಿಂದ ಸೆ. 6ರವರೆಗೂ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಬೆಂಗಳೂರು, ಚಿಕ್ಕಬಳ್ಳಾಪುರ, ಹಾಸನ, ಕೋಲಾರ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಇಂದು ಮಿಂಚು, ಗಾಳಿ, ಗುಡುಗು ಸಹಿತ ವ್ಯಾಪಕ ಮಳೆಯಾಗಲಿದೆ. ಸೆ. 5 ಮತ್ತು 6ರಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಬೀದರ್, ಕಲಬುರ್ಗಿ, ವಿಜಯಪುರ, ಹಾಸನ, ಕೊಡಗು ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕರ್ನಾಟಕದಲ್ಲಿ ಸೆ. 6ರಂದು ವಿಪರೀತ ಮಳೆಯಾಗುವ ಸಾಧ್ಯತೆಯಿದೆ.
ಇಂದಿನಿಂದ ಸೆ. 6ರವರೆಗೂ ಕರಾವಳಿಯಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದೆ. ಸೆಪ್ಟೆಂಬರ್ ತಿಂಗಳಲ್ಲಿ ಸಾಮಾನ್ಯಕ್ಕಿಂತ ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನಲ್ಲಿ ಮಳೆ ಹೆಚ್ಚಾಗಿದೆ. ರಾಮನಗರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಕೋಲಾರ ಜಿಲ್ಲೆಗಳಲ್ಲಿ ಕೂಡ ಇಂದು ಸಾಧಾರಣ ಮಳೆಯಾಗಲಿದೆ. ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ 4 ದಿನ ಗುಡುಗು ಸಹಿತ ಮಳೆಯಾಗಲಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ನಿರೀಕ್ಷೆ ಇದ್ದು, ಇಂದು ಹಳದಿ ಅಲರ್ಟ್ ಘೋಷಿಸಲಾಗಿದೆ.
ಇಂದಿನಿಂದ 4 ದಿನ ಕರಾವಳಿ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದ್ದು, ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ರಾಯಚೂರು, ಧಾರವಾಡ, ಹಾವೇರಿ, ಗದಗ, ಬಳ್ಳಾರಿ, ಮಂಡ್ಯ, ತುಮಕೂರು ಜಿಲ್ಲೆಗಳಲ್ಲಿ ಕಳೆದ ವರ್ಷಕ್ಕಿಂತಲೂ ಹೆಚ್ಚು ಮಳೆಯಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕ ಮಾತ್ರವಲ್ಲದೆ ಇನ್ನೂ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದೆ. ಮೂರ್ನಾಲ್ಕು ದಿನಗಳಿಂದ ಶಿವಮೊಗ್ಗ, ಹಾಸನ, ಚಿಕ್ಕಬಳ್ಳಾಪುರ, ಬೆಂಗಳೂರು, ಧಾರವಾಡ, ಬೆಳಗಾವಿಯಲ್ಲಿ ನಿರೀಕ್ಷಿತ ಮಳೆ ಸುರಿದಿಲ್ಲ.
ಕರ್ನಾಟಕ, ಬಿಹಾರ, ಮಧ್ಯಪ್ರದೇಶ, ದೆಹಲಿ, ಉತ್ತರಾಖಂಡ ರಾಜ್ಯಗಳಲ್ಲಿ ಕೂಡ ಇಂದು ವ್ಯಾಪಕ ಮಳೆಯಾಗಲಿದೆ. ಹಾಗೇ, ತಮಿಳುನಾಡು, ರಾಯಲಸೀಮೆ, ಆಂಧ್ರಪ್ರದೇಶ, ಸೌರಾಷ್ಟ್ರ, ಮಾಹೆ, ಅರುಣಾಚಲಪ್ರದೇಶ, ಉತ್ತರ ಪ್ರದೇಶ, ಮಧ್ಯಪ್ರದೇಶ, ಮಹಾರಾಷ್ಟ್ರ, ತೆಲಂಗಾಣ, ವಿದರ್ಭ, ಬಿಹಾರ, ಪಶ್ಚಿಮ ಬಂಗಾಳ, ಹಿಮಾಚಲ ಪ್ರದೇಶ, ಪುದುಚೆರಿ, ಛತ್ತೀಸ್ಗಢ, ಚಂಡೀಗಢ, ಹರಿಯಾಣ, ಪಂಜಾಬ್, ಲಕ್ಷದ್ವೀಪ, ಅಂಡಮಾನ್-ನಿಕೋಬಾರ್, ಜಮ್ಮು ಕಾಶ್ಮೀರ, ಬಿಹಾರ, ಜಾರ್ಖಂಡ್, ಪಶ್ಚಿಮ ಬಂಗಾಳ, ಸಿಕ್ಕಿಂ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರ, ಗೋವಾ, ಒರಿಸ್ಸಾ, ರಾಜ್ಯಗಳಲ್ಲಿ ಇಂದಿನಿಂದ ಸೆ. 5ರವರೆಗೆ ಭಾರೀ ಮಳೆಯಾಗಲಿದೆ.
ಇದನ್ನೂ ಓದಿ: Karnataka Weather Today: ಕರಾವಳಿ, ಮಲೆನಾಡು ಸೇರಿ ಹಲವೆಡೆ ಸೆ. 6ರವರೆಗೂ ಗುಡುಗು ಸಹಿತ ಭಾರೀ ಮಳೆ
(Karnataka weather Today Bengaluru Rain Continues for 4 More Days Rainfall in Karnataka IMD Karnataka Rain)