AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather Today: ಬೆಂಗಳೂರಿನಲ್ಲಿ ದಟ್ಟ ಮಂಜು; ಕರ್ನಾಟಕದ ಈ ಜಿಲ್ಲೆಗಳಲ್ಲಿ ಶೀತ ಗಾಳಿ

Weather Forecast: ಈ ವಾರವಿಡೀ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಶೀತ ಗಾಳಿ ಮುಂದುವರೆಯಲಿದೆ. ರಾಜ್ಯದ ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಅನೇಕ ಜಿಲ್ಲೆಗಳಲ್ಲಿ ಈ ವಾರ ಪೂರ್ತಿ ಚಳಿ ಹೆಚ್ಚಾಗಲಿದೆ.

Karnataka Weather Today: ಬೆಂಗಳೂರಿನಲ್ಲಿ ದಟ್ಟ ಮಂಜು; ಕರ್ನಾಟಕದ ಈ ಜಿಲ್ಲೆಗಳಲ್ಲಿ ಶೀತ ಗಾಳಿ
ಚಳಿImage Credit source: Getty Image
TV9 Web
| Edited By: |

Updated on: Jan 19, 2023 | 5:58 AM

Share

ಬೆಂಗಳೂರು: ಬೆಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಚಳಿ ಹೆಚ್ಚಾಗಿದೆ. ಬೆಂಗಳೂರಿನಲ್ಲಿ (Bangalore Weather Today) ಮೂರ್ನಾಲ್ಕು ದಿನಗಳಿಂದ ದಟ್ಟವಾದ ಮಂಜು ಆವರಿಸಿದೆ. ಇಂದು ಕೂಡ ಬೆಂಗಳೂರಿನಲ್ಲಿ ಚಳಿ (Winter) ಮತ್ತು ಮಂಜು ಆವರಿಸಲಿದೆ. ಬೆಂಗಳೂರು ಗ್ರಾಮಾಂತರದಲ್ಲಿ ಕೂಡ ಕನಿಷ್ಠ ತಾಪಮಾನ 12 ಡಿಗ್ರಿ ಸೆಲ್ಸಿಯಸ್‌ಗೆ ಇಳಿಯುವ ಸಾಧ್ಯತೆ ಇದೆ. ಕಳೆದ 4 ವರ್ಷಗಳ ಬಳಿಕ ಬೆಂಗಳೂರಿನಲ್ಲಿ ಅತಿ ಕನಿಷ್ಠ 13 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ.

ಬೆಂಗಳೂರಿನಲ್ಲಿ ಇಂದು (ಗುರುವಾರ) ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನವು 13 ಡಿಗ್ರಿ ಸೆಲ್ಸಿಯಸ್ ಆಗುವ ಸಾಧ್ಯತೆಯಿದೆ. ವಾರಾಂತ್ಯದ ವೇಳೆಗೆ ಬೆಂಗಳೂರಿನಲ್ಲಿ ತಾಪಮಾನ ಕನಿಷ್ಠ 16 ಡಿಗ್ರಿ ಸೆಲ್ಸಿಯಸ್‌ಗೆ ಏರಲಿದೆ. ಕರ್ನಾಟಕದ ಉತ್ತರ ಒಳನಾಡಿನ ಸ್ಥಳಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 5ರಿಂದ 6 ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆಯಿರುವ ಸಾಧ್ಯತೆಯಿದೆ. ಇಂದಿನಿಂದ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕನಿಷ್ಠ ತಾಪಮಾನ 14ರಿಂದ 15 ಡಿಗ್ರಿ ಸೆಲ್ಸಿಯಸ್ ಇರಲಿದೆ. ಗರಿಷ್ಠ ತಾಪಮಾನ 29ರಿಂದ 30 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: Bengaluru Weather: ಬೆಂಗಳೂರಿನಲ್ಲಿ ಈ ವಾರವಿಡೀ ಚಳಿ, ಮಂಜಿನ ವಾತಾವರಣ; ಮಲೆನಾಡಿನಲ್ಲಿ ಶೀತ ಗಾಳಿ

