AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather Today: ಕರ್ನಾಟಕದಲ್ಲಿ ಹೆಚ್ಚುತ್ತಲೇ ಇದೆ ಶೀತ ಗಾಳಿ; ಬೆಂಗಳೂರಿನ ಹವಾಮಾನ ಹೀಗಿದೆ

Bengaluru Weather: ಬೆಂಗಳೂರು, ಮಲೆನಾಡು ಭಾಗಗಳಲ್ಲಿ ವಿಪರೀತ ಚಳಿ ಶುರುವಾಗಿದ್ದು, ಇಂದು ಕೂಡ ಬೆಂಗಳೂರಿನಲ್ಲಿ ದಟ್ಟ ಮಂಜು ಕವಿಯಲಿದೆ.

Karnataka Weather Today: ಕರ್ನಾಟಕದಲ್ಲಿ ಹೆಚ್ಚುತ್ತಲೇ ಇದೆ ಶೀತ ಗಾಳಿ; ಬೆಂಗಳೂರಿನ ಹವಾಮಾನ ಹೀಗಿದೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jan 13, 2023 | 5:54 AM

Share

ಬೆಂಗಳೂರು: ಉತ್ತರ ಕರ್ನಾಟಕದಲ್ಲಿ ಚಳಿ ಹೆಚ್ಚಾಗುತ್ತಲೇ ಇದೆ. ಕಳೆದ ಒಂದು ವಾರದಿಂದ ಕರ್ನಾಟಕದಲ್ಲಿ (Karnataka Weather Today) ತಾಪಮಾನ ಕುಸಿತವಾಗುತ್ತಿದೆ. ಬೆಂಗಳೂರಿನಲ್ಲಿ ಕೂಡ ಶೀತ ಅಲೆ (Cold Wave) ಹೆಚ್ಚಾಗಿದ್ದು, 4 ವರ್ಷಗಳ ಬಳಿಕ ಕನಿಷ್ಠ ತಾಪಮಾನ ದಾಖಲಾಗಿದೆ. ಬೆಂಗಳೂರಿನಲ್ಲಿ ಬುಧವಾರ 13 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿತ್ತು. ಇಂದು ಕೂಡ ಬೆಂಗಳೂರಿನಲ್ಲಿ (Bengaluru Weather) ದಟ್ಟವಾದ ಮಂಜು ಆವರಿಸುವ ನಿರೀಕ್ಷೆಯಿದೆ.

ಉತ್ತರ ಕರ್ನಾಟಕದ ಬಾಗಲಕೋಟೆ, ಬೀದರ್, ಬಾಗಲಕೋಟೆ, ವಿಜಯಪುರದಲ್ಲಿ ಭಾರೀ ಚಳಿ ಶುರುವಾಗಿದೆ. ಶೀತ ಮಾರುತಗಳು ಅಪ್ಪಳಿಸುವುದರಿಂದ ಈ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಉತ್ತರ ಭಾರತದಿಂದ ದಕ್ಷಿಣ ಭಾರತದ ಕಡೆಗೆ ಶೀತ ಗಾಳಿ ಬೀಸಲಾರಂಭಿಸಿದೆ. ಇದರಿಂದ ಕರ್ನಾಟಕದಲ್ಲಿ ಚಳಿ ವಿಪರೀತ ಹೆಚ್ಚಾಗಿದೆ.

ಇದನ್ನೂ ಓದಿ: Spicy Ghee Recipe: ಚಳಿಗಾಲದ ಸೋಂಕಿನಿಂದ ಕಾಪಾಡಲು ತುಪ್ಪವನ್ನು ಈ ರೀತಿಯಾಗಿ ಬಳಸಿ

