Karnataka Weather: ಹವಾಮಾನ ವರದಿ – ಕರ್ನಾಟಕದಲ್ಲಿ ಇಂದು ಸಂಜೆ ವೇಳೆಗೆ ಬಿರುಸು ಮಳೆ ಸಾಧ್ಯತೆ; ಹಲವೆಡೆ ಮೋಡ ಕವಿದ ವಾತಾವರಣ

|

Updated on: May 20, 2021 | 8:54 AM

ಮಲೆನಾಡು ಭಾಗದಲ್ಲಿ ಮೋಡ ಕವಿದಿರುವ ಕಾರಣ ಮಧ್ಯಾಹ್ನದ ವೇಳೆಗೆ ತುಸು ಮಳೆ ಸುರಿಯಬಹುದೆಂಬ ನಿರೀಕ್ಷೆ ಇದೆ. ಇನ್ನು ಬೆಂಗಳೂರಿಗರಿಗೂ ಇಂದು ವರುಣ ದರ್ಶನವಾಗುವ ಸಂಭವವಿದ್ದು, ಉಳಿದಂತೆ ಬಹುತೇಕ ಕಡೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ.

Karnataka Weather: ಹವಾಮಾನ ವರದಿ - ಕರ್ನಾಟಕದಲ್ಲಿ ಇಂದು ಸಂಜೆ ವೇಳೆಗೆ ಬಿರುಸು ಮಳೆ ಸಾಧ್ಯತೆ; ಹಲವೆಡೆ ಮೋಡ ಕವಿದ ವಾತಾವರಣ
ಕರ್ನಾಟಕ ರಾಜ್ಯ ಹವಮಾನ ವರದಿ
Follow us on

ಬೆಂಗಳೂರು: ಕರ್ನಾಟಕದ ಕೆಲ ಜಿಲ್ಲೆಗಳ ವಾತಾವರಣ ಕಳೆದ ಒಂದು ವಾರದಿಂದ ಮಳೆಗಾಲದಂತಾಗಿದ್ದು, ಮೇ ತಿಂಗಳ ಬಿಸಿಲ ಧಗೆಗೆ ಮಳೆ ತಂಪೆರೆದಿದೆ. ತೌಕ್ತೆ ಚಂಡಮಾರುತದ ಪರಿಣಾಮ ಕರಾವಳಿ, ಮಲೆನಾಡು ಸೇರಿದಂತೆ ಕೆಲ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದ್ದು, ಇಂದು ಕೂಡ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ವಾತಾವರಣ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆಯ ವರದಿಗಳು ತಿಳಿಸಿವೆ. ಮಲೆನಾಡು ಭಾಗದಲ್ಲಿ ಮೋಡ ಕವಿದಿರುವ ಕಾರಣ ಮಧ್ಯಾಹ್ನದ ವೇಳೆಗೆ ತುಸು ಮಳೆ ಸುರಿಯಬಹುದೆಂಬ ನಿರೀಕ್ಷೆ ಇದೆ. ಇನ್ನು ಬೆಂಗಳೂರಿಗರಿಗೂ ಇಂದು ವರುಣ ದರ್ಶನವಾಗುವ ಸಂಭವವಿದ್ದು, ಉಳಿದಂತೆ ಬಹುತೇಕ ಕಡೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ.

ಉತ್ತರ ಕರ್ನಾಟಕ ಭಾಗದಲ್ಲಿ ಮಧ್ಯಾಹ್ನದ ಹೊತ್ತಿನಲ್ಲಿ ಬಿಸಿಲಿನ ತಾಪ ಇರಲಿದ್ದು, ಸಂಜೆ ವೇಳೆಗೆ ತಂಪು ವಾತಾವರಣವಿರಲಿದೆ. ಯಾದಗಿರಿ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 35 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್, ಕಲಬುರಗಿ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 36 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ವರದಿಗಳು ತಿಳಿಸಿವೆ.

ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ಮಡಿಕೇರಿಯಲ್ಲಿ ಗರಿಷ್ಠ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ 18 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್, ಶಿವಮೊಗ್ಗದಲ್ಲಿ ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್, ಮೈಸೂರಿನಲ್ಲಿ ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ಉಳಿದ ನಗರಗಳ ಗರಿಷ್ಠ ಹಾಗೂ ಕನಿಷ್ಠ ಉಷ್ಣಾಂಶ ಮಾಹಿತಿ
ಮಂಗಳೂರು: ಗರಿಷ್ಠ30 ಡಿಗ್ರಿ ಸೆಲ್ಸಿಯಸ್, ಕನಿಷ್ಠ 25 ಡಿಗ್ರಿ ಸೆಲ್ಸಿಯಸ್
ಉಡುಪಿ: ಗರಿಷ್ಠ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ 25 ಡಿಗ್ರಿ ಸೆಲ್ಸಿಯಸ್
ಕಾರವಾರ: ಗರಿಷ್ಠ30 ಡಿಗ್ರಿ ಸೆಲ್ಸಿಯಸ್, ಕನಿಷ್ಠ 26 ಡಿಗ್ರಿ ಸೆಲ್ಸಿಯಸ್
ಬೆಳಗಾವಿ: ಗರಿಷ್ಠ28 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್
ಮಂಡ್ಯ: ಗರಿಷ್ಠ31 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್
ಹಾಸನ: ಗರಿಷ್ಠ28 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್
ರಾಮನಗರ: ಗರಿಷ್ಠ24 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್
ಕೋಲಾರ: ಗರಿಷ್ಠ31 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್
ತುಮಕೂರು: ಗರಿಷ್ಠ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್
ಕೊಪ್ಪಳ: ಗರಿಷ್ಠ32 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್
ವಿಜಯಪುರ: ಗರಿಷ್ಠ29 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್
ಬೀದರ್: ಗರಿಷ್ಠ 34 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್
ರಾಯಚೂರು: ಗರಿಷ್ಠ36 ಡಿಗ್ರಿ ಸೆಲ್ಸಿಯಸ್, ಕನಿಷ್ಠ 25 ಡಿಗ್ರಿ ಸೆಲ್ಸಿಯಸ್
ಬಾಗಲಕೋಟೆ: ಗರಿಷ್ಠ33 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್
ಚಾಮರಾಜನಗರ: ಗರಿಷ್ಠ30 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್
ದಾವಣಗೆರೆ: ಗರಿಷ್ಠ32 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್
ಚಿತ್ರದುರ್ಗ: ಗರಿಷ್ಠ32 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್
ಹಾವೇರಿ: ಗರಿಷ್ಠ31 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್
ಗದಗ: ಗರಿಷ್ಠ31 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್
ಚಿಕ್ಕಬಳ್ಳಾಪುರ: ಗರಿಷ್ಠ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್

ಇದನ್ನೂ ಓದಿ:
Monsoon 2021: ಅವಧಿಗೂ ಮುನ್ನವೇ ಮುಂಗಾರು ಪ್ರವೇಶ; ಚಂಡಮಾರುತದ ಬೆನ್ನಲ್ಲೇ ಮಳೆಗಾಲ ಶುರುವಾಗುವ ಸಾಧ್ಯತೆ 

Cyclone Yaas ಮೇ 25ರ ವೇಳೆಗೆ ರೂಪುಗೊಳ್ಳಲಿರುವ ಯಾಸ್ ಚಂಡಮಾರುತ ಪಶ್ಚಿಮ ಬಂಗಾಳ, ಒಡಿಶಾದತ್ತ ಸಾಗುವ ಸಾಧ್ಯತೆ: ಭಾರತೀಯ ಹವಾಮಾನ ಇಲಾಖೆ