ಕರ್ನಾಟಕದಲ್ಲಿ ಮತ್ತೆ ಚಳಿ ಹೆಚ್ಚಾಗಿದೆ. ಈ ವಾರವಿಡೀ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಶೀತ ಗಾಳಿ ಮುಂದುವರೆಯಲಿದೆ. ರಾಜ್ಯದ ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಅನೇಕ ಜಿಲ್ಲೆಗಳಲ್ಲಿ ಈ ವಾರ ಪೂರ್ತಿ ಚಳಿ ಹೆಚ್ಚಾಗಲಿದೆ. ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಂಜು ಕವಿಯುವ ಸಾಧ್ಯತೆಯಿದೆ. ಜ. 20ರವರೆಗೂ ಮಲೆನಾಡು, ಬೆಂಗಳೂರು, ಕೊಡಗು ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ 13ರಿಂದ 14 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಬೆಂಗಳೂರು, ಮಲೆನಾಡು, ಕೊಡಗು, ಕರಾವಳಿಯ ಜೊತೆಗೆ ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕದಲ್ಲಿ ಶೀತ ಗಾಳಿ ಹೆಚ್ಚುತ್ತಲೇ ಇದೆ. ಉತ್ತರ ಕರ್ನಾಟಕದಲ್ಲಿ ಕನಿಷ್ಠ ತಾಪಮಾನ 9ರಿಂದ 13 ಡಿಗ್ರಿ ಸೆಲ್ಸಿಯಸ್ ಇದೆ. ಬಾಗಲಕೋಟೆ, ಬೀದರ್, ರಾಯಚೂರು, ವಿಜಯಪುರ ಭಾಗದಲ್ಲಿ ಶೀತ ಗಾಳಿ ಶುರುವಾಗಿದೆ.

ಇದನ್ನೂ ಓದಿ: Weather Today: ಚಳಿಯ ನಡುವೆ ದೆಹಲಿ, ಹರಿಯಾಣ, ಪಂಜಾಬ್, ಉತ್ತರ ಪ್ರದೇಶದಲ್ಲಿ ಮಳೆಯ ಅಲರ್ಟ್

ಇಂದು ಬೇರೆ ರಾಜ್ಯಗಳಲ್ಲಿ ಹವಾಮಾನ ಹೇಗಿದೆ?:

ದೆಹಲಿ-ಎನ್‌ಸಿಆರ್, ಪಂಜಾಬ್, ರಾಜಸ್ಥಾನ ಮತ್ತು ಹರಿಯಾಣ ಸೇರಿದಂತೆ ಹಲವು ರಾಜ್ಯಗಳಲ್ಲಿ ಶೀತ ಅಲೆಯ ಪರಿಸ್ಥಿತಿಗಳು ಚಾಲ್ತಿಯಲ್ಲಿರುವ ಕಾರಣ ಭಾರತೀಯ ಹವಾಮಾನ ಇಲಾಖೆ ಉತ್ತರ ಭಾರತದ ಹಲವು ಭಾಗಗಳಿಗೆ ಆರೆಂಜ್ ಮತ್ತು ಹಳದಿ ಅಲರ್ಟ್ ನೀಡಿದೆ. ಹಿಮಾಚಲ ಪ್ರದೇಶ, ಜಮ್ಮು-ಕಾಶ್ಮೀರ ಮತ್ತು ಲಡಾಖ್‌ನಲ್ಲಿ ಇಂದು ಚದುರಿದ ಹಿಮ ಅಥವಾ ಮಳೆಯನ್ನು ನಿರೀಕ್ಷಿಸಲಾಗಿದೆ.

ಅರುಣಾಚಲ ಪ್ರದೇಶ, ಸಿಕ್ಕಿಂ, ಉತ್ತರಾಖಂಡ, ಹಿಮಾಚಲ ಪ್ರದೇಶ, ಜಮ್ಮು-ಕಾಶ್ಮೀರ, ಲಡಾಖ್‌ನಲ್ಲಿ ಹಿಮಪಾತ ಅಥವಾ ಮಳೆಯ ಮುನ್ಸೂಚನೆ ಇದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಪಶ್ಚಿಮ ಬಂಗಾಳ, ಅಸ್ಸಾಂ, ಹರಿಯಾಣ, ಚಂಡೀಗಢ, ದೆಹಲಿ, ಪಂಜಾಬ್ ಮತ್ತು ರಾಜಸ್ಥಾನಗಳಲ್ಲಿ ಮಳೆಯಾಗಬಹುದು. ಬಿಹಾರ, ಒಡಿಶಾ, ಅಸ್ಸಾಂ, ಮೇಘಾಲಯ ಮತ್ತು ತ್ರಿಪುರಾದಲ್ಲಿ ಮುಂಜಾನೆ ದಟ್ಟವಾದ ಮಂಜು ಕವಿಯುವ ಸಾಧ್ಯತೆಯಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್