ಬೆಂಗಳೂರು, ಮಲೆನಾಡು ಭಾಗಗಳಲ್ಲಿ ವಿಪರೀತ ಚಳಿ ಶುರುವಾಗಿದ್ದು, ಇಂದು ಕೂಡ ಬೆಂಗಳೂರಿನಲ್ಲಿ ದಟ್ಟ ಮಂಜು ಕವಿಯಲಿದೆ. ಇಂದು ಉತ್ತರ ಕರ್ನಾಟಕದಲ್ಲಿ ಕೂಡ ಚಳಿ ಗಾಳಿಯ ಅಲೆ ಇರಲಿದೆ. ಇಂದಿನಿಂದ ಮೂರ್ನಾಲ್ಕು ದಿನಗಳ ಕಾಲ ರಾಜ್ಯಾದ್ಯಂತ ಚಳಿ ವಾತಾವರಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ಉತ್ತರ ಕರ್ನಾಟಕದಲ್ಲಿ ಚಳಿ ಹೆಚ್ಚಾಗಿದೆ. ಇಂದು ಬೀದರ್, ವಿಜಯಪುರ, ಬಾಗಲಕೋಟೆ, ರಾಯಚೂರು ಜಿಲ್ಲೆಗಳಲ್ಲಿ ಶೀತ ಅಲೆಯ ಮುನ್ಸೂಚನೆ ನೀಡಲಾಗಿದೆ. ರಾಜ್ಯಾದ್ಯಂತ ಶೀತ ಅಲೆ ಹೆಚ್ಚಾಗಿರುವುದರಿಂದ ಕನಿಷ್ಠ ಮೂರು ಪದರಗಳ ಬಟ್ಟೆಗಳನ್ನು ಧರಿಸಬೇಕು, ಸಾಧ್ಯವಾದಾಗ ಮನೆಯೊಳಗೇ ಉಳಿಯಬೇಕು, ದೇಹವನ್ನು ಪೂರ್ತಿಯಾಗಿ ಕವರ್ ಮಾಡಿಕೊಳ್ಳಬೇಕು ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಇದನ್ನೂ ಓದಿ: Karnataka Weather Today: ಚಳಿಗೆ ಬೆಂಗಳೂರು ಗಡಗಡ; ಕೆಲವು ಜಿಲ್ಲೆಗಳಲ್ಲಿ ಇಂದು ಕೂಡ ಶೀತ ಅಲೆ

ಈ ಚಳಿ ಗಾಳಿ ಇತರ ಆರೋಗ್ಯ ಸಮಸ್ಯೆಗಳಾದ ಮೂಗು ಸೋರುವಿಕೆ, ಅಸ್ತಮಾ ಹದಗೆಡುವುದು, ಜ್ವರದ ಲಕ್ಷಣಗಳು ಮತ್ತು ಚರ್ಮದ ತುರಿಕೆ ಪರಿಸ್ಥಿತಿಗಳಿಗೆ ಕಾರಣವಾಗಬಹುದು. ಶೀತ ಅಲೆಯಿಂದ ಶಿಶುಗಳು, ಗರ್ಭಿಣಿ ಮಹಿಳೆ, ದೀರ್ಘಕಾಲದ ಕಾಯಿಲೆಗಳಿಂದ ಬಳಲುತ್ತಿರುವ ವೃದ್ಧರು ಮುಂತಾದವರಿಗೆ ಹೆಚ್ಚಿನ ಸಮಸ್ಯೆ ಉಂಟಾಗಬಹುದು ಎಂದು ಎಚ್ಚರಿಕೆ ನೀಡಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ
ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ
ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ
ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!
ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!
ಮಧ್ಯರಾತ್ರಿ ಪಟಾಕಿ ಹೊಡೆದ ಆರೋಪ: ರಮ್ಯಾಗೆ ಫನ್ ವರ್ಲ್ಡ್ ಪ್ರತಿಕ್ರಿಯೆ
ಮಧ್ಯರಾತ್ರಿ ಪಟಾಕಿ ಹೊಡೆದ ಆರೋಪ: ರಮ್ಯಾಗೆ ಫನ್ ವರ್ಲ್ಡ್ ಪ್ರತಿಕ್ರಿಯೆ
‘ಪ್ರೇಮದ ಊರಲಿ’ ಸಿನಿಮಾ ನೋಡಲು ಬಂದ ಮಹಿಳೆಯರ ಜಗಳ: ವಿಡಿಯೋ
‘ಪ್ರೇಮದ ಊರಲಿ’ ಸಿನಿಮಾ ನೋಡಲು ಬಂದ ಮಹಿಳೆಯರ ಜಗಳ: ವಿಡಿಯೋ
'ಪ್ರೇಮದ ಊರಲಿ' ಕ್ರೇಜ್: ಟಿಕೆಟ್​​​ಗಾಗಿ ಪರಸ್ಪರ ಬಡಿದಾಡಿಕೊಂಡ ಮಹಿಳೆಯರು!
'ಪ್ರೇಮದ ಊರಲಿ' ಕ್ರೇಜ್: ಟಿಕೆಟ್​​​ಗಾಗಿ ಪರಸ್ಪರ ಬಡಿದಾಡಿಕೊಂಡ ಮಹಿಳೆಯರು!