AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather: ಹವಾಮಾನ ವರದಿ – ಕರ್ನಾಟಕದಲ್ಲಿ ಇಂದು ಸಂಜೆ ವೇಳೆಗೆ ಬಿರುಸು ಮಳೆ ಸಾಧ್ಯತೆ; ಹಲವೆಡೆ ಮೋಡ ಕವಿದ ವಾತಾವರಣ

ಮಲೆನಾಡು ಭಾಗದಲ್ಲಿ ಮೋಡ ಕವಿದಿರುವ ಕಾರಣ ಮಧ್ಯಾಹ್ನದ ವೇಳೆಗೆ ತುಸು ಮಳೆ ಸುರಿಯಬಹುದೆಂಬ ನಿರೀಕ್ಷೆ ಇದೆ. ಇನ್ನು ಬೆಂಗಳೂರಿಗರಿಗೂ ಇಂದು ವರುಣ ದರ್ಶನವಾಗುವ ಸಂಭವವಿದ್ದು, ಉಳಿದಂತೆ ಬಹುತೇಕ ಕಡೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ.

Karnataka Weather: ಹವಾಮಾನ ವರದಿ - ಕರ್ನಾಟಕದಲ್ಲಿ ಇಂದು ಸಂಜೆ ವೇಳೆಗೆ ಬಿರುಸು ಮಳೆ ಸಾಧ್ಯತೆ; ಹಲವೆಡೆ ಮೋಡ ಕವಿದ ವಾತಾವರಣ
ಕರ್ನಾಟಕ ರಾಜ್ಯ ಹವಮಾನ ವರದಿ
Skanda
|

Updated on: May 20, 2021 | 8:54 AM

Share

ಬೆಂಗಳೂರು: ಕರ್ನಾಟಕದ ಕೆಲ ಜಿಲ್ಲೆಗಳ ವಾತಾವರಣ ಕಳೆದ ಒಂದು ವಾರದಿಂದ ಮಳೆಗಾಲದಂತಾಗಿದ್ದು, ಮೇ ತಿಂಗಳ ಬಿಸಿಲ ಧಗೆಗೆ ಮಳೆ ತಂಪೆರೆದಿದೆ. ತೌಕ್ತೆ ಚಂಡಮಾರುತದ ಪರಿಣಾಮ ಕರಾವಳಿ, ಮಲೆನಾಡು ಸೇರಿದಂತೆ ಕೆಲ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದ್ದು, ಇಂದು ಕೂಡ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ವಾತಾವರಣ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆಯ ವರದಿಗಳು ತಿಳಿಸಿವೆ. ಮಲೆನಾಡು ಭಾಗದಲ್ಲಿ ಮೋಡ ಕವಿದಿರುವ ಕಾರಣ ಮಧ್ಯಾಹ್ನದ ವೇಳೆಗೆ ತುಸು ಮಳೆ ಸುರಿಯಬಹುದೆಂಬ ನಿರೀಕ್ಷೆ ಇದೆ. ಇನ್ನು ಬೆಂಗಳೂರಿಗರಿಗೂ ಇಂದು ವರುಣ ದರ್ಶನವಾಗುವ ಸಂಭವವಿದ್ದು, ಉಳಿದಂತೆ ಬಹುತೇಕ ಕಡೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ.

ಉತ್ತರ ಕರ್ನಾಟಕ ಭಾಗದಲ್ಲಿ ಮಧ್ಯಾಹ್ನದ ಹೊತ್ತಿನಲ್ಲಿ ಬಿಸಿಲಿನ ತಾಪ ಇರಲಿದ್ದು, ಸಂಜೆ ವೇಳೆಗೆ ತಂಪು ವಾತಾವರಣವಿರಲಿದೆ. ಯಾದಗಿರಿ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 35 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್, ಕಲಬುರಗಿ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 36 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ವರದಿಗಳು ತಿಳಿಸಿವೆ.

ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ಮಡಿಕೇರಿಯಲ್ಲಿ ಗರಿಷ್ಠ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ 18 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್, ಶಿವಮೊಗ್ಗದಲ್ಲಿ ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್, ಮೈಸೂರಿನಲ್ಲಿ ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ಉಳಿದ ನಗರಗಳ ಗರಿಷ್ಠ ಹಾಗೂ ಕನಿಷ್ಠ ಉಷ್ಣಾಂಶ ಮಾಹಿತಿ ಮಂಗಳೂರು: ಗರಿಷ್ಠ30 ಡಿಗ್ರಿ ಸೆಲ್ಸಿಯಸ್, ಕನಿಷ್ಠ 25 ಡಿಗ್ರಿ ಸೆಲ್ಸಿಯಸ್ ಉಡುಪಿ: ಗರಿಷ್ಠ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ 25 ಡಿಗ್ರಿ ಸೆಲ್ಸಿಯಸ್ ಕಾರವಾರ: ಗರಿಷ್ಠ30 ಡಿಗ್ರಿ ಸೆಲ್ಸಿಯಸ್, ಕನಿಷ್ಠ 26 ಡಿಗ್ರಿ ಸೆಲ್ಸಿಯಸ್ ಬೆಳಗಾವಿ: ಗರಿಷ್ಠ28 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ಮಂಡ್ಯ: ಗರಿಷ್ಠ31 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ಹಾಸನ: ಗರಿಷ್ಠ28 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ರಾಮನಗರ: ಗರಿಷ್ಠ24 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ಕೋಲಾರ: ಗರಿಷ್ಠ31 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತುಮಕೂರು: ಗರಿಷ್ಠ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ಕೊಪ್ಪಳ: ಗರಿಷ್ಠ32 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ವಿಜಯಪುರ: ಗರಿಷ್ಠ29 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ಬೀದರ್: ಗರಿಷ್ಠ 34 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ರಾಯಚೂರು: ಗರಿಷ್ಠ36 ಡಿಗ್ರಿ ಸೆಲ್ಸಿಯಸ್, ಕನಿಷ್ಠ 25 ಡಿಗ್ರಿ ಸೆಲ್ಸಿಯಸ್ ಬಾಗಲಕೋಟೆ: ಗರಿಷ್ಠ33 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ಚಾಮರಾಜನಗರ: ಗರಿಷ್ಠ30 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ದಾವಣಗೆರೆ: ಗರಿಷ್ಠ32 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ಚಿತ್ರದುರ್ಗ: ಗರಿಷ್ಠ32 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ಹಾವೇರಿ: ಗರಿಷ್ಠ31 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ಗದಗ: ಗರಿಷ್ಠ31 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ಚಿಕ್ಕಬಳ್ಳಾಪುರ: ಗರಿಷ್ಠ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್

ಇದನ್ನೂ ಓದಿ: Monsoon 2021: ಅವಧಿಗೂ ಮುನ್ನವೇ ಮುಂಗಾರು ಪ್ರವೇಶ; ಚಂಡಮಾರುತದ ಬೆನ್ನಲ್ಲೇ ಮಳೆಗಾಲ ಶುರುವಾಗುವ ಸಾಧ್ಯತೆ 

Cyclone Yaas ಮೇ 25ರ ವೇಳೆಗೆ ರೂಪುಗೊಳ್ಳಲಿರುವ ಯಾಸ್ ಚಂಡಮಾರುತ ಪಶ್ಚಿಮ ಬಂಗಾಳ, ಒಡಿಶಾದತ್ತ ಸಾಗುವ ಸಾಧ್ಯತೆ: ಭಾರತೀಯ ಹವಾಮಾನ ಇಲಾಖೆ

‘ಎಕ್ಕ’ ಸಿನಿಮಾಕ್ಕೂ ಅಪ್ಪುವಿನ ‘ಜಾಕಿ’ ಸಿನಿಮಾಕ್ಕೂ ಲಿಂಕ್ ಏನು?
‘ಎಕ್ಕ’ ಸಿನಿಮಾಕ್ಕೂ ಅಪ್ಪುವಿನ ‘ಜಾಕಿ’ ಸಿನಿಮಾಕ್ಕೂ ಲಿಂಕ್ ಏನು?
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
Video: ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ ಕಾರು ಚಲಾಯಿಸಿದ ವ್ಯಕ್ತಿ
Video: ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ ಕಾರು ಚಲಾಯಿಸಿದ ವ್ಯಕ್ತಿ
ಇಡೀ ಕುಟುಂಬವನ್ನು ಕಳೆದುಕೊಂಡು ಅನಾಥವಾದ 11ತಿಂಗಳ ಮಗು
ಇಡೀ ಕುಟುಂಬವನ್ನು ಕಳೆದುಕೊಂಡು ಅನಾಥವಾದ 11ತಿಂಗಳ ಮಗು
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ
ರಶ್ಮಿಕಾ ಮಂದಣ್ಣ ತಪ್ಪು ಮಾತಾಡಿದ್ದಾರೆ, ಕ್ಷಮಿಸಿ ಬಿಡೋಣ: ನಟಿ ಹರ್ಷಿಕಾ
ರಶ್ಮಿಕಾ ಮಂದಣ್ಣ ತಪ್ಪು ಮಾತಾಡಿದ್ದಾರೆ, ಕ್ಷಮಿಸಿ ಬಿಡೋಣ: ನಟಿ ಹರ್ಷಿಕಾ