Bangalore Rain: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದಲ್ಲಿ ಮತ್ತೆ ವರುಣನ ಆರ್ಭಟ ಶುರುವಾಗಿದೆ. ನಿನ್ನೆ ಬೆಂಗಳೂರಿನಲ್ಲಿ ಸುರಿದ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಮಲೆನಾಡು, ಕೊಡಗು, ಕರಾವಳಿಯಲ್ಲೂ ಮಳೆ ಹೆಚ್ಚಾಗಿದೆ. ಇಂದು ಕರ್ನಾಟಕದ (Karnataka Rain) ಬಹುತೇಕ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ನಾಳೆಯಿಂದ 2 ದಿನ ವಿಪರೀತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ (IMD) ನೀಡಿದೆ. ಬೆಂಗಳೂರಿನಲ್ಲಿ (Bengaluru Rain) ಇಂದು ಸಂಜೆ ಕೂಡ ಮಳೆ ಸುರಿಯುವ ನಿರೀಕ್ಷೆಯಿದೆ.
ಈಗಾಗಲೇ ಮುಂಗಾರು ಅಂತ್ಯವಾಗಿದ್ದರೂ ಅ. 6ರವರೆಗೂ ಮಳೆ ಮುಂದುವರಿಯಲಿದೆ. ಅ. 5 ಮತ್ತು 6ರಂದು ರಾಜ್ಯಾದ್ಯಂತ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ. ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಮಂಡ್ಯ, ಚಾಮರಾಜನಗರ, ಕೊಡಗಿನಲ್ಲಿ ಅ. 5 ಮತ್ತು 6ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ತುಮಕೂರು, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಬೀದರ್, ಕೊಪ್ಪಳ, ರಾಯಚೂರು, ಕಲಬುರ್ಗಿ, ವಿಜಯಪುರ, ಧಾರವಾಡ, ಗದಗ ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾಗಲಿದೆ.
ನಿನ್ನೆ ಬೆಂಗಳೂರಿನಲ್ಲಿ ವಿಪರೀತ ಮಳೆಯಾಗಿದ್ದು, ಬನಶಂಕರಿ, ಬಸವನಗುಡಿ, ಜಯನಗರ, ಜೆಪಿ ನಗರ, ಕೋರಮಂಗಲ, ಹನುಮಂತನಗರ, ಗಿರಿನಗರ, ಎಂಜಿ ರಸ್ತೆ, ಪದ್ಮನಾಭನಗರ, ಉತ್ತರಹಳ್ಳಿ, ಆರ್ಆರ್ ನಗರ, ವಿಜಯನಗರ, ಚಾಮರಾಜಪೇಟೆ ಸುತ್ತಮುತ್ತಲೂ ಭಾನುವಾರ ಸಂಜೆಯಿಂದ ಮಧ್ಯರಾತ್ರಿಯವರೆಗೂ ಮಳೆ ಸುರಿದ ಪರಿಣಾಮ ಮನೆಗಳಿಗೆ ನೀರು ನುಗ್ಗಿ, ರಸ್ತೆಗಳೆಲ್ಲ ಕೆರೆಗಳಂತಾಗಿತ್ತು. ಕೆಲವೆಡೆ ರಾಜಕಾಲುವೆ ಉಕ್ಕಿ ಹರಿದ ಘಟನೆಯೂ ನಡೆಯಿತು. ಬೆಂಗಳೂರಿನಲ್ಲಿ ರಾತ್ರಿ ಸುರಿದ ಧಾರಾಕಾರ ಮಳೆಯಿಂದ ಹೆಚ್‌ಎಎಲ್ ಬಳಿಯ ರಮೇಶ್ ನಗರದಲ್ಲಿ ಗೋಡೆ ಕುಸಿತವಾಗಿದೆ. ಹೆಚ್‌ಎಎಲ್‌ಗೆ ಸೇರಿದ 12 ಅಡಿ ಎತ್ತರದ ಗೋಡೆ ಕುಸಿತವಾಗಿದೆ.
Widespread moderate to heavy rain reported across #Bengaluru.
Some of the latest rainfall figures are
Nagarabhavi – 113 mm
Rajajinagar – 107 mm
Nandini layout – 85.5 mm
Lakkasandra – 68 mm
Marathahalli – 63 mm
City IMD – 62 mm
Koramangala – 54 mm#BengaluruRains#Karnataka— Bengaluru Weather (@BngWeather) October 3, 2021
ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ರಾಜ್ಯದಲ್ಲಿ ಶೇ. 8ರಷ್ಟು ಕಡಿಮೆ ಮಳೆಯಾಗಿದೆ. ಇಂದು ಸಾಧಾರಣ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಹಾಗೂ ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಮಂಡ್ಯ, ಮೈಸೂರು, ರಾಮನಗರ, ಚಾಮರಾಜನಗರ, ಕೊಡಗು ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗುವುದರಿಂದ ಅ. 6ರಂದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಕರ್ನಾಟಕದಲ್ಲಿ 4 ತಿಂಗಳ ಮುಂಗಾರು ಸೆ. 30ಕ್ಕೆ ಅಂತ್ಯವಾಗಿದೆ. ಕರ್ನಾಟಕದಲ್ಲಿ ಈ ವರ್ಷ 852 ಮಿ.ಮೀ. ಮಳೆಯಾಗಬೇಕಿತ್ತು ಆದರೆ, 787 ಮಿ.ಮೀ. ಮಳೆ ದಾಖಲಾಗಿದೆ. ಕಲಬುರ್ಗಿಯಲ್ಲಿ ಭಾರೀ ಮಳೆಯಿಂದ ಅಪಾರ ಬೆಳೆಗಳು ನಾಶವಾಗಿವೆ. ಕರ್ನಾಟಕ, ಕೇರಳ, ತಮಿಳುನಾಡು, ಲಕ್ಷದ್ವೀಪದಲ್ಲಿ ಇನ್ನೆರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕದ ಜೊತೆಗೆ ಪಶ್ಚಿಮ ಬಂಗಾಳ, ಸಿಕ್ಕಿಂ, ಅಸ್ಸಾಂ, ಮೇಘಾಲಯ, ಅರುಣಾಚಲ ಪ್ರದೇಶ, ನಾಗಾಲ್ಯಾಂಡ್, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಕೇರಳದಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬಿಹಾರ, ತ್ರಿಪುರ, ಮಣಿಪುರ, ಮಿಜೋರಾಂ, ಲಕ್ಷದ್ವೀಪ, ಮಧ್ಯಪ್ರದೇಶ, ಜಾರ್ಖಂಡ್, ಗುಜರಾತ್, ಮಹಾರಾಷ್ಟ್ರ, ಒರಿಸ್ಸಾ, ಕೇರಳ, ತಮಿಳುನಾಡು, ಗೋವಾ, ಉತ್ತರ ಪ್ರದೇಶ, ಜಮ್ಮು ಕಾಶ್ಮೀರ, ಉತ್ತರಾಖಂಡ, ಪಂಜಾಬ್, ಹರಿಯಾಣ, ಛತ್ತೀಸ್ಗಢ, ತೆಲಂಗಾಣ, ಆಂಧ್ರಪ್ರದೇಶದಲ್ಲಿ ಕೂಡ ಅ. 6ರವರೆಗೂ ಮಳೆಯಾಗಲಿದೆ.
ಇದನ್ನೂ ಓದಿ: Karnataka Weather Today: ಕರ್ನಾಟಕದಲ್ಲಿ ಅ. 6ರವರೆಗೂ ಮಳೆ; ಕೊಡಗು, ಹಾಸನ, ಚಿಕ್ಕಮಗಳೂರಿನಲ್ಲಿಂದು ಹಳದಿ ಅಲರ್ಟ್ ಘೋಷಣೆ
Karnataka Rain: ಕರ್ನಾಟಕದಲ್ಲಿ ತಗ್ಗಿದ ವರುಣನ ಅಬ್ಬರ; ಇಂದಿನಿಂದ 3 ದಿನ ಸಾಧಾರಣ ಮಳೆ